ಬೆಂಗಳೂರು: ನಗರದ ಎಲೆಕ್ಟ್ರಾನಿಕ್ ಸಿಟಿಯಲ್ಲಿಂದು ಪೊಲೀಸರ ಗುಂಡು ಸದ್ದು ಮಾಡಿದೆ. ಕಳ್ಳತನ ಹಾಗೂ ದರೋಡೆ ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಬೆಟ್ಟದಾಸನಪುರ ಬಳಿ ನಡೆದಿದೆ. ಕಳ್ಳತನ ದರೋಡೆ ಮತ್ತು ರಾಬರಿ ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿ. 32ವರ್ಷದ ಕೃಷ್ಣ ಅಲಿಯಾಸ್ ಕಳ್ಳ ಕೃಷ್ಣನ ಮೇಲೆ ಫೈರಿಂಗ್ ನಡೆದಿದೆ. ಈತನ ವಿರುದ್ಧ ಹಲವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಖಚಿತ ಮಾಹಿತಿ ಮೇರೆಗೆ ಎಲೆಕ್ಟ್ರಾನ್ ಸಿಟಿ ಪೊಲೀಸರು ಆರೋಪಿಯನ್ನು […]
ಬೆಂಗಳೂರು: ನಗರದ ಎಲೆಕ್ಟ್ರಾನಿಕ್ ಸಿಟಿಯಲ್ಲಿಂದು ಪೊಲೀಸರ ಗುಂಡು ಸದ್ದು ಮಾಡಿದೆ. ಕಳ್ಳತನ ಹಾಗೂ ದರೋಡೆ ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಬೆಟ್ಟದಾಸನಪುರ ಬಳಿ ನಡೆದಿದೆ.
ಕಳ್ಳತನ ದರೋಡೆ ಮತ್ತು ರಾಬರಿ ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿ. 32ವರ್ಷದ ಕೃಷ್ಣ ಅಲಿಯಾಸ್ ಕಳ್ಳ ಕೃಷ್ಣನ ಮೇಲೆ ಫೈರಿಂಗ್ ನಡೆದಿದೆ. ಈತನ ವಿರುದ್ಧ ಹಲವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಖಚಿತ ಮಾಹಿತಿ ಮೇರೆಗೆ ಎಲೆಕ್ಟ್ರಾನ್ ಸಿಟಿ ಪೊಲೀಸರು ಆರೋಪಿಯನ್ನು ಬಂಧಿಸಲು ಹೋದಾಗ ಪೊಲೀಸರ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಆಗ ಎಲೆಕ್ಟ್ರಾನಿಕ್ ಸಿಟಿ ಇನ್ಸ್ಪೆಕ್ಟರ್ ಕಿಶೋರ್ ಕುಮಾರ್ ಆರೋಪಿಯ ಬಲಗಾಲಿಗೆ ಗುಂಡು ಹೊಡೆದಿದ್ದಾರೆ. ಆರೋಪಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.