ಜೋತು ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಯುವಕ ಸಾವು
ಕೋಲಾರ: ರಸ್ತೆಯ ಬದಿಯಲ್ಲಿ ಜೋತು ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಯುವಕನೊಬ್ಬ ಸಾವಿಗೀಡಾದ ದಾರುಣ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಂಚನಿಳ್ಳಕೋಟ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಂಜುನಾಥ್ (28) ಮೃತ ಯುವಕ. ರಸ್ತೆಯ ಬದಿಯಲ್ಲಿ ನೇತ್ತಾಡುತ್ತಿದ್ದ ಈ ವಿದ್ಯುತ್ ವೈರ್ ಸರಿಪಡಿಸುವಂತೆ ಹಲವಾರು ಬಾರಿ ಮನವಿ ಮಾಡಲಾಗಿತ್ತು. ಆದ್ರೆ ಪಿಡಿಓ ಮತ್ತು ಅಧಿಕಾರಿಗಳೂ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಗ್ರಾಮಸ್ಥರು ಅಕ್ರೋಶ ವ್ಯಕ್ತಪಡಿಸಿದ್ದಾರೆ. ರಾಯಲ್ಪಾಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕೋಲಾರ: ರಸ್ತೆಯ ಬದಿಯಲ್ಲಿ ಜೋತು ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಯುವಕನೊಬ್ಬ ಸಾವಿಗೀಡಾದ ದಾರುಣ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಂಚನಿಳ್ಳಕೋಟ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಂಜುನಾಥ್ (28) ಮೃತ ಯುವಕ.
ರಸ್ತೆಯ ಬದಿಯಲ್ಲಿ ನೇತ್ತಾಡುತ್ತಿದ್ದ ಈ ವಿದ್ಯುತ್ ವೈರ್ ಸರಿಪಡಿಸುವಂತೆ ಹಲವಾರು ಬಾರಿ ಮನವಿ ಮಾಡಲಾಗಿತ್ತು. ಆದ್ರೆ ಪಿಡಿಓ ಮತ್ತು ಅಧಿಕಾರಿಗಳೂ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಗ್ರಾಮಸ್ಥರು ಅಕ್ರೋಶ ವ್ಯಕ್ತಪಡಿಸಿದ್ದಾರೆ. ರಾಯಲ್ಪಾಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.





