ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸಿಗದೆ 7 ತಿಂಗಳ ಮಗು ಸಾವು
ರಾಮನಗರ: ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದ ಕಾರಣ 7 ತಿಂಗಳ ಹೆಣ್ಣು ಮಗುವೊಂದು ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಲೇದು ಪ್ರಾಣ ಬಿಟ್ಟ ಮನಕಲಕುವ ಘಟನೆ ಚನ್ನಪಟ್ಟಣದಲ್ಲಿ ನೆಡೆದಿದೆ. ಚನ್ನಪಟ್ಟಣ ನಗರದ ಪೇಟೆಚೇರಿ ನಿವಾಸಿ ಪ್ರದೀಪ್ ಅವರ 7 ತಿಂಗಳ ಹೆಣ್ಣು ಮಗುವಿಗೆ ಇಂದು ಬೆಳಿಗ್ಗೆ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದಿದೆ. ಕೂಡಲೇ ಮಗುವನ್ನ ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದರೆ ಆಸ್ಪತ್ರೆ ಸಿಬ್ಬಂದಿ ಮಗುವನ್ನು ತಾಲೂಕು ಆಸ್ಪತ್ರೆಗೆ ಕರೆದುಕೊಂಡು ಹೋಗವಂತೆ ತಿಳಿಸಿದ್ದಾರೆ. ತಕ್ಷಣವೇ ಮಗುವನ್ನ ಚನ್ನಪಟ್ಟಣದ ತಾಲೂಕು ಆಸ್ಪತ್ರೆಗೆ ಕರೆದುಕೊಂಡು […]
ರಾಮನಗರ: ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದ ಕಾರಣ 7 ತಿಂಗಳ ಹೆಣ್ಣು ಮಗುವೊಂದು ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಲೇದು ಪ್ರಾಣ ಬಿಟ್ಟ ಮನಕಲಕುವ ಘಟನೆ ಚನ್ನಪಟ್ಟಣದಲ್ಲಿ ನೆಡೆದಿದೆ.
ಚನ್ನಪಟ್ಟಣ ನಗರದ ಪೇಟೆಚೇರಿ ನಿವಾಸಿ ಪ್ರದೀಪ್ ಅವರ 7 ತಿಂಗಳ ಹೆಣ್ಣು ಮಗುವಿಗೆ ಇಂದು ಬೆಳಿಗ್ಗೆ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದಿದೆ. ಕೂಡಲೇ ಮಗುವನ್ನ ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದರೆ ಆಸ್ಪತ್ರೆ ಸಿಬ್ಬಂದಿ ಮಗುವನ್ನು ತಾಲೂಕು ಆಸ್ಪತ್ರೆಗೆ ಕರೆದುಕೊಂಡು ಹೋಗವಂತೆ ತಿಳಿಸಿದ್ದಾರೆ.
ತಕ್ಷಣವೇ ಮಗುವನ್ನ ಚನ್ನಪಟ್ಟಣದ ತಾಲೂಕು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ ಆದರೆ ಅಲ್ಲಿ ವೈದ್ಯರಿಲ್ಲ ಎಂದು ಹೇಳಿ ವಾಪಸ್ ಕಳುಹಿಸಲಾಗಿದೆ. ನಂತರ ಮಗುವನ್ನ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿ ಆಸ್ಪತ್ರೆ ಸಿಬ್ಬಂದಿ ಮಗುವಿನ ಸ್ಥಿತಿ ಗಂಭೀರವಾಗಿದೆ ಮಂಡ್ಯಕ್ಕೆ ಕರೆದುಕೊಂಡು ಹೋಗಿ ಎಂದು ಪೋಷಕರಿಗೆ ತಿಳಿಸಿದ್ದಾರೆ.
ಅಷ್ಟರಲ್ಲೆ ಆಸ್ಪತ್ರೆಗಳಿಗೆ ಅಲೆದಲೇದು ಸುಸ್ತಾಗಿದ್ದ ಮಗು ಮಂಡ್ಯಕ್ಕೆ ಕರೆದುಕೊಂಡು ಹೋಗುವಷ್ಟರಲ್ಲೇ ಪ್ರಾಣ ಬಿಟ್ಟಿದೆ. ತಾಲೂಕು ಆಸ್ಪತ್ರೆಯಲ್ಲಿಯೇ ಮೊದಲು ಸೂಕ್ತ ಚಿಕಿತ್ಸೆ ಸಿಕ್ಕಿದ್ದರೆ ಮಗು ಬದುಕುತ್ತಿತ್ತು ಎಂದು ಕುಟುಂಬಸ್ಥರು ತಮ್ಮ ಅಳಲು ತೋಡಿಕೊಂಡಿದ್ದಾರೆ.
Published On - 5:40 pm, Mon, 20 July 20