AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

6 ಸಚಿವರು ಕೋರ್ಟ್​ಗೆ ಮೊರೆ: ಅನಾವಶ್ಯಕವಾಗಿ ಕೋರ್ಟ್​ಗೆ ಹೋಗುವುದು ಒಳ್ಳೆಯದಲ್ಲ -ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ

ಸಚಿವರು ಕೋರ್ಟ್​ಗೆ ಹೋಗಿದ್ದರಿಂದ ಸ್ವಲ್ಪ ಮಟ್ಟಿಗೆ ಮುಜುಗರವಾಗಿದೆ. ರಾಜಕೀಯ ಡೊಂಬರಾಟದಲ್ಲಿ ಸಿಡಿಗಳು ತನ್ನದೇ ಪ್ರಭಾವ ಬೀರುವುದನ್ನು ನೋಡುತ್ತಿದ್ದೇವೆ. ಟೆಕ್ನಾಲಜಿ ಸಾಕಷ್ಟು ಮುಂದುವರೆದಿದೆ. ಹೇಗೆ ಬೇಕಾದರೂ ಮ್ಯಾನಿಪ್ಯುಲೇಟ್ ಮಾಡಬಹುದು ಎಂದು ಡಿ.ವಿ.ಸದಾನಂದ ಗೌಡ ಹೇಳಿದರು.

6 ಸಚಿವರು ಕೋರ್ಟ್​ಗೆ ಮೊರೆ: ಅನಾವಶ್ಯಕವಾಗಿ ಕೋರ್ಟ್​ಗೆ ಹೋಗುವುದು ಒಳ್ಳೆಯದಲ್ಲ -ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ
D.V.ಸದಾನಂದ ಗೌಡ
Follow us
sandhya thejappa
| Updated By: ಸಾಧು ಶ್ರೀನಾಥ್​

Updated on: Mar 06, 2021 | 12:05 PM

ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ಸಂಪುಟದ 6 ಸಚಿವರು ಕೋರ್ಟ್ ಮೊರೆ ಹಿನ್ನೆಲೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಕೋರ್ಟ್​ಗೆ ಹೋಗಿ ಮತ್ತಷ್ಟು ಗೋಜಲಾಗಿಸುವುದು ಒಳ್ಳೆಯ ಬೆಳವಣಿಗೆಯಲ್ಲ. ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ಬಯಲಾದ ಹಿನ್ನೆಲೆ ಬಿಜೆಪಿ ಹೈಕಮಾಂಡ್ ಕೂಡಲೇ ರಾಜೀನಾಮೆ ಪಡೆದಿದೆ. ಈ ವೇಳೆ ಅನಾವಶ್ಯಕವಾಗಿ ಕೋರ್ಟ್​ಗೆ ಹೋಗುವುದು ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಸಚಿವರು ಕೋರ್ಟ್​ಗೆ ಹೋಗಿದ್ದರಿಂದ ಸ್ವಲ್ಪ ಮಟ್ಟಿಗೆ ಮುಜುಗರವಾಗಿದೆ. ರಾಜಕೀಯ ಡೊಂಬರಾಟದಲ್ಲಿ ಸಿಡಿಗಳು ತನ್ನದೇ ಪ್ರಭಾವ ಬೀರುವುದನ್ನು ನೋಡುತ್ತಿದ್ದೇವೆ. ಟೆಕ್ನಾಲಜಿ ಸಾಕಷ್ಟು ಮುಂದುವರೆದಿದೆ. ಹೇಗೆ ಬೇಕಾದರೂ ಮ್ಯಾನಿಪ್ಯುಲೇಟ್ ಮಾಡಬಹುದು. ಆದರೆ ಆಗಿದ್ದೆಲ್ಲವೂ ಮ್ಯಾನಿಪ್ಯುಲೇಟ್ ಎಂದು ಹೇಳುತ್ತಿಲ್ಲ. ತನಿಖೆ ತನ್ನದೇ ಕಾರ್ಯ ಮಾಡುತ್ತದೆ. ನೈತಿಕತೆಗೆ ಪ್ರಾಮುಖ್ಯತೆ ಕೊಡುವುದು ನಮ್ಮೆಲ್ಲರ ಜವಾಬ್ದಾರಿ. ನೈತಿಕತೆಗೆ ತೊಂದರೆ ಬಂದಾಗ ಸಾಮಾಜಿಕ ವ್ಯವಸ್ಥೆಯಲ್ಲಿ ಕೂಡಾ ಅಧಪತನದ ಅಂಚಿಗೆ ಹೋಗುತ್ತದೆ. ಇಂತಹ ವಿಚಾರ ಬಂದಾಗ ರಾಜಕೀಯ ಲಾಭ ಪಡೆಯುವುದರಿಂದ ಒಳ್ಳೆಯದಾಗುವುದಿಲ್ಲ. ಆಡಳಿತಕ್ಕೂ ಇದು ತೊಂದರೆ ಆಗುತ್ತದೆ ಎಂದು ಹೇಳಿದರು.

