AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಸತ್ತು ತಿಂಗಳಾಗಿಲ್ಲ, ಆಗಲೇ ಶುರವಾಯ್ತು ಉಪಚುನಾವಣೆ ರಾಜಕೀಯ!

ತುಮಕೂರು: ಶಿರಾ ಕ್ಷೇತ್ರದ ಶಾಸಕ ಸತ್ಯನಾರಾಯಣ ಸಾವನ್ನಪ್ಪಿ ತಿಂಗಳು ಕೂಡಾ ಕಳೆದಿಲ್ಲ. ಆದ್ರೆ ಆಗಲೇ ಮುಂದಿನ MLA ಸ್ಥಾನಕ್ಕಾಗಿ ಶಿರಾದಲ್ಲಿ ರಾಜಕೀಯ ಆರಂಭವಾಗಿದೆ. ಹೌದು ಶಿರಾ ಕ್ಷೇತ್ರದಲ್ಲಿ ಈಗ ರಾಜಕೀಯ ಮೇಲಾಟ ಶುರುವಾಗಿದೆ. ಜೆಡಿಎಸ್ ಶಾಸಕ ಸತ್ಯನಾರಾಯಣ ಸಾವಿನಿಂದ ತೆರವಾದ ಶಿರಾ ಕ್ಷೇತ್ರಕ್ಕೆ ತಾನೇ ಶಾಸಕ ಎಂಬಂತೆ ಮಾಜಿ‌ ಸಚಿವ ಟಿ.ಬಿ.ಜಯಚಂದ್ರ ಹೇಮಾವತಿ ನಾಲೆಗೆ ಬಾಗಿನ ಅರ್ಪಿಸಿದ್ದಾರೆ. ಇದನ್ನು ಸಮರ್ಥಿಸಿಕೊಂಡಿರುವ ಟಿಬಿ ಜಯಚಂದ್ರ, ಹೇಮಾವತಿ ನೀರನ್ನು ಶಿರಾ ಕ್ಷೇತ್ರಕ್ಕೆ ಹರಿಸಿದ್ದೀನಿ.  ಹೀಗಾಗಿ ಬಾಗಿನ ಅರ್ಪಿಸಿದ್ದಿನೆ ಎಂದು ತಮ್ಮ […]

ಶಾಸಕ ಸತ್ತು ತಿಂಗಳಾಗಿಲ್ಲ, ಆಗಲೇ ಶುರವಾಯ್ತು ಉಪಚುನಾವಣೆ ರಾಜಕೀಯ!
Guru
Guru| Edited By: ಸಾಧು ಶ್ರೀನಾಥ್​|

Updated on: Aug 14, 2020 | 2:26 PM

Share

ತುಮಕೂರು: ಶಿರಾ ಕ್ಷೇತ್ರದ ಶಾಸಕ ಸತ್ಯನಾರಾಯಣ ಸಾವನ್ನಪ್ಪಿ ತಿಂಗಳು ಕೂಡಾ ಕಳೆದಿಲ್ಲ. ಆದ್ರೆ ಆಗಲೇ ಮುಂದಿನ MLA ಸ್ಥಾನಕ್ಕಾಗಿ ಶಿರಾದಲ್ಲಿ ರಾಜಕೀಯ ಆರಂಭವಾಗಿದೆ. ಹೌದು ಶಿರಾ ಕ್ಷೇತ್ರದಲ್ಲಿ ಈಗ ರಾಜಕೀಯ ಮೇಲಾಟ ಶುರುವಾಗಿದೆ. ಜೆಡಿಎಸ್ ಶಾಸಕ ಸತ್ಯನಾರಾಯಣ ಸಾವಿನಿಂದ ತೆರವಾದ ಶಿರಾ ಕ್ಷೇತ್ರಕ್ಕೆ ತಾನೇ ಶಾಸಕ ಎಂಬಂತೆ ಮಾಜಿ‌ ಸಚಿವ ಟಿ.ಬಿ.ಜಯಚಂದ್ರ ಹೇಮಾವತಿ ನಾಲೆಗೆ ಬಾಗಿನ ಅರ್ಪಿಸಿದ್ದಾರೆ. ಇದನ್ನು ಸಮರ್ಥಿಸಿಕೊಂಡಿರುವ ಟಿಬಿ ಜಯಚಂದ್ರ, ಹೇಮಾವತಿ ನೀರನ್ನು ಶಿರಾ ಕ್ಷೇತ್ರಕ್ಕೆ ಹರಿಸಿದ್ದೀನಿ.  ಹೀಗಾಗಿ ಬಾಗಿನ ಅರ್ಪಿಸಿದ್ದಿನೆ ಎಂದು ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. ಆದರೆ, ಜಯಚಂದ್ರರ ಈ ನಡೆಗೆ ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಸಿಡಿಮಿಡಿಗೊಂಡಿದ್ದಾರೆ. ಸರ್ಕಾರ ನಮ್ಮದು. ಶಿರಾಗೆ ನೀರು‌ ಬಿಟ್ಟವರು ನಾವು. ಮಾಜಿ ಸಚಿವರು ಬಂದು ಬಾಗಿನ ಅರ್ಪಿಸ್ತಾರೆ ಅಂದರೆ ಏನರ್ಥ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ಆದರೆ ಮುಂಬರುವ ಉಪ ಚುನಾವಣೆ ಗಮನದಲ್ಲಿಟ್ಟುಕೊಂಡು ಹೇಮಾವತಿ‌ ನೀರಿನ ರಾಜಕೀಯ ತುಮಕೂರು ಜಿಲ್ಲೆಯಲ್ಲಿ ನಡೆಯುತ್ತಿದೆ. ಉಪಚುನಾವಣೆಯಲ್ಲಿ ಅನುಕೂಲ ಆಗlಎಂದು ಎಲ್ಲಾ ತಾಲೂಕಿಗಿಂತ ಮೊದಲೇ ಶಿರಾಗೆ ಬಿಜೆಪಿ ಸರ್ಕಾರ ನೀರು‌ ಹರಿಸಿದೆ. ಆದ್ರೆ ಅದರ ಕ್ರೆಡಿಟ್ ತೆಗೆದುಕೊಳ್ಳಲು ಮಾಜಿ‌ ಸಚಿವ ಜಯಚಂದ್ರ ಹಾಗೂ ಮಾಧುಸ್ವಾಮಿ ನಡುವೆ ಈಗ ವಾರ್‌ ಶುರುವಾಗಿದೆ!

Follow Us
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್