BBMP ಮಾಜಿ ಕಾರ್ಪೊರೇಟರ್ ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದೇಕೆ?

ಬೆಂಗಳೂರು: ಮಾಜಿ ಕಾರ್ಪೊರೇಟರ್ ಜಯಪ್ರಕಾಶ್​ ಪತ್ನಿ ನೇಣಿಗೆ ಶರಣಾಗಿರುವ ಘಟನೆ ಕೆ.ಆರ್.ಪುರಂದ ಬಸವನಪುರದಲ್ಲಿ ನಡೆದಿದೆ. ಫ್ಯಾನ್​ಗೆ ನೇಣುಬಿಗಿದುಕೊಂಡು ವಿನೋದಾ(35) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿ ಆತ್ಮಹತ್ಯೆ ವಿಚಾರ ಕೇಳ್ತಿದ್ದಂತೆ ಪತಿ ಜಯಪ್ರಕಾಶ್ ಅಸ್ವಸ್ಥಗೊಂಡಿದ್ದಾರೆ. ಸಚಿವ ಭೈರತಿ ಬಸವರಾಜ್​ ಆಪ್ತ ಹಾಗೂ ಬಸವನಪುರ ವಾರ್ಡ್​ನ ಮಾಜಿ ಕಾರ್ಪೊರೇಟರ್ ಜಯಪ್ರಕಾಶ್ ಪತ್ನಿ ಮನೆಯಲ್ಲಿ ಬೆಳಗ್ಗೆ 9 ಗಂಟೆ ಸುಮಾರಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವೇಳೆ ಕುಟುಂಬಸ್ಥರು ಕೂಡಲೆ ಭಟ್ಟರಹಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ರು ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ವಿನೋದಾ […]

BBMP ಮಾಜಿ ಕಾರ್ಪೊರೇಟರ್ ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದೇಕೆ?

Updated on: Oct 27, 2020 | 2:55 PM

ಬೆಂಗಳೂರು: ಮಾಜಿ ಕಾರ್ಪೊರೇಟರ್ ಜಯಪ್ರಕಾಶ್​ ಪತ್ನಿ ನೇಣಿಗೆ ಶರಣಾಗಿರುವ ಘಟನೆ ಕೆ.ಆರ್.ಪುರಂದ ಬಸವನಪುರದಲ್ಲಿ ನಡೆದಿದೆ. ಫ್ಯಾನ್​ಗೆ ನೇಣುಬಿಗಿದುಕೊಂಡು ವಿನೋದಾ(35) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿ ಆತ್ಮಹತ್ಯೆ ವಿಚಾರ ಕೇಳ್ತಿದ್ದಂತೆ ಪತಿ ಜಯಪ್ರಕಾಶ್ ಅಸ್ವಸ್ಥಗೊಂಡಿದ್ದಾರೆ.

ಸಚಿವ ಭೈರತಿ ಬಸವರಾಜ್​ ಆಪ್ತ ಹಾಗೂ ಬಸವನಪುರ ವಾರ್ಡ್​ನ ಮಾಜಿ ಕಾರ್ಪೊರೇಟರ್ ಜಯಪ್ರಕಾಶ್ ಪತ್ನಿ ಮನೆಯಲ್ಲಿ ಬೆಳಗ್ಗೆ 9 ಗಂಟೆ ಸುಮಾರಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವೇಳೆ ಕುಟುಂಬಸ್ಥರು ಕೂಡಲೆ ಭಟ್ಟರಹಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ರು ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ವಿನೋದಾ ಇತ್ತೀಚೆಗೆ ಅಪೆಂಡಿಕ್ಸ್ ಆಪರೇಷನ್​ಗೆ ಒಳಗಾಗಿದ್ರು . ಈಗ  3 ವರ್ಷದ ಮಗು ಬಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Published On - 1:54 pm, Tue, 27 October 20