Fighter Vivek Death: ‘ಲವ್​ ಯೂ ರಚ್ಚು’ ಚಿತ್ರದ ನಿರ್ದೇಶಕ ಸೇರಿದಂತೆ ಮೂವರಿಗೆ ಹದಿನಾಲ್ಕು ದಿನಗಳ ನ್ಯಾಯಾಂಗ ಬಂಧನ

Fighter Vivek Death: ‘ಲವ್​ ಯೂ ರಚ್ಚು’ ಚಿತ್ರದ ನಿರ್ದೇಶಕ ಸೇರಿದಂತೆ ಮೂವರಿಗೆ ಹದಿನಾಲ್ಕು ದಿನಗಳ ನ್ಯಾಯಾಂಗ ಬಂಧನ
ಫೈಟರ್ ವಿವೇಕ್

‘ಲವ್ ಯೂ ರಚ್ಚು’ ಚಿತ್ರದ ಚಿತ್ರೀಕರಣದ ವೇಳೆ ಫೈಟರ್ ಮೃತಪಟ್ಟ ಘಟನೆಗೆ ಸಂಬಂಧಪಟ್ಟಂತೆ ಪೊಲೀಸರು ಚಿತ್ರದ ನಿರ್ದೇಶಕ ಸೇರಿದಂತೆ ಮೂವರನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದು, ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಲಾಗಿದೆ.

TV9kannada Web Team

| Edited By: shivaprasad.hs

Aug 10, 2021 | 12:44 PM


‘ಲವ್​​ ಯೂ ರಚ್ಚು’ ಶೂಟಿಂಗ್ ವೇಳೆ ಫೈಟರ್​​ ಸಾವು ಕೇಸ್​ಗೆ ಸಂಬಂಧಪಟ್ಟಂತೆ ಮೂವರು ಆರೋಪಿಗಳಿಗೆ ಆಗಸ್ಟ್ 24ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನಿರ್ದೇಶಕ ಶಂಕರಯ್ಯ, ಕ್ರೇನ್ ಚಾಲಕ ಮಹದೇವ್, ಫೈಟ್ ಮಾಸ್ಟರ್ ವಿನೋದ್‌ಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಜಡ್ಜ್ ಆದೇಶ ನೀಡಿದ್ದಾರೆ. ರಾಮನಗರ ಹೆಚ್ಚುವರಿ ಸಿವಿಲ್ ಕೋರ್ಟ್​​ನ ನ್ಯಾಯಾಧೀಶೆ ಅನುಪಮಾ ಲಕ್ಷ್ಮೀ ಈ ಆದೇಶವನ್ನು ನೀಡಿದ್ದಾರೆ. ನ್ಯಾಯಾಂಗ ಬಂಧನದ ಹಿನ್ನೆಲೆಯಲ್ಲಿ ಮೂವರನ್ನು ರಾಮನಗರ ಜಿಲ್ಲಾ ಕಾರಾಗೃಹಕ್ಕೆ ಪೊಲೀಸರು ರವಾನಿಸಿದ್ದಾರೆ.

‘ಲವ್​​ ಯೂ ರಚ್ಚು’ ಶೂಟಿಂಗ್ ವೇಳೆ ಫೈಟರ್​​ ಸಾವು ಕೇಸ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳನ್ನು ಕೋರ್ಟ್‌ಗೆ ಪೊಲೀಸರು ಹಾಜರುಪಡಿಸಿದ್ದರು. ನಿರ್ದೇಶಕ ಶಂಕರಯ್ಯ, ಸಾಹಸ ನಿರ್ದೇಶಕ ವಿನೋದ್, ಕ್ರೇನ್ ಆಪರೇಟರ್ ಮಹದೇವ್ ಅವರನ್ನು ರಾಮನಗರ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು.

