ಬೆಂಗಳೂರು: ಬೆಂಗಳೂರಿನಲ್ಲಿ ಕೊರೊನಾವನ್ನು ನಿಯಂತ್ರಣಕ್ಕೆ ತರಲು ಸರ್ಕಾರ ನಾನಾ ಸರ್ಕಸ್ಸುಗಳನ್ನು ಮಾಡುತ್ತಿದ್ದು, ಅದರ ಫಲವಾಗಿ ಪ್ರತಿ ಭಾನುವಾರದಂದು ಬೆಂಗಳೂರಿನಲ್ಲಿ ಕಟ್ಟುನಿಟ್ಟಿನ ಕರ್ಫ್ಯೂ ಜಾರಿ ಮಾಡಲಾಗಿದೆ.
ಇದರಿಂದಾಗಿ ವಾರಂತ್ಯದಲ್ಲಿ ಬೆಂಗಳೂರಿನಿಂದ ಊರಿನೆಡೆಗೆ ಹೋಗುವವರ ಸಂಖ್ಯೆ ಹೆಚ್ಚಾಗಿರುತ್ತದೆ. ಹೀಗಾಗಿ ನಾಳೆ ಭಾನುವಾರವಾಗಿದ್ದು ಬೆಂಗಳೂರಿನಲ್ಲಿ ಕರ್ಫ್ಯೂ ಜಾರಿಯಾಗುವುದರಿಂದ ನಾಳೆ ಊರಿಗೆ ತೆರಳಲು ಸಾಧ್ಯವಾಗದ ಕಾರಣ ಇಂದೆ ಬೆಂಗಳೂರನ್ನು ತೊರೆದು ತಮ್ಮೂರಿನತ್ತ ಜನ ಪ್ರಯಾಣ ಬೆಳೆಸುತ್ತಿದ್ದಾರೆ.
ಹೀಗಾಗಿ ರಾಷ್ಟ್ರೀಯ ಹೆದ್ದಾರಿ 4ರ ನವಯುಗ ಟೋಲ್ ಬಳಿ ಟ್ರಾಫಿಕ್ ಜಾಮ್ ಉಂಟಾಗಿದೆ. ಇದರಿಂದಾಗಿ ವಾಹನ ಸವಾರರು ಗಂಟೆಗಟ್ಟಲೆ ಟ್ರಾಫಿಕ್ ನಲ್ಲಿ ನಿಲ್ಲಬೇಕಾದ ಸಮಸ್ಯೆ ಎದುರಾಗಿದೆ.