ಬಲ್ಲಟಗಿ ಜಾತ್ರೆಯಲ್ಲಿ ಕಾಣೆಯಾಗಿದ್ದ ಮಾಜಿ ಶಾಸಕರ ಇಬ್ಬರು ಮೊಮ್ಮಕ್ಕಳು ಹಳ್ಳವೊಂದರಲ್ಲಿ ಶವವಾಗಿ ಪತ್ತೆ..
ನಿನ್ನೆ ಸಂಜೆ ಬಲ್ಲಟಗಿಯಲ್ಲಿ ನಡೆದ ಜಾತ್ರೆಯಲ್ಲಿ ಕಾಣೆಯಾಗಿದ್ದ ಸಣ್ಣಯ್ಯ ಮತ್ತು ವರುಣ ಇಬ್ಬರು ಬಾಲಕರು ಬಲ್ಲಟಗಿ ಗ್ರಾಮದ ಬಳಿಯ ಹಳ್ಳದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಜಾತ್ರೆಯಲ್ಲಿ ಕಾಣೆಯಾಗಿದ್ದರು ಎಂದು ಕುಟುಂಬಸ್ಥರು ತಡರಾತ್ರಿವರೆಗೂ ಬಾಲಕರಿಗಾಗಿ ಹುಡುಕಾಟ ನಡೆಸಿದ್ದರು. ಆದ್ರೆ ಹುಡುಗರು ಮಾತ್ರ ಪತ್ತೆಯಾಗಿರಲಿಲ್ಲ.
ರಾಯಚೂರು: ಮಾಜಿ ಶಾಸಕರ ಇಬ್ಬರು ಮೊಮ್ಮಕ್ಕಳು ಶವವಾಗಿ ಪತ್ತೆಯಾಗಿರುವ ಘಟನೆ ಜಿಲ್ಲೆಯ ಮಾನ್ವಿ ತಾಲೂಕಿನ ಬಲ್ಲಟಗಿ ಗ್ರಾಮದಲ್ಲಿ ನಡೆದಿದೆ. ನಿನ್ನೆ ನಡೆದ ಜಾತ್ರೆಯಲ್ಲಿ ಕಾಣೆಯಾಗಿದ್ದ ಬಾಲಕರಿಬ್ಬರು ಬಲ್ಲಟಗಿ ಗ್ರಾಮದ ಬಳಿ ಇರುವ ಹಳ್ಳವೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಸಣ್ಣಯ್ಯ(7), ವರುಣ(9) ಶವವಾಗಿ ಪತ್ತೆಯಾದ ಬಾಲಕರು.
ನಿನ್ನೆ ಸಂಜೆ ಬಲ್ಲಟಗಿಯಲ್ಲಿ ನಡೆದ ಜಾತ್ರೆಯಲ್ಲಿ ಕಾಣೆಯಾಗಿದ್ದ ಸಣ್ಣಯ್ಯ ಮತ್ತು ವರುಣ ಇಬ್ಬರು ಬಾಲಕರು ಬಲ್ಲಟಗಿ ಗ್ರಾಮದ ಬಳಿಯ ಹಳ್ಳದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಜಾತ್ರೆಯಲ್ಲಿ ಕಾಣೆಯಾಗಿದ್ದರು ಎಂದು ಕುಟುಂಬಸ್ಥರು ತಡರಾತ್ರಿವರೆಗೂ ಬಾಲಕರಿಗಾಗಿ ಹುಡುಕಾಟ ನಡೆಸಿದ್ದರು. ಆದ್ರೆ ಹುಡುಗರು ಮಾತ್ರ ಪತ್ತೆಯಾಗಿರಲಿಲ್ಲ. ಮೃತ ಬಾಲಕರು ಮಾನ್ವಿ ಮಾಜಿ ಶಾಸಕ ಹಂಪಯ್ಯ ನಾಯಕ್ ಅವರ ಮೊಮ್ಮಕ್ಕಳು. ಸ್ಥಳಕ್ಕೆ ಸಿರವಾರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಬಾಲಕನ ಮರ್ಮಾಂಗ ಕತ್ತರಿಸಿ, ಚಿತ್ರಹಿಂಸೆ ನೀಡಿ ಕೊಲೆ: ಭೀಮಾ ನದಿಯ ದಡದಲ್ಲಿ ವಿದ್ಯಾರ್ಥಿ ಶವ ಪತ್ತೆ
Published On - 10:55 am, Mon, 8 March 21