School Reopening: ಕೊವಿಡ್ ತಾಂತ್ರಿಕ ಸಮಿತಿ ವರದಿ ಬೆನ್ನಲೆ ಶಾಲೆ ಆರಂಭಕ್ಕೆ ಶಿಕ್ಷಣ ತಜ್ಞರ ಸಲಹೆ

ಖಾಸಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚು. ಗರಿಷ್ಠ ವಿದ್ಯಾರ್ಥಿಗಳು ಇರುವುದರಿಂದ ಸಾಮಾಜಿಕ ಅಂತರ ಪಾಲಿಸುವುದು ಕಷ್ಟ. ಸರ್ಕಾರಿ ಶಾಲೆಗಳಂತೆ ದೊಡ್ಡದಾದ ಶಾಲೆಯ ವಿಸ್ತೀರ್ಣ ಕೊಠಡಿಗಳ ಗಾತ್ರ ಮತ್ತು ಸಂಖ್ಯೆ ಖಾಸಗಿ ಶಾಲೆಗಳಲ್ಲಿ ಕಡಿಮೆ.

School Reopening: ಕೊವಿಡ್ ತಾಂತ್ರಿಕ ಸಮಿತಿ ವರದಿ ಬೆನ್ನಲೆ ಶಾಲೆ ಆರಂಭಕ್ಕೆ ಶಿಕ್ಷಣ ತಜ್ಞರ ಸಲಹೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: sandhya thejappa

Updated on:Jun 24, 2021 | 12:01 PM

ಬೆಂಗಳೂರು: ಕೊವಿಡ್ ತಾಂತ್ರಿಕ ಸಮಿತಿ ವರದಿ ನೀಡಿದ ಬೆನ್ನಲ್ಲೆ ಶಿಕ್ಷಣ ತಜ್ಞರು ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸುವಂತೆ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಪ್ರಾಥಮಿಕ ಹಂತದಲ್ಲಿ ಸರ್ಕಾರಿ ಶಾಲೆ ಮಾತ್ರ ಆರಂಭಿಸುವಂತೆ ಸಲಹೆ ನೀಡಿದ್ದಾರೆ. ರಾಜ್ಯದಲ್ಲಿ 50ಕ್ಕಿಂತ ಕಡಿಮೆ ಮಕ್ಕಳಿರುವ 22 ಸಾವಿರ ಸರ್ಕಾರಿ ಶಾಲೆಗಳಿವೆ. 22 ಸಾವಿರ ಸರ್ಕಾರಿ ಶಾಲೆಗಳಲ್ಲಿ ಐದರಿಂದ ಆರು ಕೊಠಡಿಗಳಿವೆ. ಒಂದೊಂದು ಕೊಠಡಿಯಲ್ಲಿ 8ರಿಂದ 10 ವಿದ್ಯಾರ್ಥಿಗಳಿಗೆ ಪಾಠ ಮಾಡಬಹುದು. ಸಾಮಾಜಿಕ ಅಂತರ, ಮಾಸ್ಕ್ ಕಡ್ಡಾಯ ಮಾಡಿ ಸುರಕ್ಷಿತವಾಗಿ ಶಾಲೆ ನಡೆಸಬಹುದು. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಇದು ತುಂಬಾ ಅನುಕೂಲವಾಗುತ್ತೆ ಎಂದು ಶಿಕ್ಷಣ ತಜ್ಞ ನಿರಂಜನಾರಾಧ್ಯ ಅಭಿಪ್ರಾಯಪಟ್ಟಿದ್ದಾರೆ.

ಖಾಸಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚು. ಗರಿಷ್ಠ ವಿದ್ಯಾರ್ಥಿಗಳು ಇರುವುದರಿಂದ ಸಾಮಾಜಿಕ ಅಂತರ ಪಾಲಿಸುವುದು ಕಷ್ಟ. ಸರ್ಕಾರಿ ಶಾಲೆಗಳಂತೆ ದೊಡ್ಡದಾದ ಶಾಲೆಯ ವಿಸ್ತೀರ್ಣ ಕೊಠಡಿಗಳ ಗಾತ್ರ ಮತ್ತು ಸಂಖ್ಯೆ ಖಾಸಗಿ ಶಾಲೆಗಳಲ್ಲಿ ಕಡಿಮೆ. ಖಾಸಗಿ ಶಾಲೆಗಳ ಮಕ್ಕಳಿಗೆ ಅನ್​ಲೈನ್​ ಮೂಲಕ ಪಾಠ ಭೋದನೆ ಮಾಡಬಹುದು ಎಂದು ತಜ್ಞರು ತಿಳಿಸಿದರು.

