AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರದಲ್ಲಿ ಮತ್ತೆ ನಡುಗಿದ ಭೂಮಿ; ಒಂದು ವಾರದಲ್ಲಿ ಎರಡನೇ ಬಾರಿಗೆ ಭೂಕಂಪನದ ಅನುಭವ

ಸೆಪ್ಟೆಂಬರ್​ 4ನೇ ತಾರೀಖಿನಂದು ಜಿಲ್ಲೆಯ ವಿವಿಧ ಭಾಗಗಳಲ್ಲಿ ಭೂಕಂಪವಾಗಿತ್ತು. ಅಂದು ರಿಕ್ಟರ್ ಮಾಪನದಲ್ಲಿ 3.9ರಷ್ಟು ತೀವ್ರತೆ ದಾಖಲಾಗಿತ್ತು. ಇದೀಗ ಸರಿಯಾಗಿ ಒಂದು ವಾರದ ಅಂತರದಲ್ಲಿ ಮತ್ತೆ ಭೂಮಿ ನಡುಗಿದ ಅನುಭವ ಆಗಿದೆ.

ವಿಜಯಪುರದಲ್ಲಿ ಮತ್ತೆ ನಡುಗಿದ ಭೂಮಿ; ಒಂದು ವಾರದಲ್ಲಿ ಎರಡನೇ ಬಾರಿಗೆ ಭೂಕಂಪನದ ಅನುಭವ
ಸಾಂಕೇತಿಕ ಚಿತ್ರ
TV9 Web
| Updated By: Skanda|

Updated on: Sep 11, 2021 | 9:04 AM

Share

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪನದ ಅನುಭವವಾಗಿದ್ದು ಜನ ಆತಂಕಕ್ಕೆ ಒಳಗಾಗಿದ್ದಾರೆ. ಇಂದು ಮುಂಜಾನೆ 8.18ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವ ಆಗಿದೆ ಎಂದು ಊರಿನವರು ಹೇಳಿದ್ದು, ಒಂದೇ ವಾರದಲ್ಲಿ ಎರಡನೇ ಬಾರಿ ಈ ಅನುಭವ ಆಗಿರುವುದು ಸಹಜವಾಗಿ ಭಯಕ್ಕೆ ಕಾರಣವಾಗಿದೆ. ಸೆಪ್ಟೆಂಬರ್​ 4ನೇ ತಾರೀಖಿನಂದು ಜಿಲ್ಲೆಯ ವಿವಿಧ ಭಾಗಗಳಲ್ಲಿ ಭೂಕಂಪವಾಗಿತ್ತು. ಅಂದು ರಿಕ್ಟರ್ ಮಾಪನದಲ್ಲಿ 3.9ರಷ್ಟು ತೀವ್ರತೆ ದಾಖಲಾಗಿತ್ತು. ಇದೀಗ ಸರಿಯಾಗಿ ಒಂದು ವಾರದ ಅಂತರದಲ್ಲಿ ಮತ್ತೆ ಭೂಮಿ ನಡುಗಿದ ಅನುಭವ ಆಗಿದೆ.

ಒಂದು ವಾರದ ಹಿಂದೆ ಭೂಕಂಪ ಆಗಿರುವ ಬಗ್ಗೆ ಹಾಗೂ ಅದರ ತೀವ್ರತೆ ಬಗ್ಗೆ ಜಿಲ್ಲಾಡಳಿತ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದರು. ಇದೀಗ ಇಂದು ಭೂಮಿ ನಡಗಿರುವ ಬಗ್ಗೆ ಇನ್ನಷ್ಟೇ ಮಾಹಿತಿ ಲಭ್ಯವಾಗಬೇಕಿದ್ದು, ಪದೇ ಪದೇ ಹೀಗೆ ಆಗುತ್ತಿರುವುದಕ್ಕೆ ಕಾರಣವೇನು? ಇದರಿಂದ ಏನಾದರೂ ಅಪಾಯವಿದೆಯೇ? ಇದು ಯಾವುದಾದರೂ ಅವಘಡದ ಮುನ್ಸೂಚನೆಯೇ? ಎಂದು ಜನ ಆತಂಕದಲ್ಲಿದ್ದಾರೆ.

