ಚಿಕ್ಕಬಳ್ಳಾಪುರ: ನಿರುದ್ಯೋಗ ಸಮಸ್ಯೆಯಿಂದ ಬೇಸತ್ತು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರದ ಪೊಲೀಸ್ ಕ್ವಾರ್ಟರ್ಸ್ನಲ್ಲಿ ನಡೆದಿದೆ. ಮನೋಜ್ ಕುಮಾರ್(22) ಆತ್ಮಹತ್ಯೆಗೆ ಶರಣಾದ ಯುವಕನಾಗಿದ್ದಾನೆ. ಸಂಬಂಧಿಯೊಬ್ಬರ ಕ್ವಾರ್ಟರ್ಸ್ನಲ್ಲಿ ಉಳಿದುಕೊಂಡಿದ್ದ ಮನೋಜ್ ಕುಮಾರ್ ಬಿಎಸ್ಸಿ ಪದವಿ ಪಡೆದು ಕೆಲಸಕ್ಕಾಗಿ ಅಲೆಯುತ್ತಿದ್ದ. ಯಾವುದೇ ಕೆಲಸ ಸಿಗದೆ ಹಿನ್ನೆಲೆಯಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡ ಮನೋಜ್ ಕ್ವಾರ್ಟರ್ಸ್ನಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾನೆ. ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು ಸ್ಥಳಕ್ಕಾಗಮಿಸಿದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ […]
Follow us on
ಚಿಕ್ಕಬಳ್ಳಾಪುರ: ನಿರುದ್ಯೋಗ ಸಮಸ್ಯೆಯಿಂದ ಬೇಸತ್ತು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರದ ಪೊಲೀಸ್ ಕ್ವಾರ್ಟರ್ಸ್ನಲ್ಲಿ ನಡೆದಿದೆ.
ಮನೋಜ್ ಕುಮಾರ್(22) ಆತ್ಮಹತ್ಯೆಗೆ ಶರಣಾದ ಯುವಕನಾಗಿದ್ದಾನೆ. ಸಂಬಂಧಿಯೊಬ್ಬರ ಕ್ವಾರ್ಟರ್ಸ್ನಲ್ಲಿ ಉಳಿದುಕೊಂಡಿದ್ದ ಮನೋಜ್ ಕುಮಾರ್ ಬಿಎಸ್ಸಿ ಪದವಿ ಪಡೆದು ಕೆಲಸಕ್ಕಾಗಿ ಅಲೆಯುತ್ತಿದ್ದ. ಯಾವುದೇ ಕೆಲಸ ಸಿಗದೆ ಹಿನ್ನೆಲೆಯಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡ ಮನೋಜ್ ಕ್ವಾರ್ಟರ್ಸ್ನಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು ಸ್ಥಳಕ್ಕಾಗಮಿಸಿದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.