ಜೋತು ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಯುವಕ ಸಾವು

ಕೋಲಾರ: ರಸ್ತೆಯ ಬದಿಯಲ್ಲಿ ಜೋತು ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಯುವಕನೊಬ್ಬ ಸಾವಿಗೀಡಾದ ದಾರುಣ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಂಚ‌ನಿಳ್ಳಕೋಟ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಂಜುನಾಥ್ (28) ಮೃತ ಯುವಕ. ರಸ್ತೆಯ ಬದಿಯಲ್ಲಿ‌ ನೇತ್ತಾಡುತ್ತಿದ್ದ ಈ ವಿದ್ಯುತ್ ವೈರ್ ಸರಿಪಡಿಸುವಂತೆ ಹಲವಾರು ಬಾರಿ ಮನವಿ ಮಾಡಲಾಗಿತ್ತು. ಆದ್ರೆ ಪಿಡಿಓ ಮತ್ತು ಅಧಿಕಾರಿಗಳೂ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಗ್ರಾಮಸ್ಥರು ಅಕ್ರೋಶ ವ್ಯಕ್ತಪಡಿಸಿದ್ದಾರೆ. ರಾಯಲ್ಪಾಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಜೋತು ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಯುವಕ ಸಾವು
ಸಾಧು ಶ್ರೀನಾಥ್​

Updated on: Jul 18, 2020 | 10:47 AM

ಕೋಲಾರ: ರಸ್ತೆಯ ಬದಿಯಲ್ಲಿ ಜೋತು ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಯುವಕನೊಬ್ಬ ಸಾವಿಗೀಡಾದ ದಾರುಣ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಂಚ‌ನಿಳ್ಳಕೋಟ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಂಜುನಾಥ್ (28) ಮೃತ ಯುವಕ.

ರಸ್ತೆಯ ಬದಿಯಲ್ಲಿ‌ ನೇತ್ತಾಡುತ್ತಿದ್ದ ಈ ವಿದ್ಯುತ್ ವೈರ್ ಸರಿಪಡಿಸುವಂತೆ ಹಲವಾರು ಬಾರಿ ಮನವಿ ಮಾಡಲಾಗಿತ್ತು. ಆದ್ರೆ ಪಿಡಿಓ ಮತ್ತು ಅಧಿಕಾರಿಗಳೂ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಗ್ರಾಮಸ್ಥರು ಅಕ್ರೋಶ ವ್ಯಕ್ತಪಡಿಸಿದ್ದಾರೆ. ರಾಯಲ್ಪಾಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us