ಆಸ್ಪತ್ರೆಗೆ ಅಲೆದು ಅಲೆದು ಚಿಕಿತ್ಸೆ ಸಿಗದೇ ಹೊಟ್ಟೆಯಲ್ಲಿದ್ದ ಮಗುವನ್ನ ಕಳೆದುಕೊಂಡ ತಾಯಿ

ಬೆಳಗಾವಿ:ಆಸ್ಪತ್ರೆಗೆ ಅಲೆದು ಅಲೆದು ಸರಿಯಾದ ಚಿಕಿತ್ಸೆ ಸಿಗದೇ ಗರ್ಭಿಣಿಯೊಬ್ಬರು ತಮ್ಮ ಹೊಟ್ಟೆಯಲ್ಲಿದ್ದ ಮಗುವನ್ನು ಕಳೆದುಕೊಂಡ ಹೃದಯ ವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತೆಲಸಂಗ ಗ್ರಾಮದಲ್ಲಿ ನಡೆದಿದೆ. ಹೆರಿಗೆ ನೋವಿನಿಂದ ಬಳಲುತ್ತಿದ್ದ ತೆಲಸಂಗ ಗ್ರಾಮದ ಗರ್ಭಿಣಿ ಮೊದಲು ತೆಲಸಂಗ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರಕ್ಕೆ ತೆರಳಿದ್ದಾರೆ. ಆದರೆ ಸಮುದಾಯ ಕೇಂದ್ರದ ವೈದ್ಯೆ ಗರ್ಭಿಣಿಯ ಸ್ಥಿತಿ ಗಂಭೀರವಾಗಿದ್ದರಿಂದ ಅಥಣಿಯ ತಾಲೂಕು ಆಸ್ಪತ್ರೆಗೆ ತೆರಳಲು ತಿಳಿಸಿದ್ದಾರೆ. ಇದರಿಂದ ಅಥಣಿಯ ತಾಲೂಕು ಆಸ್ಪತ್ರೆಗೆ ಬಂದ ಗರ್ಭಿಣಿಯನ್ನು ಚಿಕಿತ್ಸೆಗೆ ದಾಖಲಿಸಿಕೊಳ್ಳದ ಆಸ್ಪತ್ರೆಯ […]

ಆಸ್ಪತ್ರೆಗೆ ಅಲೆದು ಅಲೆದು ಚಿಕಿತ್ಸೆ ಸಿಗದೇ ಹೊಟ್ಟೆಯಲ್ಲಿದ್ದ ಮಗುವನ್ನ ಕಳೆದುಕೊಂಡ ತಾಯಿ
Edited By:

Updated on: Jul 22, 2020 | 8:26 PM

ಬೆಳಗಾವಿ:ಆಸ್ಪತ್ರೆಗೆ ಅಲೆದು ಅಲೆದು ಸರಿಯಾದ ಚಿಕಿತ್ಸೆ ಸಿಗದೇ ಗರ್ಭಿಣಿಯೊಬ್ಬರು ತಮ್ಮ ಹೊಟ್ಟೆಯಲ್ಲಿದ್ದ ಮಗುವನ್ನು ಕಳೆದುಕೊಂಡ ಹೃದಯ ವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತೆಲಸಂಗ ಗ್ರಾಮದಲ್ಲಿ ನಡೆದಿದೆ.

ಹೆರಿಗೆ ನೋವಿನಿಂದ ಬಳಲುತ್ತಿದ್ದ ತೆಲಸಂಗ ಗ್ರಾಮದ ಗರ್ಭಿಣಿ ಮೊದಲು ತೆಲಸಂಗ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರಕ್ಕೆ ತೆರಳಿದ್ದಾರೆ. ಆದರೆ ಸಮುದಾಯ ಕೇಂದ್ರದ ವೈದ್ಯೆ ಗರ್ಭಿಣಿಯ ಸ್ಥಿತಿ ಗಂಭೀರವಾಗಿದ್ದರಿಂದ ಅಥಣಿಯ ತಾಲೂಕು ಆಸ್ಪತ್ರೆಗೆ ತೆರಳಲು ತಿಳಿಸಿದ್ದಾರೆ.

ಇದರಿಂದ ಅಥಣಿಯ ತಾಲೂಕು ಆಸ್ಪತ್ರೆಗೆ ಬಂದ ಗರ್ಭಿಣಿಯನ್ನು ಚಿಕಿತ್ಸೆಗೆ ದಾಖಲಿಸಿಕೊಳ್ಳದ ಆಸ್ಪತ್ರೆಯ ವೈದ್ಯ ಔಷಧಿ ಕೊಟ್ಟು ಮನೆಗೆ ವಾಪಸ್ ಕಳಿಸಿದ್ದಾರೆ. ವೈದ್ಯನ ಮಾತು ಕೇಳಿ ಮತ್ತೆ ಗ್ರಾಮಕ್ಕೆ ಮರಳಿದ ಗರ್ಭಿಣಿಗೆ ಮತ್ತೆ ಹೊಟ್ಟೆನೋವು ಕಾಣಿಸಿಕೊಂಡಿದೆ. ಇದರಿಂದ ಗಾಬರಿಗೊಂಡ ಕುಟುಂಬಸ್ಥರು ಗರ್ಭಿಣಿಯನ್ನು ಮತ್ತೆ ಆಂಬುಲೆನ್ಸ್ ನಲ್ಲಿ ಆಸ್ಪತ್ರೆ ಕರೆದುಕೊಂಡು ಹೋಗಲಾಗಿದೆ.

ಆದರೆ ಆಸ್ಪತ್ರೆಗೆ ತಲುಪುವ ಮೊದಲೇ ದಾರಿ ಮಧ್ಯದಲ್ಲಿ ಗರ್ಭಿಣಿಗೆ ಹೆರಿಗೆಯಾಗಿದ್ದು ಮಗು ಹೊಟ್ಟೆಯಲ್ಲಿ ಸಾವನ್ನಪ್ಪಿದೆ. ಮಗು ಸಾವನ್ನಪ್ಪಲು ವೈದ್ಯಾಧಿಕಾರಿಗಳ ನಿರ್ಲಕ್ಷ್ಯವೇ ಕಾರಣವೆಂದು ಕುಟುಂಬಸ್ಥರು ವೈದ್ಯರಿಗೆ ಹಿಡಿಶಾಪ ಹಾಕುತ್ತಿದ್ದಾರೆ.

Published On - 6:29 pm, Tue, 21 July 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
Follow Us