
ಹಾಸನ: ಆಸ್ತಿಗಾಗಿ ವೃದ್ಧ ದಂಪತಿಯನ್ನು ಉಸಿರುಗಟ್ಟಿಸಿ ಹತ್ಯೆಗೈದಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಹಾಲುಗೊಡನಹಳ್ಳಿಯಲ್ಲಿ ನಡೆದಿದೆ. ಗ್ರಾಮದ ಮುರಳೀಧರ್ (80) ಮತ್ತು ಉಮಾದೇವಿ (70) ಕೊಲೆಯಾದ ದಂಪತಿ.
ಆಸ್ತಿ ವಿಚಾರಕ್ಕಾಗಿ ಕಿಡಿಗೇಡಿಗಳು ಮನೆಯೊಳಗಿದ್ದ ವೃದ್ಧ ದಂಪತಿಯನ್ನು ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾರೆ ಎಂದು ಶಂಕಿಸಲಾಗಿದೆ. ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.
Published On - 2:54 pm, Sun, 30 August 20