ಕೇಂದ್ರದ ಮಾಜಿ ಸಚಿವ ದಿಲೀಪ್ ರೇಗೆ 3 ವರ್ಷ ಜೈಲುಶಿಕ್ಷೆ

  • Publish Date - 11:58 am, Mon, 26 October 20
ಕೇಂದ್ರದ ಮಾಜಿ ಸಚಿವ ದಿಲೀಪ್ ರೇಗೆ 3 ವರ್ಷ ಜೈಲುಶಿಕ್ಷೆ

ಮೈಸೂರು: ಕೇಂದ್ರದ ಮಾಜಿ ಸಚಿವ ದಿಲೀಪ್ ರೇಗೆ ದೆಹಲಿಯ ಕೋರ್ಟ್ 3 ವರ್ಷ ಜೈಲುಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ದಿಲೀಪ್ ರೇ ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಕಲ್ಲಿದ್ದಲು ಖಾತೆ ರಾಜ್ಯ ಮಂತ್ರಿಯಾಗಿದ್ದರು.

1999 ರಲ್ಲಿ ಜಾರ್ಖಂಡ್ ಕಲ್ಲಿದ್ದಲು ಬ್ಲಾಕ್ ಹಂಚಿಕೆಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿ ಕಲ್ಲಿದ್ದಲು ಹಗರಣ ಪ್ರಕರಣದಲ್ಲಿ ಕೇಂದ್ರದ ಮಾಜಿ ಸಚಿವ ದಿಲೀಪ್ ರೇ ಅಪರಾಧಿ ಎಂದು ಘೋಷಿಸಿದ್ದು, ಇಂದು ದೆಹಲಿಯ ಕೋರ್ಟ್ ಜೈಲುಶಿಕ್ಷೆ ವಿಧಿಸಿದೆ.