ಗದ್ದೆ ಮೇಲಿನ ವಿದ್ಯುತ್ ತಂತಿ ತಗುಲಿ ಕಟಾವಿಗೆ ಬಂದಿದ್ದ 8 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ

|

Updated on: Nov 12, 2020 | 7:41 PM

ಬೆಳಗಾವಿ: ಕಟಾವಿಗೆ ಬಂದಿದ್ದ ಎಂಟು ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಿಗಡಿ ಕ್ರಾಸ್ ಬಳಿ ನಡೆದಿದೆ. ಬೈಲಹೊಂಗಲ ತಾಲೂಕಿನ ಸಂಪಗಾಂವ ಗ್ರಾಮದ ರೈತ ಸಂಗಪ್ಪ ಕಾದ್ರೊಳ್ಳಿಗೆ ಸೇರಿದ ಜಮೀನಿನಲ್ಲಿ ಈ ಅವಘಡ ಸಂಭವಿಸಿದೆ. ಗದ್ದೆ ಮೇಲೆ ಹಾಯ್ದು ಹೋಗಿರುವ ವಿದ್ಯುತ್ ತಂತಿ ಹರಿದು ಬಿದ್ದಿದ್ದೇ ಈ ಅನಾಹುತಕ್ಕೆ ಕಾರಣವಾಗಿದೆ. ಧಗಧಗಿಸುತ್ತಿರುವ ಬೆಂಕಿ ನಂದಿಸಲು ರೈತ ಕುಟುಂಬ ಹಾಗೂ ಸ್ಥಳೀಯರು ಹರಸಾಹಸ ಪಡುತ್ತಿದ್ದಾರೆ. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ […]

ಗದ್ದೆ ಮೇಲಿನ ವಿದ್ಯುತ್ ತಂತಿ ತಗುಲಿ ಕಟಾವಿಗೆ ಬಂದಿದ್ದ 8 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ
Follow us on

ಬೆಳಗಾವಿ: ಕಟಾವಿಗೆ ಬಂದಿದ್ದ ಎಂಟು ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಿಗಡಿ ಕ್ರಾಸ್ ಬಳಿ ನಡೆದಿದೆ.

ಬೈಲಹೊಂಗಲ ತಾಲೂಕಿನ ಸಂಪಗಾಂವ ಗ್ರಾಮದ ರೈತ ಸಂಗಪ್ಪ ಕಾದ್ರೊಳ್ಳಿಗೆ ಸೇರಿದ ಜಮೀನಿನಲ್ಲಿ ಈ ಅವಘಡ ಸಂಭವಿಸಿದೆ. ಗದ್ದೆ ಮೇಲೆ ಹಾಯ್ದು ಹೋಗಿರುವ ವಿದ್ಯುತ್ ತಂತಿ ಹರಿದು ಬಿದ್ದಿದ್ದೇ ಈ ಅನಾಹುತಕ್ಕೆ ಕಾರಣವಾಗಿದೆ. ಧಗಧಗಿಸುತ್ತಿರುವ ಬೆಂಕಿ ನಂದಿಸಲು ರೈತ ಕುಟುಂಬ ಹಾಗೂ ಸ್ಥಳೀಯರು ಹರಸಾಹಸ ಪಡುತ್ತಿದ್ದಾರೆ. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.