ಖಾಸಗಿ ಶಾಲೆಗಳ ವಿದ್ಯಾರ್ಥಿಗಳ ಬಳಿ ಡಿಜಿಟಲ್ ಕಲಿಕೆಯ ಉಪಕರಣ ವ್ಯವಸ್ಥೆ ಇದೆ. ಸರ್ಕಾರಿ ಶಾಲೆಗಳ ಮಕ್ಕಳಲ್ಲಿ ಈ ಸೌಲಭ್ಯ ಇಲ್ಲ. ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳೇ ಹೆಚ್ಚು ಕಲಿಕೆಯಿಂದ ವಂಚಿತರಾಗುತ್ತಿದ್ದಾರೆ. ಹೀಗಾಗಿ ಸರ್ಕಾರ ಸರ್ಕಾರಿ ಶಾಲೆಗಳನ್ನ ಪ್ರಾಥಮಿಕ ಹಂತದಲ್ಲಿ ಕೂಡಲೇ ಆರಂಭಿಸಬೇಕು. ಮುನ್ನೆಚ್ಚರಿಕೆಯೊಂದಿಗೆ ಶಾಲೆ ಆರಂಭಿಸಬೇಕು ಎಂದು ಸರ್ಕಾರಕ್ಕೆ ಶಿಕ್ಷಣ ತಜ್ಞ ನಿರಂಜನ ಆರಾಧ್ಯಾ ಸಲಹೆ ನೀಡಿದರು.

ಅಧಿಕಾರಿಗಳ ಜತೆ ನಾಳೆ ಸಭೆ ಆರೋಗ್ಯ ಇಲಾಖೆ ಅಧಿಕಾರಿಗಳ ಜತೆ ನಾಳೆ ಸಭೆ ಇದೆ. ಸಭೆಯಲ್ಲಿ ಶಾಲೆ ಆರಂಭ ಸಂಬಂಧ ಚರ್ಚೆ ಮಾಡುತ್ತೇವೆ ಎಂದು ಟಿವಿ9ಗೆ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ. ನಾವು ಬೆಂಗಳೂರಿನ ಬಗ್ಗೆ ಮಾತ್ರ ಯೋಚನೆ ಮಾಡುತ್ತೇವೆ. ಗ್ರಾಮೀಣ ಮಕ್ಕಳು ಹೆಸರು ಬರೆಯುವುದನ್ನೂ ಮರೆತಿದ್ದಾರೆ. ಲೆಕ್ಕಗಳನ್ನು ಕೂಡ ಮರೆತಿದ್ದಾರೆ ಎಂದು ಅಭಿಪ್ರಾಯಪಟ್ಟರು.

ಖಾಸಗಿ ಶಾಲೆಗಳು, ಪೋಷಕರು ಕುಳಿತು ಚರ್ಚಿಸಬೇಕು. ಶಾಲಾ ಶುಲ್ಕ ಪಾವತಿ ಸಂಬಂಧ ಚರ್ಚೆ ಮಾಡಬೇಕು. ಅವರೇ ಕುಳಿತು ಸಮಸ್ಯೆ ಬಗೆಹರಿಸಿಕೊಳ್ಳುವುದು ಸೂಕ್ತ. ಗೊಂದಲಗಳಿಗೆ ಅವಕಾಶ ಕೊಡುವುದು ಇಷ್ಟವಿಲ್ಲ ಎಂದು ತಿಳಿಸಿದರು.

