ಹೆದ್ದಾರಿಯಲ್ಲಿ ಸಂಚಾರ ಅಪಾಯಗಳು! ಮೃತ್ಯುಕೂಪವಾಗುತ್ತಿದೆ ಬೆಂಗಳೂರು-ಮೈಸೂರು ನೂತನ ಹೆದ್ದಾರಿ

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್​ ಹೈವೆ ನೂತನ ಹೈವೆಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಅಮಾಯಕರು ಸಾವನ್ನಪ್ಪುತ್ತಿದ್ದಾರೆ. ಅಪಘಾತಗಳನ್ನ ತಡೆಯುವ ನಿಟ್ಟಿನಲ್ಲಿ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಮುಂದಾಗಬೇಕಿದೆ.

ಹೆದ್ದಾರಿಯಲ್ಲಿ ಸಂಚಾರ ಅಪಾಯಗಳು! ಮೃತ್ಯುಕೂಪವಾಗುತ್ತಿದೆ ಬೆಂಗಳೂರು-ಮೈಸೂರು ನೂತನ ಹೆದ್ದಾರಿ
ಮೃತ್ಯುಕೂಪವಾಗುತ್ತಿದೆ ಬೆಂಗಳೂರು-ಮೈಸೂರು ನೂತನ ಹೆದ್ದಾರಿ
Follow us
TV9 Web
| Updated By: ಸಾಧು ಶ್ರೀನಾಥ್​

Updated on: Dec 14, 2022 | 4:01 PM

ಅದು ಸಾವಿರಾರು ಕೋಟಿ ರೂ ವೆಚ್ಚದಲ್ಲಿ ಕೆಲವೇ ತಿಂಗಳುಗಳ ಕೆಳಗೆ ನಿರ್ಮಾಣವಾಗಿರೋ ರಾಷ್ಟ್ರೀಯ ಹೆದ್ದಾರಿ. ಕೆಲವೇ ಗಂಟೆಗಳಲ್ಲಿ ಎರಡು ಪ್ರಮುಖ ನಗರಗಳನ್ನ ಬೆಸೆಯುತ್ತದೆ. ಆದರೆ ಇದೇ ಹೆದ್ದಾರಿ (Highway) ಇದೀಗ ಮೃತ್ಯುಕೂಪವಾಗಿ ಪರಿಣಮಿಸಿದೆ. ಹೆದ್ದಾರಿ ಉದ್ಘಾಟನೆಗೂ (Inauguration) ಮೊದಲೇ ಅಪಘಾತಗಳ ಸಂಖ್ಯೆ, ಸಾಯುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೌದು ನೂತನವಾಗಿ ನಿರ್ಮಾಣಗೊಂಡಿರೋ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್​ ಹೈವೆ (Bangalore-Mysore Express Highway) ಉದ್ಘಾಟನೆಗೂ ಮೊದಲೇ ಮೃತ್ಯುಕೂಪವಾಗಿ ಪರಿಣಮಿಸಿದೆ. ದಿನದಿಂದ ದಿನಕ್ಕೆ ಅಪಘಾತಗಳ ಸಂಖ್ಯೆ, ಅಪಘಾತದಿಂದ ಸಾಯುವವರ ಸಂಖ್ಯೆ ಹೆಚ್ಚಾಗುತ್ತಿದೆ. ಅಂದಹಾಗೆ ಸುಮಾರು 9 ಸಾವಿರ ಕೋಟಿ ರೂ ವೆಚ್ಚದಲ್ಲಿ ಬೆಂಗಳೂರಿನಿಂದ ಮೈಸೂರಿನವರೆಗೂ ಸುಮಾರು 130 ಕಿಲೋ ಮೀಟರ್ ದೂರದ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೈವೆಯನ್ನ ನಿರ್ಮಾಣ ಮಾಡಲಾಗಿದೆ.

