ಬೆಂಗಳೂರು: ಅಪೋಲೊ ಸಿಬ್ಬಂದಿ ನಿರ್ಲಕ್ಷ್ಯದಿಂದ ಮಹಿಳೆ ಮೃತಪಟ್ಟಿದ್ದಾರೆ ಎಂದು ಆರೋಪಿಸಿ ಆಸ್ಪತ್ರೆಯ ಮುಂದೆ ಮಹಿಳೆ ಶವವಿಟ್ಟು ಕುಟುಂಬಸ್ಥರು ಧರಣಿ ನಡೆಸುತ್ತಿರುವ ಘಟನೆ ಬೆಂಗಳೂರಿನ ಜಯನಗರದಲ್ಲಿರುವ ಅಪೋಲೊ ಆಸ್ಪತ್ರೆ ಮುಂದೆ ಕಂಡು ಬಂದಿದೆ.
ಶನಿವಾರ ಸಂಜೆ ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಸತ್ಯವತಿಯವರನ್ನು ರಾಮಕೃಷ್ಣ ಸೇವಾಶ್ರಮ ಆಸ್ಪತ್ರೆಗೆ ದಾಖಲಿಸಿದ್ದರು. ಒಂದು ದಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ನಂತರ ಬೇರೆ ಆಸ್ಪತ್ರೆಗೆ ತೆಗೆದುಕೊಂಡು ಹೋಗಲು ವೈದ್ಯರು ಸಲಹೆ ನೀಡಿದ್ದರು. ಹೀಗಾಗಿ ಸತ್ಯವತಿಯವರನ್ನು ಪಕ್ಕದಲ್ಲೇ ಇರುವ ಅಪೋಲೋ ಆಸ್ಪತ್ರೆಗೆ ಆ್ಯಂಬುಲೆನ್ಸ್ನಲ್ಲಿ ಕರೆದುಕೊಂಡು ಬರಲಾಗಿತ್ತು.
ಆದರೆ ಆಸ್ಪತ್ರೆ ಸಿಬ್ಬಂದಿ ಸುಮಾರು 45 ನಿಮಿಷಗಳ ಕಾಲ ಆಸ್ಪತ್ರೆ ಮುಂದೆ ನಿಲ್ಲಿಸಿದ್ದಾರೆ. ರೋಗಿ ಸತ್ಯವತಿ ತೀವ್ರ ಉಸಿರಾಟದದಿಂದ ಆ್ಯಂಬುಲೆನ್ಸ್ನಲ್ಲೇ ಉಸಿರು ನಿಂತು ಹೋಗಿದೆ. ಬಳಿಕ ಸತ್ಯವತಿ ಕುಟುಂಬಸ್ಥರು ಗಲಾಟೆ ಮಾಡಿದ ಹಿನ್ನೆಲೆಯಲ್ಲಿ ಅಪೋಲೊ ಆಸ್ಪತ್ರೆ ಸಿಬ್ಬಂದಿ ದಾಖಲಿಸಿಕೊಂಡಿದ್ದಾರೆ.
ಬಳಿಕ ಸತ್ಯವತಿ ಮೃತಪಟ್ಟಿದ್ದಾಗಿ ಆಸ್ಪತ್ರೆಯ ವೈದ್ಯರು ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ಹೀಗಾಗಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಿಂದ ಮಹಿಳೆ ಮೃತಪಟ್ಟಿದ್ದಾಳೆ ಎಂದು ಆಸ್ಪತ್ರೆ ವೈದ್ಯರ ವಿರುದ್ಧ ಆರೋಪಿಸಿ ಕುಟುಂಬಸ್ಥರು ಮೃತ ದೇಹವನ್ನು ಪಡೆಯೋದಿಲ್ಲ ಅಂತ ಆಸ್ಪತ್ರೆಯ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ.