ಮಕ್ಕಳಿಗೆ ಆನ್‌ಲೈನ್‌ ಶಿಕ್ಷಣ: ಶಿಕ್ಷಣ ಸಚಿವ ಸುರೇಶ್ ಕುಮಾರ್ ನೀಡಿದ ಸ್ಪಷ್ಟನೆ ಏನು?

  • TV9 Web Team
  • Published On - 13:53 PM, 6 Jun 2020
ಮಕ್ಕಳಿಗೆ ಆನ್‌ಲೈನ್‌ ಶಿಕ್ಷಣ: ಶಿಕ್ಷಣ ಸಚಿವ ಸುರೇಶ್ ಕುಮಾರ್ ನೀಡಿದ ಸ್ಪಷ್ಟನೆ ಏನು?

ಬಳ್ಳಾರಿ: ಜಿಲ್ಲಾ ಪ್ರವಾಸದಲ್ಲಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್ ಕೊರೊನಾ ಸಂಕಷ್ಟದಿಂದಾಗಿ ಎದುರಾಗಿರುವ ಮಕ್ಕಳಿಗೆ ಆನ್‌ಲೈನ್‌ ಶಿಕ್ಷಣ ಎಂಬ ಭೂತದ ಬಗ್ಗೆ ಸ್ಪಷ್ಟನೆ ನೀಡಿದ್ದು, ಎಲ್‌ಕೆಜಿ ಮತ್ತು ಯುಕೆಜಿ ಮಕ್ಕಳಿಗೆ ಆನ್‌ಲೈನ್‌ ಶಿಕ್ಷಣ ಇಲ್ಲ ಎಂದಿದ್ದಾರೆ.

ಯಾವ ಮಕ್ಕಳಿಗೆ ಆನ್‌ಲೈನ್ ಶಿಕ್ಷಣ ನೀಡಬೇಕು ಎಂಬುದರ ಬಗ್ಗೆ ಸೋಮವಾರ ಆದೇಶ ಹೊರಡಿಸ್ತೇವೆ ಎಂದು ಪ್ರಾಥಮಿಕ & ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಇನ್ನು ಶಾಲೆಗಳನ್ನು ಪ್ರಾರಂಭಕ್ಕೆ ಯಾವುದೇ ಗ್ರೀನ್ ಸಿಗ್ನಲ್ ನೀಡಿಲ್ಲ. ಪೋಷಕರ ಅಭಿಪ್ರಾಯ ಪಡೆದ ಬಳಿಕ ತೀರ್ಮಾನಿಸುತ್ತೇವೆ ಎಂದೂ ಅವರು ಪುನರುಚ್ಚರಿಸಿದ್ದಾರೆ.