ಕಾಲು ಜಾರಿ ಕಾಲುವೆಗೆ ಬಿದ್ದು ಯುವಕ ನೀರುಪಾಲು, ಎಲ್ಲಿ?
ಚಿಕ್ಕಮಗಳೂರು: ಕಾಲು ಜಾರಿ ಕಾಲುವೆಗೆ ಬಿದ್ದು ಯುವಕ ನೀರುಪಾಲಾಗಿರುವ ಘಟನೆ ತರೀಕೆರೆ ತಾಲೂಕಿನ ಹುಣಸಘಟ್ಟ ಗ್ರಾಮದ ಬಳಿ ನಡೆದಿದೆ. ಅಫ್ತಾಬ್(18) ನೀರುಪಾಲಾದ ಯುವಕ. ದಾವಣಗೆರೆ ಮೂಲದ ಅಫ್ತಾಬ್ ನಿನ್ನೆ ಸಂಜೆ ಕಾಲು ಜಾರಿ ನೀರಿಗೆ ಬಿದ್ದಿದ್ದಾನೆ. ಚಾನಲ್ ನೀರು ನಿಲ್ಲಿಸದ ಹಿನ್ನೆಲೆಯಲ್ಲಿ ಶೋಧ ಕಾರ್ಯ ವಿಳಂಬವಾಗುತ್ತಿದೆ. ಹೀಗಾಗಿ ಚಾನಲ್ ನೀರು ನಿಲ್ಲಿಸುವಂತೆ ಸಂಬಂಧಿಕರು ಮನವಿ ಮಾಡಿಕೊಂಡಿದ್ದಾರೆ. ಯುವಕನನ್ನು ಕಳೆದುಕೊಂಡ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ. ಅಜ್ಜಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಚಿಕ್ಕಮಗಳೂರು: ಕಾಲು ಜಾರಿ ಕಾಲುವೆಗೆ ಬಿದ್ದು ಯುವಕ ನೀರುಪಾಲಾಗಿರುವ ಘಟನೆ ತರೀಕೆರೆ ತಾಲೂಕಿನ ಹುಣಸಘಟ್ಟ ಗ್ರಾಮದ ಬಳಿ ನಡೆದಿದೆ. ಅಫ್ತಾಬ್(18) ನೀರುಪಾಲಾದ ಯುವಕ.
ದಾವಣಗೆರೆ ಮೂಲದ ಅಫ್ತಾಬ್ ನಿನ್ನೆ ಸಂಜೆ ಕಾಲು ಜಾರಿ ನೀರಿಗೆ ಬಿದ್ದಿದ್ದಾನೆ. ಚಾನಲ್ ನೀರು ನಿಲ್ಲಿಸದ ಹಿನ್ನೆಲೆಯಲ್ಲಿ ಶೋಧ ಕಾರ್ಯ ವಿಳಂಬವಾಗುತ್ತಿದೆ. ಹೀಗಾಗಿ ಚಾನಲ್ ನೀರು ನಿಲ್ಲಿಸುವಂತೆ ಸಂಬಂಧಿಕರು ಮನವಿ ಮಾಡಿಕೊಂಡಿದ್ದಾರೆ. ಯುವಕನನ್ನು ಕಳೆದುಕೊಂಡ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ. ಅಜ್ಜಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Published On - 12:19 pm, Wed, 30 September 20