ಜಾರಕಿಹೊಳಿ ವಿಚಾರದಲ್ಲಿ ಕೇಂದ್ರದವರು ನಮ್ಮಲ್ಲಿ ಕೇಳಿದ್ದರು. ಮಾಧ್ಯಮ ವರದಿ ಆಧಾರಿತವಾಗಿ ನಾವು ವರದಿ ಕೊಟ್ಟಿದ್ದೇವೆ. ಸ್ವಾಭಾವಿಕವಾಗಿ ಇಂತಹ ಆರೋಪ ಬಂದಾಗ ತನಿಖೆಗೆ ಮಂತ್ರಿಗಳು ಸಹಕಾರ ನೀಡಬೇಕು. ವೈಯಕ್ತಿಕವಾಗಿ ಹಲವಾರು ಜನ ಅವರ ಭಾವನೆಗಳನ್ನು ಕೋರ್ಟ್​ನಲ್ಲಿ ವ್ಯಕ್ತಪಡಿಸಬಾರದು ಅಂತಾ ನಾವು ಮಧ್ಯಪ್ರವೇಶ ಮಾಡಲು ಆಗಲ್ಲ. ಪ್ರತಿಯೊಬ್ಬ ವ್ಯಕ್ತಿಗೂ ಕೂಡಾ ತನ್ನ ಭವಿಷ್ಯದ ಯೋಚನೆ ಇರುತ್ತದೆ. ಅದನ್ನು ನೋಡಿಕೊಂಡು ಅವರು ಹೆಜ್ಜೆ ಇಡುತ್ತಾರೆ. ಅದು ಅವರವರಿಗೆ ಬಿಟ್ಟಿದ್ದು. ಆದರೆ ಅನಾವಶ್ಯಕವಾಗಿ ಕೋರ್ಟ್​ಗೆ ಹೋಗುವುದು ಒಳ್ಳೆಯದಲ್ಲ ಎಂದು ಅಭಿಪ್ರಾಯಪಟ್ಟರು.

ಕೇರಳ ಮುಖ್ಯಮಂತ್ರಿ ವಿರುದ್ಧ ಸರಿತಾ ಆರೋಪ: ಪ್ರಕರಣದಲ್ಲಿ ಭಾಗಿಯಾದವರೇ ಮಾಹಿತಿ ಹೇಳಿದ್ದಾರೆ

ಕೇರಳ ಮುಖ್ಯಮಂತ್ರಿ ವಿರುದ್ಧ ಸರಿತಾ ಆರೋಪ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಡಿ.ವಿ.ಸದಾನಂದಗೌಡ ಪ್ರಕರಣದಲ್ಲಿ ಭಾಗಿಯಾದವರೇ ಮಾಹಿತಿ ಹೇಳಿರುವ ಕಾರಣ ಇದು ಗಂಭೀರ ಸ್ವರೂಪದ್ದು. ಪಿಣರಾಯಿ ವಿಜಯನ್ ಇದು ಚುನಾವಣೆಗಾಗಿ ಮಾಡಿರುವುದು ಅಂತಾ ಹೇಳಬಹುದು. ಇಂತಹದ್ದು ಬಂದ ಮೇಲೆ ಅವರು ಸ್ವಯಂ ಪ್ರೇರಿತರಾಗಿ ಅವರ ರಾಜಕೀಯ ನಿಲುವು ತೆಗೆದುಕೊಳ್ಳುವುದು ಸೂಕ್ತ. ರಾಜೀನಾಮೆ ಕೊಡುವ ಬಗ್ಗೆ ಅವರಲ್ಲಿ ನೈತಿಕತೆ ಇದ್ದರೆ ಅವರು ಪರಿಶೀಲನೆ ಮಾಡಬೇಕು ಎಂದು ಹೇಳಿದರು.

ಇದನ್ನೂ ಓದಿಆ ಆರು ಸಚಿವರಿಗೆ ಕಾಡ್ತಿದೆಯಾ ‘ಮುಂಬೈ ಡೈರೀಸ್’ ನೆನಪು! ದಿನೇಶ್ ಕಲ್ಲಹಳ್ಳಿ ವಿರುದ್ಧ ಕಂಪ್ಲೇಂಟ್ ನೀಡುವಂತೆ ರಮೇಶ್ ಜಾರಕಿಹೊಳಿ ಮೇಲೆ ಒತ್ತಡ

ರಾಜಕೀಯ ಷಡ್ಯಂತ್ರದ ಗುಮಾನಿಯಿಂದ ಕೋರ್ಟ್ ಮೊರೆ ಹೋಗಿದ್ದೇವೆ: ಟ್ವಿಟ್ಟರ್​ನಲ್ಲಿ ಸ್ಪಷ್ಟನೆ ನೀಡಿದ ಸಚಿವ ಡಾ.ಕೆ.ಸುಧಾಕರ್

ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