ಶಾಲಾ ಆರಂಭಕ್ಕೆ ತಜ್ಞರ ಸಲಹೆ ಏನು? ಶಾಲೆಗಳನ್ನ ಓಪನ್ ಮಾಡಲು ಏನೆಲ್ಲ ಮಾರ್ಗಸೂಚಿ ಅಗತ್ಯವಿದೆ ಎಂದು ತಜ್ಞರು ತಿಳಿಸಿದ್ದಾರೆ. * ಮಕ್ಕಳಿಗೆ ಮಾಸ್ಕ್ ಕಡ್ಡಾಯ ಮಾಡುವುದು. * ಶಾಲಾ ಶಿಕ್ಷಕರು ಹಾಗೂ ಸಿಬ್ಬಂದಿಗೆ ಲಸಿಕೆ ಕಡ್ಡಾಯ ಮಾಡುವುದು. * ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಬಿಸಿ ನೀರಿನ ವ್ಯವಸ್ಥೆ ಮಾಡುವುದು. * ಶಾಲಾ ಆವರಣಕ್ಕೆ ಅನ್ಯರಿಗೆ ನಿರ್ಭಂಧಿಸಿ, ಶಾಲೆಯನ್ನ ಸ್ವಚ್ಛವಾಗಿಟ್ಟುಕೊಳ್ಳುವುದು. * ಅರೋಗ್ಯವಂತ ಮಕ್ಕಳಿಗೆ ಮಾತ್ರ ಶಾಲಾ ಪ್ರವೇಶಕ್ಕೆ ಅವಕಾಶ ನೀಡುವುದು. * ವಾರಕ್ಕೊಮ್ಮೆ ಸ್ಥಳೀಯ ವೈದ್ಯರಿಂದ ಮಕ್ಕಳ ಆರೋಗ್ಯ ತಪಾಸಣೆ ಮಾಡಿಸುವುದು. * ಸಾಮಾಜಿಕ ಅಂತರ ಹಾಗೂ ಕೊವಿಡ್ ಬಗ್ಗೆ ಮಕ್ಕಳಿಗೆ ಜಾಗೃತಿ ಮೂಡಿಸುವುದು. * ಶಾಲಾ ಅವರಣದಲ್ಲಿ ಸುತ್ತಾಮುತ್ತಾ ತಿಂಡಿ, ಆಹಾರ ಮಾರಟ ನಿಷೇಧಿಸಿವುದು. * ಪೋಷಕರ ಸಮತಿಯೊಂದಿಗೆ ಮಕ್ಕಳನ್ನ ಶಾಲೆಗೆ ಕರೆತರುವುದು. * ಮಕ್ಕಳಿಗೆ ಸರ್ಕಾರದಿಂದ ಪೌಷ್ಟಿಕಾಂಶ ಆಹಾರ ನೀಡುವುದು.

ಆಗಸ್ಟ್​ನಿಂದ ಕಾಲೇಜುಗಳು ಆರಂಭ ಸಾಧ್ಯತೆ ಕೊರೊನಾ ಆರ್ಭಟ ಕಡಿಮೆಯಾಗುತ್ತಿರುವ ಹಿನ್ನೆಲೆ ಮೊದಲ ಹಂತದಲ್ಲಿ ಕಾಲೇಜುಗಳನ್ನು ತೆರೆಯಲು ಡಾ.ದೇವಿಶೆಟ್ಟಿ ಸಲಹೆ ನೀಡಿದ್ದಾರೆ. ಕೊವಿಡ್ ತಾಂತ್ರಿಕ ಸಲಹಾ ಸಮಿತಿ ಕಾಲೇಜುಗಳನ್ನು ತೆರೆಯಲು ಸಹಮತ ಸೂಚಿಸಿದ್ದು, ಕಾಲೇಜುಗಳ ಆರಂಭಕ್ಕೆ ಸರ್ಕಾರದಿಂದ ಸಿದ್ಧತೆ ನಡೆಯುತ್ತಿದೆ.

ಎರಡನೇ ಹಂತದಲ್ಲಿ 7-10ನೇ ತರಗತಿ, ಮೂರನೇ ಹಂತದಲ್ಲಿ 5-6ನೇ ತರಗತಿ ಆರಂಭಿಸುವಂತೆ ಸಲಹೆ ನೀಡಿದೆ. ಹೀಗಾಗಿ ಹಂತ ಹಂತವಾಗಿ ಶಾಲಾ-ಕಾಲೇಜುಗಳು ಆರಂಭಕ್ಕೆ ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿದೆ. ಮರಳಿ ಕಾಲೇಜಿಗೆ ಎಂಬ ಘೋಷವಾಕ್ಯದೊಂದಿಗೆ ವಿದ್ಯಾರ್ಥಿಗಳನ್ನ ಕಾಲೇಜಿಗೆ ತರಲು ಉನ್ನತ ಶಿಕ್ಷಣ ಇಲಾಖೆ ಬೇಕಾದ ತಯಾರಿ ನಡೆಸುತ್ತಿದೆ.

ಇದನ್ನೂ ಓದಿ

School Reopening: ಶಾಲೆಗಳ ಆರಂಭಕ್ಕೆ ತಜ್ಞರಿಂದ ಸಲಹೆ; ಸಮ, ಬೆಸ ಮಾದರಿಯಲ್ಲಿ ಆರಂಭ

School Fees: ಕೋರ್ಟ್ ಆದೇಶಕ್ಕೂ ಮುನ್ನವೇ ಪೂರ್ತಿ ಶುಲ್ಕ ವಸೂಲಿಗಿಳಿದ ಖಾಸಗಿ ಶಾಲೆಗಳು

(Education experts advised the government to start a school in Karnataka)

Published On - 11:16 am, Thu, 24 June 21

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