ಮಾಜಿ ಮುಖ್ಯಮಂತ್ರಿ ಎಸ್.ಆರ್. ಕಂಠಿ ಅವರ ಪತ್ನಿ, ಶತಾಯುಷಿ ಮರಿಬಸಮ್ಮ ವಿಧಿವಶ
ಮಾಜಿ ಸಿಎಂ ಎಸ್.ಆರ್.ಕಂಠಿ ಅವರ ಪತ್ನಿ ಮರಿಬಸಮ್ಮ ಕಂಠಿ(103) ನಿಧನರಾಗಿದ್ದಾರೆ. ಜಿಲ್ಲೆಯ ಕಿತ್ತೂರು ರಾಣಿ ಚೆನ್ನಮ್ಮ ಬಾಲಕಿಯರ ಸೈನಿಕ ವಸತಿ ಶಾಲೆಯಲ್ಲಿ ವಾಸವಿದ್ದ ಮರಿಬಸಮ್ಮ ಇಂದು ಕೊನೆಯುಸಿರೆಳೆದಿದ್ದಾರೆ.
ಬೆಳಗಾವಿ: 1962 ರಲ್ಲಿ 96 ದಿನಗಳ ಕಾಲ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಎಸ್.ಆರ್. ಕಂಠಿ ಅವರ ಪತ್ನಿ ಮರಿಬಸಮ್ಮ ಕಂಠಿ (103) ನಿಧನರಾಗಿದ್ದಾರೆ. ಜಿಲ್ಲೆಯ ಕಿತ್ತೂರು ರಾಣಿ ಚೆನ್ನಮ್ಮ ಬಾಲಕಿಯರ ಸೈನಿಕ ವಸತಿ ಶಾಲೆಯಲ್ಲಿ ವಾಸವಿದ್ದ ಮರಿಬಸಮ್ಮ ಇಂದು ಕೊನೆಯುಸಿರೆಳೆದಿದ್ದಾರೆ.
ಕಾಂಗ್ರೆಸ್ ಸದಸ್ಯರಾಗಿದ್ದ ಮಾಜಿ ಸಿಎಂ S.R. ಕಂಠಿ ಅವರು 1956 ರಿಂದ 1962 ರವರೆಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ್ದರು. 1962 ರಲ್ಲಿ 96 ದಿನಗಳ ಕಾಲ ರಾಜ್ಯದ ಮುಖ್ಯಮಂತ್ರಿಯಾಗಿದ್ದರು.
ನಂತರ, ಎಸ್. ನಿಜಲಿಂಗಪ್ಪ ಸರ್ಕಾರದಲ್ಲಿ ಶಿಕ್ಷಣ ಮಂತ್ರಿಯಾಗಿ ಬೆಂಗಳೂರು ವಿಶ್ವವಿದ್ಯಾಲಯ ಮತ್ತು ಕಿತ್ತೂರು ರಾಣಿ ಚೆನ್ನಮ್ಮ ಸೈನಿಕ್ ಶಾಲೆಗಳ ಸ್ಥಾಪನೆಗೆ ಪ್ರಮುಖ ಪಾತ್ರ ವಹಿಸಿದ್ದರು. ರಾಜಕೀಯದಲ್ಲಿದ್ದರೂ ಇವರು ಆಸ್ತಿ, ಹಣ ಮಾಡಿರಲಿಲ್ಲ. ವಾಸವಾಗಿದ್ದ ತಮ್ಮ ಸ್ವಂತ ಮನೆಯನ್ನೇ ಬಡ ಮಕ್ಕಳ ಶಿಕ್ಷಣಕ್ಕೆ ನೆರವಾಗಲೆಂದು ದಾನ ಮಾಡಿದ್ದರು.
Published On - 2:10 pm, Tue, 8 December 20