ಆರೋಪಿಗಳನ್ನು ನ್ಯಾಯಾಲಯಕ್ಕೆ ಕರೆದೊಯ್ಯುತ್ತಿರುವ ಪೊಲೀಸರು:

ಈ ಘಟನೆಯ ಕುರಿತಂತೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಇಂತಹ ಹಲವು ಘಟನೆಗಳು ಬೆಳಕಿಗೆ ಬರುತ್ತಿದ್ದು, ಚಿತ್ರೀಕರಣ ವೇಳೆ ಕೆಲವರು ನಿಯಮಗಳನ್ನು ಪಾಲಿಸುತ್ತಿಲ್ಲ. ಹೀಗಾಗಿ ಮತ್ತಷ್ಟು ಕಠಿಣ ನಿಯಮಗಳನ್ನು ನಾಳೆ ಅಥವಾ ನಾಡಿದ್ದು ಜಾರಿ ಮಾಡಿ, ಆದೇಶವನ್ನು ಹೊರಡಿಸುತ್ತೇವೆ ಎಂದು ತಿಳಿಸಿದ್ದಾರೆ.

‘ಲವ್​ ಯೂ ರಚ್ಚು’ ಸಿನಿಮಾದಲ್ಲಿ ಅಜಯ್​ ರಾವ್​ ಮುಖ್ಯಭೂಮಿಕೆ ನಿರ್ವಹಿಸುತ್ತಿದ್ದು, ರಚಿತಾ ರಾಮ್ ಚಿತ್ರದ ನಾಯಕಿಯಾಗಿದ್ದಾರೆ. ಶಂಕರ್​ ರಾಜ್​ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದು, ಗುರು ದೇಶಪಾಂಡೆ ಚಿತ್ರದ ನಿರ್ಮಾಪಕರಾಗಿದ್ದಾರೆ. ರಾಮನಗರ ತಾಲೂಕಿನ ಜೋಗನದೊಡ್ಡಿ ಬಳಿ ‘ಲವ್​​ ಯೂ ರಚ್ಚು’ ಚಿತ್ರದ ಶೂಟಿಂಗ್​ ನಡೆಯುತ್ತಿದ್ದಾಗ, ರೋಪ್​ ಎಳೆಯುವ ಸಂದರ್ಭದಲ್ಲಿ ಫೈಟರ್​ ವಿವೇಕ್​ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.​ ವಿದ್ಯುತ್​ ತಂತಿಗೆ ರೋಪ್ ಸ್ಪರ್ಶಿಸಿದ್ದು ವಿವೇಕ್​ ಸಾವಿಗೆ ಕಾರಣ ಎನ್ನಲಾಗಿದೆ.

ಇದನ್ನೂ ಓದಿ:

ಫೈಟರ್​​ ಸಾವು ಪ್ರಕರಣ: ನಿರ್ಮಾಪಕ ಗುರು ದೇಶಪಾಂಡೆ ಪರಾರಿ; ಐವರ ವಿರುದ್ಧ ಎಫ್​ಐಆರ್​

ಚಿತ್ರೀಕರಣ ವೇಳೆ ನಿಯಮಗಳನ್ನು ಪಾಲಿಸುತ್ತಿಲ್ಲ, ಕಠಿಣ ನಿಯಮಗಳನ್ನು ಜಾರಿ ಮಾಡಿ ಶೀಘ್ರದಲ್ಲೇ ಆದೇಶ; ಸಿಎಂ ಬಸವರಾಜ ಬೊಮ್ಮಾಯಿ

Fighter Vivek Death: ಶೂಟಿಂಗ್ ವೇಳೆ ಫೈಟರ್​​ ಸಾವು; ಗಂಟೆಗಳೇ ಕಳೆದ್ರೂ ಆಸ್ಪತ್ರೆ ಬಳಿ ಬಾರದ ಚಿತ್ರತಂಡ

(Due to fighter death Director and other two crew member of Love You Rachchu Movie will be in Judicial Custody for 14 days)

Follow us on

Related Stories

Most Read Stories

Click on your DTH Provider to Add TV9 Kannada