ಇಬ್ಬರು ಮಕ್ಕಳಿಗೆ ಕ್ರಿಮಿನಾಶಕ ಕುಡಿಸಿ, ಆತ್ಮಹತ್ಯೆಗೆ ಶರಣಾದ ದಂಪತಿ
ಕ್ರಿಮಿನಾಶಕ ಸೇವಿಸಿ ಇಬ್ಬರು ಪುಟ್ಟ ಮಕ್ಕಳ ಜೊತೆ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ರಮೇಶ್ ರಾಮದುರ್ಗ ಪಟ್ಟಣದಲ್ಲಿ ಗೊಬ್ಬರದ ಮಳಿಗೆ ಹೊಂದಿದ್ದ. ಆದ್ರೆ ಯಾರಿಗೂ ಸುಳಿವೂ ನೀಡದೆ ಇಡೀ ಕುಟುಂಬ ಆತ್ಮಹತ್ಯೆ ಮಾಡಿಕೊಂಡಿದೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಬೆಳಗಾವಿ: ಜಿಲ್ಲೆಯ ರಾಮದುರ್ಗದಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ಮಕ್ಕಳಿಗೆ ಕ್ರಿಮಿನಾಶಕ ಕುಡಿಸಿ ಹತ್ಯೆಗೈದು, ಆ ಮಕ್ಕಳ ಅಪ್ಪ-ಅಮ್ಮ ಸಹ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರವೀಣ್ ಶೆಟ್ಟರ್(37), ಪತ್ನಿ ರಾಜೇಶ್ವರಿ(27) ಮತ್ತು ಮಕ್ಕಳಾದ ಅಮೃತಾ(8), ಅದ್ವಿಕ್(6) ಆತ್ಮಹತ್ಯೆ ಮಾಡಿಕೊಂಡವರು.
ಕ್ರಿಮಿನಾಶಕ ಸೇವಿಸಿ ಇಬ್ಬರು ಪುಟ್ಟ ಮಕ್ಕಳ ಜೊತೆ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ರಮೇಶ್ ರಾಮದುರ್ಗ ಪಟ್ಟಣದಲ್ಲಿ ಗೊಬ್ಬರದ ಮಳಿಗೆ ಹೊಂದಿದ್ದರು. ಆದ್ರೆ ಚಿಕ್ಕ ಸುಳಿವೂ ನೀಡದೆ ಇಡೀ ಕುಟುಂಬ ಆತ್ಮಹತ್ಯೆ ಮಾಡಿಕೊಂಡಿದೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಸ್ಥಳಕ್ಕೆ ರಾಮದುರ್ಗ ಶಾಸಕ ಮಹಾದೇವಪ್ಪ ಯಾದವಾಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸ್ ಹಾಗೂ FSL ತಂಡ ಘಟನೆಗೆ ಕಾರಣ ಕುರಿತು ಪರಿಶೀಲನೆ ನಡೆಸಿದ್ದಾರೆ. ರಾಮದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.