ಈಗಾಗಲೇ ಶೇ 80ರಷ್ಟು ಕಾಮಗಾರಿ ಮುಗಿದಿದ್ದು, ಬೆಂಗಳೂರಿನಿಂದ ಮಂಡ್ಯದ ವರೆಗೂ ಕಾಮಗಾರಿ ಪೂರ್ಣಗೊಂಡಿದ್ದು, ಅಲ್ಲಲ್ಲಿ ಕಾಮಗಾರಿ ನಡೆಯುತ್ತಿದೆ. ಬೆಂಗಳೂರಿನಿಂದ ಮೈಸೂರಿಗೆ ಕೆಲವೇ ಗಂಟೆಗಳಲ್ಲಿ ಕ್ರಮಿಸಬಹುದಾಗಿದೆ. ಸುಂದರವಾದ ರಸ್ತೆಯಲ್ಲಿ ವಾಹನಗಳ ವೇಗದ ಮಿತಿಗೆ ಇದುವರೆಗೂ ಕಡಿವಾಣ ಬಿದ್ದಿಲ್ಲ. ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ, ಅಪಘಾತದಿಂದಾಗಿ ಸಾಯುವವರ ಸಂಖ್ಯೆ ಹೆಚ್ಚಾಗಿದೆ. ಇದು ವಾಹನ ಸವಾರರು, ಸ್ಥಳೀಯರ ಆತಂಕಕ್ಕೂ ಕೂಡ ಕಾರಣವಾಗಿದೆ. ಹೀಗಾಗಿ ಹೆದ್ದಾರಿಯಲ್ಲಿ ವಾಹನಗಳ ವೇಗದ ಮಿತಿಗೆ ಕಡಿವಾಣ ಹಾಕಬೇಕು ಎಂದು ಒತ್ತಾಯ ಮಾಡುತ್ತಿದ್ದಾರೆ ಸ್ಥಳೀಯರಾದ ರಾಮಾಂಜುನಯ್ಯ.

Also Read: 2023ರಲ್ಲಿ ಪ್ರತಿದಿನ 60 ಕಿಮೀ ಹೆದ್ದಾರಿಗಳನ್ನು ನಿರ್ಮಿಸುವ ಗುರಿಯನ್ನು ಎನ್‌ಎಚ್‌ಎಐ ಹೊಂದಿದೆ: ನಿತಿನ್ ಗಡ್ಕರಿ

ಅಂದಹಾಗೆ ರಾಮನಗರ ಜಿಲ್ಲೆಯಲ್ಲಿ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಈ ವರ್ಷದಲ್ಲಿ 1262 ಅಪಘಾತ ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ 302 ಜನರು ಸಾವನ್ನಪ್ಪಿದ್ರೆ, 1272 ಜನರು ಗಾಯಗೊಂಡಿದ್ದಾರೆ. ಇನ್ನು ನೂತನ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಕಳೆದ ಆರು ತಿಂಗಳಲ್ಲಿ 77 ಅಪಘಾತ ಪ್ರಕರಣಗಳು ಸಂಭವಿಸಿದ್ದು, ಅದರಲ್ಲಿ 28 ಜನರು ಸಾವನ್ನಪ್ಪಿದ್ದಾರೆ. 64 ಜನರಿಗೆ ಗಾಯಗಳಾಗಿವೆ. ಇದು ಕೂಡ ಆತಂಕಕ್ಕೆ ಕೂಡ ಕಾರಣವಾಗಿದೆ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಕೂಡ ಸಂಬಂಧಪಟ್ಟ ಅಧಿಕಾರಿಗಳು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಜೊತೆ ಸಭೆ ನಡೆಸಿ, ಅಪಘಾತಗಳನ್ನ ತಡೆಯುವ ನಿಟ್ಟಿನಲ್ಲಿ ಮುಂಜಾಗ್ರತ ಕ್ರಮಗಳನ್ನ ತೆಗೆದುಕೊಳ್ಳಲು ಮುಂದಾಗಿದ್ದಾರೆ ಎಂದು ರಾಮನಗರ ಎಸ್ ಪಿ ಸಂತೋಷ್ ಬಾಬು ಕೆ ಮಾಹಿತಿ ನಿಡಿದ್ದಾರೆ.

Also Read: ಯಮಲೋಕಕ್ಕೆ ದಾರಿಯಾದಂತಾದ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್! ಬೈಕ್ ಸಂಚಾರ ಬ್ಯಾನ್ ಆಗುತ್ತಾ? ಚರ್ಚೆ ಮತ್ತೆ ಶುರು

ಒಟ್ಟಾರೆ ನೂತನ ಎಕ್ಸ್ ಪ್ರೆಸ್ ಹೈವೆಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಅಮಾಯಕರು ಸಾವನ್ನಪ್ಪುತ್ತಿದ್ದಾರೆ.  ಅಪಘಾತಗಳನ್ನ ತಡೆಯುವ ನಿಟ್ಟಿನಲ್ಲಿ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಮುಂದಾಗಬೇಕಿದೆ.

ವರದಿ: ಪ್ರಶಾಂತ್ ಹುಲಿಕೆರೆ, ಟಿವಿ 9, ರಾಮನಗರ

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್