ದೇವನಹಳ್ಳಿ: ಗಾಂಧಿ ಜಯಂತಿಯಂದು ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ರೆಸ್ಟೋರೆಂಟ್ ಮೇಲೆ ಅಬಕಾರಿ ಅಧಿಕಾರಿಗಳ ದಾಳಿ ನಡೆಸಿದ್ದಾರೆ. ಅಕ್ರಮವಾಗಿ ಮದ್ಯ ಮಾರಾಟವಾಗುತ್ತಿದ್ದ ಬಗ್ಗೆ ಟಿವಿ 9ನಲ್ಲಿ ಪ್ರಸಾರವಾದ ಹಿನ್ನೆಲೆಯಲ್ಲಿ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಜಿಲ್ಲೆಯ ದೇವನಹಳ್ಳಿ ಬಳಿಯಿರುವ ಭುಕ್ತಿ ರೆಸ್ಟೋರೆಂಟ್ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರೆಸ್ಟೋರೆಂಟ್ ಸಿಬ್ಬಂದಿ ದುಪ್ಪಟ್ಟು ಬೆಲೆಗೆ ಮದ್ಯ ಹಾಗೂ ಮಾಂಸ ಮಾರಾಟ ಮಾಡ್ತಿದ್ದ ಬಗ್ಗೆ ಮಾಹಿತಿ ಪಡೆದ ಅಬಕಾರಿ ಅಧಿಕಾರಿಗಳು ಭುಕ್ತಿ ರೆಸ್ಟೋರೆಂಟ್ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
Published On - 6:00 pm, Fri, 2 October 20