ಶೋಪಿಯಾನಾದಲ್ಲಿ ಎನ್​ಕೌಂಟರ್​; ನಾಲ್ವರು ಉಗ್ರರನ್ನು ಹತ್ಯೆ ಮಾಡಿದ ಭದ್ರತಾ ಪಡೆ, ಪುಲ್ವಾಮಾದಲ್ಲಿ ಕಾರ್ಯಾಚರಣೆ

ಇಂದು ಬೆಳಗ್ಗೆಯಿಂದ ಪುಲ್ವಾಮಾದಲ್ಲಿ ಉಗ್ರರ ಪತ್ತೆ ಕಾರ್ಯಾಚರಣೆ ಶುರುವಾಗಿದೆ. ಈಗಾಗಲೇ 2-3 ಉಗ್ರರು ಸೆರೆ ಸಿಕ್ಕಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇತ್ತೀಚೆಗಷ್ಟೇ ಶೋಪಿಯಾನಾದಲ್ಲಿ ಹಿಜ್ಬುಲ್ ಮುಜಾಹಿದ್ದೀನ್​ ಉಗ್ರರಿಗೆ ನೆರವು ನೀಡುತ್ತಿದ್ದ 7 ಮಂದಿಯನ್ನು ಅರೆಸ್ಟ್ ಮಾಡಲಾಗಿತ್ತು.

  • TV9 Web Team
  • Published On - 8:35 AM, 9 Apr 2021
ಶೋಪಿಯಾನಾದಲ್ಲಿ ಎನ್​ಕೌಂಟರ್​; ನಾಲ್ವರು ಉಗ್ರರನ್ನು ಹತ್ಯೆ ಮಾಡಿದ ಭದ್ರತಾ ಪಡೆ, ಪುಲ್ವಾಮಾದಲ್ಲಿ ಕಾರ್ಯಾಚರಣೆ
ಪ್ರಾತಿನಿಧಿಕ ಚಿತ್ರ

ಶೋಪಿಯಾನ: ದಕ್ಷಿಣ ಕಾಶ್ಮೀರದ ಶೋಪಿಯಾನಾದಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಭಯೋತ್ಪಾದಕರು ಹತ್ಯೆಗೀಡಾಗಿದ್ದಾರೆ. ನಾಲ್ವರು ಯೋಧರಿಗೆ ಗಾಯವಾಗಿದೆ.

ಗುರುವಾರ ಸಂಜೆ ಶೋಪಿಯಾನಾ ಪಟ್ಟಣದಲ್ಲಿ ಉಗ್ರರು ಇದ್ದಾರೆಂಬ ಖಚಿತ ಮಾಹಿತಿ ಮೇರೆಗೆ ರಕ್ಷಣಾ ಪಡೆಗಳು ಕಾರ್ಯಾಚರಣೆ ಶುರು ಮಾಡಿದ್ದವು. ಈ ವೇಳೆ ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾರೆ. ಇನ್ನಿಬ್ಬರು ಸ್ಥಳೀಯ ಜಾನ್ ಮೊಹಲ್ಲಾ ಮಸೀದಿಯಲ್ಲಿ ಅಡಗಿದ್ದಾರೆ ಎಂದು ಹೇಳಲಾಗಿದೆ. ಈ ಎನ್​ಕೌಂಟರ್​ನಲ್ಲಿ ಸೇನೆಯ ಒಬ್ಬ ಅಧಿಕಾರಿ ಸೇರಿ ಒಟ್ಟು ನಾಲ್ವರು ಅಧಿಕಾರಿಗಳು ಗಾಯಗೊಂಡಿದ್ದಾರೆ.

ಹಾಗೇ ಇಂದು ಬೆಳಗ್ಗೆಯಿಂದ ಪುಲ್ವಾಮಾದಲ್ಲಿ ಉಗ್ರರ ಪತ್ತೆ ಕಾರ್ಯಾಚರಣೆ ಶುರುವಾಗಿದೆ. ಈಗಾಗಲೇ 2-3 ಉಗ್ರರು ಸೆರೆ ಸಿಕ್ಕಿದ್ದಾರೆ ಎಂದು ಮೂಲಗಳು ತಿಳಿಸಿವೆ. ನಿನ್ನೆಯಿಂದ ಶೋಪಿಯಾನಾ ಮತ್ತು ಪುಲ್ವಾಮಾ ಎರಡೂ ಜಿಲ್ಲೆಗಳಲ್ಲಿ ಇಂಟರ್​ನೆಟ್ ಸೇವೆ ಸ್ಥಗಿತಗೊಂಡಿದೆ. ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದೆರಡೂ ಜಿಲ್ಲೆಗಳಲ್ಲಿ ಪದೇಪದೆ ಉಗ್ರರು ಮತ್ತು ರಕ್ಷಣಾ ಪಡೆಗಳ ನಡುವೆ ಎನ್​​ಕೌಂಟರ್ ನಡೆಯುತ್ತಿರುತ್ತದೆ. ಇತ್ತೀಚೆಗಷ್ಟೇ ಶೋಪಿಯಾನಾದಲ್ಲಿ ಹಿಜ್ಬುಲ್ ಮುಜಾಹಿದ್ದೀನ್​ ಉಗ್ರರಿಗೆ ನೆರವು ನೀಡುತ್ತಿದ್ದ 7 ಮಂದಿಯನ್ನು ಅರೆಸ್ಟ್ ಮಾಡಿ, ಅವರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿತ್ತು.

ಇದನ್ನೂ ಓದಿ: Gold Rate Today: ಚಿನ್ನ, ಬೆಳ್ಳಿ ದರ ಏರಿಕೆ.. ಆಭರಣ ಪ್ರಿಯರಿಗೆ ಮೇಲಿಂದ ಮೇಲೆ ನಿರಾಸೆ!

ಮಸ್ಕಿ ವಿಧಾನಸಭಾ ಉಪಚುನಾವಣೆ; ಪ್ರಚಾರದ ವೇಳೆ ಹಣ ಹಂಚಿಕೆ ಆರೋಪ, ಬಿಜೆಪಿ-ಕಾಂಗ್ರೆಸ್ ನಡುವೆ ಮಾರಾಮಾರಿ