ಕಳೆದ ವಾರ ಆಗಿದ್ದೇನು? ವಿಜಯಪುರ ಜಿಲ್ಲೆಯಾದ್ಯಂತ ಕಳೆದ ವಾರ 11.47ಕ್ಕೆ ಭೂಮಿ ಕಂಪಿಸಿದ (Earthquake) ಅನುಭವವಾಗಿದೆ. ರಾತ್ರಿ ಎರಡು ಬಾರಿ ಭೂಮಿ ಕಂಪಿಸಿದ ಅನುಭವ ಆಗಿದೆ. ಮೊದಲಿಗೆ ಎರಡು ಕ್ಷಣಗಳ ಕಾಲ ಭೂಮಿಯಿಂದ ವಿಚಿತ್ರ ಶಬ್ದ ಕೇಳಿ‌ ಬಂದಿದೆ. ನಂತರ ಭೂಮಿ ನಡುಗಿದ ಅನುಭವವಾಗಿದೆ. ಹೀಗಾಗಿ ಜನರು ಭಯದಲ್ಲೇ ಕಾಲ ಕಳೆದಿದ್ದಾರೆ. ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 3.9ರಷ್ಟು ದಾಖಲಾಗಿದೆ. ಅದರಂತೆ ಬಾಗಲಕೋಟೆಯಲ್ಲೂ ರಾತ್ರಿ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ತಿಳಿದುಬಂದಿದೆ. ರಾತ್ರಿ 11.50ಕ್ಕೆ ಭೂಮಿ ಕಂಪಿಸಿದ ಅನುಭವಾಗಿದೆ ಎಂದು ಹೇಳಲಾಗಿತ್ತು. ಬಾಗಲಕೋಟೆ, ಜಮಖಂಡಿ ತಾಲೂಕಿನಲ್ಲಿ ಕಂಪನದ ಅನುಭವವಾಗಿದ್ದು, ಈ ಬಗ್ಗೆ ಬಾಗಲಕೋಟೆ ಜಿಲ್ಲಾಡಳಿತ ಖಚಿತಪಡಿಸಿದೆ. ಅಂಕಲಗಿ ಗ್ರಾಮದಲ್ಲಿ ಭೂಕಂಪನದ ಅನುಭವವಾದ ಹಿನ್ನೆಲೆ ಕೊಟ್ಟಿಗೆಯಲ್ಲಿ ದನಕರುಗಳು ಎದ್ದು ನಿಂತಿರುವುದು ತಿಳಿದುಬಂದಿದೆ. ಕೆ.ಎಲ್.ಬಿಲ್.ಕೇರಿ ಎಂಬುವರ ಕೊಟ್ಟಿಗೆಯಲ್ಲಿದ್ದ ಹಸುಗಳು ಭೂಕಂಪನ ಅನುಭವಕ್ಕೆ ದಿಢೀರನೆ ಎದ್ದು ನಿಂತಿದ್ದವು ಎಂಬ ಮಾಹಿತಿ ಲಭ್ಯವಾಗಿದೆ.

ಕಳೆದ ವಾರ ರಾತ್ರಿ 11.43 ರ ಸುಮಾರಿಗೆ ನಮಗೆ ಭೂಕಂಪನದ ಅನುಭವ ಆಗಿದೆ. ಹತ್ತರಿಂದ ಹನ್ನೆರಡು ಸೆಕೆಂಡುಗಳ ಕಾಲ ಭೂಕಂಪಿಸಿದ ಅನುಭವ ನಮಗೆ ಆಗಿದೆ. ರೋಲರ್ ಸಂಚರಿಸುವ ವೇಳೆ ಬರುವ ಶಬ್ದದ ಹಾಗೆ ಶಬ್ದ ಕೇಳಿಸಿದೆ. 10ರಿಂದ 12 ಸೆಕೆಂಡ್‌ ಕಾಲ ಕಂಪನದ ಅನುಭವ ಆಗಿದೆ. ನಮ್ಮ ಮನೆಯ ಸದಸ್ಯರು ಹೊರಗೆ ಬಂದು ನಿಂತಿದ್ದೆವು. ಮಕ್ಕಳು, ಮನೆಮಂದಿ ಭಯಗೊಂಡಿದ್ದರು ಎಂದು ಬಾಗಲಕೋಟೆ ತಾಲೂಕು ಪಂಚಾಯತಿ ಮಾಜಿ ಉಪಾಧ್ಯಕ್ಷ ಸಲೀಮ್ ಶೇಕ್ ತಿಳಿಸಿದ್ದರು. ಭೂಕಂಪನದ ಪರಿಣಾಮ ಸಲೀಮ್ ಶೇಖ್ ಅವರ ಮನೆ ಗೋಡೆ ಮೇಲೆ ಚಿಕ್ಕದಾಗಿ ಬಿರುಕು ಕೂಡಾ ಕಾಣಿಸಿಕೊಂಡಿದೆ.

