Election Commission: ಚುನಾವಣಾ ಮಾದರಿ ನೀತಿ ಸಂಹಿತೆ ಹಿಂಪಡೆದ ಆಯೋಗ
ಕರ್ನಾಟಕ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಜಾರಿಗೊಳಿಸಿದ್ದ ಚುನಾವಣಾ ಮಾದರಿ ನೀತಿ ಸಂಹಿತೆಯನ್ನು ಕೇಂದ್ರ ಚುನಾವಣಾ ಆಯೋಗ ಸೋಮವಾರ ಹಿಂಪಡೆದಿದೆ.

ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಜಾರಿಗೊಳಿಸಿದ್ದ ಚುನಾವಣಾ ಮಾದರಿ ನೀತಿ ಸಂಹಿತೆಯನ್ನು ಕೇಂದ್ರ ಚುನಾವಣಾ ಆಯೋಗ ಸೋಮವಾರ ಹಿಂಪಡೆದಿದೆ. ಈ ಕುರಿತು, ರಾಜ್ಯದಲ್ಲಿ ಚುನಾವಣೆ ಪ್ರಕ್ರಿಯೆಗಳು ಮುಗಿದು ಹೊಸ ಸರ್ಕಾರ ರಚನೆಗೆ ದಿನಗಣನೆ ಸನ್ನಿಹಿತವಾಗಿರುವ ಸಂದರ್ಭದಲ್ಲೇ ಚುನಾವಣಾ ಆಯೋಗ ಪ್ರಕಟಣೆ ಹೊರಡಿಸಿದೆ.
ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದ ದಿನಾಂಕದಿಂದ ಮಾದರಿ ನೀತಿ ಸಂಹಿತೆಯ ನಿಬಂಧನೆಗಳನ್ನು ಜಾರಿಗೊಳಿಸಲಾಗಿದೆ ಮತ್ತು ಅದು ಚುನಾವಣಾ ಪ್ರಕ್ರಿಯೆಯು ಪೂರ್ಣಗೊಳ್ಳುವವರೆಗೆ ಮಾತ್ರ ಜಾರಿಯಲ್ಲಿರುತ್ತದೆ ಎಂಬುದನ್ನು ಈ ಮೂಲಕ ತಿಳಿಸುತ್ತಿದ್ದೇವೆ. ಈಗ, ರಾಜ್ಯ ವಿಧಾನಸಭೆಗೆ ಸಾರ್ವತ್ರಿಕ ಚುನಾವಣೆಗಳಿಗೆ ಸಂಬಂಧಿಸಿದಂತೆ ಫಲಿತಾಂಶಗಳು ಪ್ರಕಟವಾಗಿವೆ. ಹೀಗಾಗಿ ಮಾದರಿ ನೀತಿ ಸಂಹಿತೆ ತಕ್ಷಣದಿಂದಲೇ ಜಾರಿಯಾಗುವಂತೆ ಸ್ಥಗಿತಗೊಂಡಿದೆ ಎಂದು ಆಯೋಗ ತಿಳಿಸಿದೆ.
ಮಾರ್ಚ್ 29ರಂದು ಕರ್ನಾಟಕ ವಿಧಾನಸಭೆ ಚುನಾವಣೆ ಘೋಷಣೆಯಾಗಿತ್ತು. ಅದರೊಂದಿಗೆ, ಮಾದರಿ ನೀತಿ ಸಂಹಿತೆಯೂ ಜಾರಿಯಾಗಿತ್ತು. ಮೇ 10ರಂದು ಮತದಾನ ನಡೆದಿದ್ದು, ಮೇ 13ರಂದು ಫಲಿತಾಂಶವೂ ಪ್ರಕಟವಾಗಿದೆ.
ಇದನ್ನೂ ಓದಿ: ಕಾಂಗ್ರೆಸ್ ಗೃಹಜ್ಯೋತಿ ಯೋಜನೆ; 200 ಯೂನಿಟ್ ಉಚಿತ ವಿದ್ಯುತ್ ಭರವಸೆ ಬಗ್ಗೆ ತಿಳಿಯಲೇಬೇಕಾದ ಮಾಹಿತಿ
ಕಾಂಗ್ರೆಸ್ 135 ಸ್ಥಾನಗಳನ್ನು ಪಡೆಯುವ ಮೂಲಕ ಭರ್ಜರಿ ಬಹುಮತ ಗಳಿಸಿದೆ. ಬಿಜೆಪಿ 65, ಜೆಡಿಎಸ್ 19 ಹಾಗೂ ಇತರರು ಮೂರು ಸ್ಥಾನ ಗಳಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