
ಶಿವಮೊಗ್ಗ: SSLC ಉತ್ತರಪತ್ರಿಕೆ ಮೌಲ್ಯಮಾಪನದ ವೇಳೆ ಶಿಕ್ಷಕ ಎಂ.ಎನ್.ಕುಮಾರ್(48)ಎಂವವರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಇಂದು ನಗರದಲ್ಲಿ ನೆಡೆದಿದೆ.
ಉತ್ತರಪತ್ರಿಕೆ ಮೌಲ್ಯಮಾಪನದ ವೇಳೆ ಶಿಕ್ಷಕ ಎಂ.ಎನ್.ಕುಮಾರ್(48)ರವರಿಗೆ ಹೃದಯಾಘಾತವಾಗಿದೆ. ಕೂಡಲೇ ಅವರನ್ನು ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆಂದು ಕರೆತರಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶಿಕ್ಷಕ ಆಸ್ಪತ್ರೆಯಲ್ಲೆ ಕೊನೆಯುಸಿರೆಳಿದಿದ್ದಾರೆ. ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಪ್ರಕರಣ ದಾಖಲಾಗಿದೆ..