AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿನಲ್ಲಿ ಸೊಳ್ಳೆ ಕಾಟ ತಾಳಲಾರದೆ ಒದ್ದಾಡಿದ ಮಾಜಿ ಮಿನಿಸ್ಟರ್, ರಾತ್ರಿ ಇಡೀ ನಿದ್ದೆ ಇಲ್ಲವಂತೆ

ಧಾರವಾಡ: ಜಿ.ಪಂ. ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣ ಸಂಬಂಧ ಮಾಜಿ ಸಚಿವ ವಿನಯ್ ಕುಲಕರ್ಣಿ ಜೈಲು ಸೇರಿದ್ದಾರೆ. ಸಾಮಾನ್ಯ ಕೈದಿಯಂತೆ ಬೆಳಗಾವಿಯ ಹಿಂಡಲಗಾ ಜೈಲಿನ ಕ್ವಾರಂಟೈನ್ ಸೆಲ್​ನಲ್ಲಿ ಒಂದು ರಾತ್ರಿ ಕಳೆದಿದ್ದಾರೆ. ರಾತ್ರಿ ಪೂರ್ತಿ ನಿದ್ದೆ ಮಾಡದ ವಿನಯ್ ಕುಲಕರ್ಣಿ: ವಿನಯ್ ಸೆಲ್​ನಲ್ಲಿ ಟಿವಿ ಸೇರಿದಂತೆ ಯಾವುದೇ ವ್ಯವಸ್ಥೆ ಇಲ್ಲ. ಸೊಳ್ಳೆ ಕಾಟ ತಾಳಲಾರದೆ ಒದ್ದಾಡಿ ರಾತ್ರಿಯಿಡೀ ನಿದ್ದೆ ಮಾಡದೆ ಸೆಲ್​ನಲ್ಲಿಯೇ ಅತ್ತಿಂದಿತ್ತ ಓಡಾಡುತ್ತ ಬೆಳಗಿನ ಜಾವ ನಿದ್ದೆಗೆ ಜಾರಿದ್ರು. ಊಟವಿಲ್ಲದೆ ರಾತ್ರಿ ಕಳೆದಿದ್ದಾರೆ. ವಿನಯ್ […]

ಜೈಲಿನಲ್ಲಿ ಸೊಳ್ಳೆ ಕಾಟ ತಾಳಲಾರದೆ ಒದ್ದಾಡಿದ ಮಾಜಿ ಮಿನಿಸ್ಟರ್, ರಾತ್ರಿ ಇಡೀ ನಿದ್ದೆ ಇಲ್ಲವಂತೆ
ಆಯೇಷಾ ಬಾನು
| Updated By: Skanda|

Updated on:Nov 30, 2020 | 5:25 PM

Share

ಧಾರವಾಡ: ಜಿ.ಪಂ. ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣ ಸಂಬಂಧ ಮಾಜಿ ಸಚಿವ ವಿನಯ್ ಕುಲಕರ್ಣಿ ಜೈಲು ಸೇರಿದ್ದಾರೆ. ಸಾಮಾನ್ಯ ಕೈದಿಯಂತೆ ಬೆಳಗಾವಿಯ ಹಿಂಡಲಗಾ ಜೈಲಿನ ಕ್ವಾರಂಟೈನ್ ಸೆಲ್​ನಲ್ಲಿ ಒಂದು ರಾತ್ರಿ ಕಳೆದಿದ್ದಾರೆ.

ರಾತ್ರಿ ಪೂರ್ತಿ ನಿದ್ದೆ ಮಾಡದ ವಿನಯ್ ಕುಲಕರ್ಣಿ: ವಿನಯ್ ಸೆಲ್​ನಲ್ಲಿ ಟಿವಿ ಸೇರಿದಂತೆ ಯಾವುದೇ ವ್ಯವಸ್ಥೆ ಇಲ್ಲ. ಸೊಳ್ಳೆ ಕಾಟ ತಾಳಲಾರದೆ ಒದ್ದಾಡಿ ರಾತ್ರಿಯಿಡೀ ನಿದ್ದೆ ಮಾಡದೆ ಸೆಲ್​ನಲ್ಲಿಯೇ ಅತ್ತಿಂದಿತ್ತ ಓಡಾಡುತ್ತ ಬೆಳಗಿನ ಜಾವ ನಿದ್ದೆಗೆ ಜಾರಿದ್ರು. ಊಟವಿಲ್ಲದೆ ರಾತ್ರಿ ಕಳೆದಿದ್ದಾರೆ. ವಿನಯ್ ಕುಲಕರ್ಣಿ ವಿಚಾರಣಾಧೀನ ಕೈದಿ ನಂಬರ್ 16635.

ಮಾಜಿ ಸಚಿವರಿಗೆ ಉಪ್ಪಿಟ್ಟೇ ಉಪಾಹಾರ: ಹಿಂಡಲಗಾ ಜೈಲಲ್ಲಿ ಮಾಜಿ ಸಚಿವರಿಗೆ ಉಪ್ಪಿಟ್ಟನ್ನು ಉಪಾಹಾರಕ್ಕೆ ನೀಡಲಾಯಿತು. ಬೆಳಗ್ಗೆ 7.30ಕ್ಕೆ ಉಪಾಹಾರಕ್ಕೆ ಉಪ್ಪಿಟ್ಟು ಹಾಗೂ ಚಹಾ ವ್ಯವಸ್ಥೆ ಮಾಡಲಾಗಿದೆ. ಸಾಮಾನ್ಯ ಕೈದಿಗಳಿಗೆ ಕೊಡುವ ಉಪಾಹಾರವನ್ನೇ ಸಿಬ್ಬಂದಿ ಮಾಜಿ ಸಚಿವ ವಿನಯ್ ಕುಲಕರ್ಣಿಗೂ ಕೊಟ್ಟಿದ್ದಾರೆ.

ಇಂದು ವಿಡಿಯೋ ಕಾನ್ಫರೆನ್ಸ್​ ಮೂಲಕ ಬೆಳಗ್ಗೆ 11.30ಕ್ಕೆ ವಿನಯ್​ ಕುಲಕರ್ಣಿ ವಿಚಾರಣೆ ನಡೆಯುತ್ತೆ. ಧಾರವಾಡ 2ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಪಂಚಾಕ್ಷರಿ ಮುಂದೆ ಹಾಜರು ಪಡಿಸಲಾಗುತ್ತೆ. ಸಿಬಿಐ ಪರ ವಕೀಲರು 3 ದಿನ ವಶಕ್ಕೆ ನೀಡುವಂತೆ ಕೋರಿದ್ದರು. ಆದರೆ ಸಿಬಿಐ ಕೋರಿಕೆ ಮನ್ನಿಸದೆ 1 ದಿನ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಲಾಗಿದ್ದು ಇಂದು ಬೆಳಗ್ಗೆ ಹಾಜರು ಪಡಿಸಬೇಕೆಂದು ನ್ಯಾಯಾಧೀಶರು ತಿಳಿಸಿದ್ದರು. ಅದರಂತೆ ಇಂದು ವಿಚಾರಣೆ ನಡೆಯುತ್ತೆ.

Published On - 8:42 am, Fri, 6 November 20