ಇದನ್ನೂ ಓದಿ: ವಿಜಯಪುರದಲ್ಲಿ ಭೂಕಂಪನ; 3.9ರಷ್ಟು ತೀವ್ರತೆ ದಾಖಲು, ಭಯದಲ್ಲಿ ಜನ 

Earthquake: ಬಾಗಲಕೋಟೆಯಲ್ಲೂ ಭೂಕಂಪನ ಅನುಭವ; ಖಚಿತಪಡಿಸಿದ ಜಿಲ್ಲಾಡಳಿತ

(Earthquake experience in Vijayapura for the second time in a weekQ)

ಸೇತುವೆ ಲೋಕಾರ್ಪಣೆಗೊಂಡು ಎರಡು ಗಂಟೆಯಲ್ಲೇ ಮುಚ್ಚಿದ್ದೇಕೆ?
ಸೇತುವೆ ಲೋಕಾರ್ಪಣೆಗೊಂಡು ಎರಡು ಗಂಟೆಯಲ್ಲೇ ಮುಚ್ಚಿದ್ದೇಕೆ?
ಲಿಫ್ಟ್​ ಬಾಗಿಲು ಹಾಕಿದ್ದೇಕೆಂದು ಗದರಿ ಬಾಲಕನ ಕೈ ಕಚ್ಚಿದ ವ್ಯಕ್ತಿ
ಲಿಫ್ಟ್​ ಬಾಗಿಲು ಹಾಕಿದ್ದೇಕೆಂದು ಗದರಿ ಬಾಲಕನ ಕೈ ಕಚ್ಚಿದ ವ್ಯಕ್ತಿ
Daily Devotional: ಹುತ್ತವಿರುವ ನಿವೇಶನ ಖರೀದಿಸಿದರೆ ಲಾಭವೋ ನಷ್ಟವೋ?
Daily Devotional: ಹುತ್ತವಿರುವ ನಿವೇಶನ ಖರೀದಿಸಿದರೆ ಲಾಭವೋ ನಷ್ಟವೋ?
Daily horoscope: ಈ ರಾಶಿಯವರಿಗೆ ಆರ್ಥಿಕ ಲಾಭ ಮತ್ತು ವಾಹನ ಖರೀದಿ ಯೋಗ
Daily horoscope: ಈ ರಾಶಿಯವರಿಗೆ ಆರ್ಥಿಕ ಲಾಭ ಮತ್ತು ವಾಹನ ಖರೀದಿ ಯೋಗ
ಶಿಥಿಲಾವಸ್ಥೆಗೆ ತಲುಪಿದ 1937ರಲ್ಲಿ ನಿರ್ಮಾಣವಾದ ಸರ್ಕಾರಿ ಶಾಲೆ
ಶಿಥಿಲಾವಸ್ಥೆಗೆ ತಲುಪಿದ 1937ರಲ್ಲಿ ನಿರ್ಮಾಣವಾದ ಸರ್ಕಾರಿ ಶಾಲೆ
ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯ ಸುರಂಗ ನಿರ್ಮಾಣ ಪೂರ್ಣ
ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯ ಸುರಂಗ ನಿರ್ಮಾಣ ಪೂರ್ಣ
ಯಾರದ್ದೋ ಜಿದ್ದಿನ ಮೇಲೆ ಸಿನಿಮಾ ನಿರ್ಮಿಸುತ್ತಿದ್ದಾರಾ ಯಶ್ ತಾಯಿ?
ಯಾರದ್ದೋ ಜಿದ್ದಿನ ಮೇಲೆ ಸಿನಿಮಾ ನಿರ್ಮಿಸುತ್ತಿದ್ದಾರಾ ಯಶ್ ತಾಯಿ?
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್