ಅಂತ್ಯಕ್ರಿಯೆ ಹೆಣಗಾಟ: ನೀರಿನ ಮಧ್ಯೆಯೇ ಶವ ಸಾಗಿಸಲು ಕುಟುಂಬಸ್ಥರ ಪರದಾಟ
ಕೊಪ್ಪಳ: ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದೆ. ಮಳೆಯಿಂದಾಗಿ ಜನ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರಿ ಮಳೆಯಿಂದ ಹಳ್ಳ ತುಂಬಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಹಳ್ಳದಲ್ಲೇ ನಡೆದುಹೋಗಿ ಗ್ರಾಮಸ್ಥರು ವ್ಯಕ್ತಿಯ ಅಂತ್ಯಕ್ರಿಯೆ ನಡೆಸಿರುವ ಘಟನೆ ನಡೆದಿದೆ. ಅಳವಂಡಿ ಗ್ರಾಮದಲ್ಲಿ ನಿನ್ನೆ ಹೃದಯಾಘಾತದಿಂದ ಮೃತಪಟ್ಟಿದ್ದ ರಮೇಶ್ ಎಂಬುವವರ ಅಂತ್ಯಕ್ರಿಯೆ ಮಾಡಲು ಗ್ರಾಮಸ್ಥರು ಹರಿಯೋ ನೀರಿನಲ್ಲಿ ನಡೆದುಕೊಂಡು ಹೋಗಿ ಶವ ಸಂಸ್ಕಾರ ಮಾಡಿದ್ದಾರೆ. ಅಳವಂಡಿ-ಕಂಪ್ಲಿಗೆ ಸಂಪರ್ಕ ಕಲ್ಪಿಸೋ ಹಳ್ಳದ ಕಡೆ ಸ್ಮಶಾನ ಇರೋ ಹಿನ್ನೆಲೆಯಲ್ಲಿ ಮಳೆಯಲ್ಲೇ ಶವ ತಗೆದುಕೊಂಡು ಹೋಗಿ ಕಾರ್ಯಗಳನ್ನು ಮುಗಿಸಿದ್ದಾರೆ.
Follow us on
ಕೊಪ್ಪಳ: ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದೆ. ಮಳೆಯಿಂದಾಗಿ ಜನ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರಿ ಮಳೆಯಿಂದ ಹಳ್ಳ ತುಂಬಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಹಳ್ಳದಲ್ಲೇ ನಡೆದುಹೋಗಿ ಗ್ರಾಮಸ್ಥರು ವ್ಯಕ್ತಿಯ ಅಂತ್ಯಕ್ರಿಯೆ ನಡೆಸಿರುವ ಘಟನೆ ನಡೆದಿದೆ.
ಅಳವಂಡಿ ಗ್ರಾಮದಲ್ಲಿ ನಿನ್ನೆ ಹೃದಯಾಘಾತದಿಂದ ಮೃತಪಟ್ಟಿದ್ದ ರಮೇಶ್ ಎಂಬುವವರ ಅಂತ್ಯಕ್ರಿಯೆ ಮಾಡಲು ಗ್ರಾಮಸ್ಥರು ಹರಿಯೋ ನೀರಿನಲ್ಲಿ ನಡೆದುಕೊಂಡು ಹೋಗಿ ಶವ ಸಂಸ್ಕಾರ ಮಾಡಿದ್ದಾರೆ. ಅಳವಂಡಿ-ಕಂಪ್ಲಿಗೆ ಸಂಪರ್ಕ ಕಲ್ಪಿಸೋ ಹಳ್ಳದ ಕಡೆ ಸ್ಮಶಾನ ಇರೋ ಹಿನ್ನೆಲೆಯಲ್ಲಿ ಮಳೆಯಲ್ಲೇ ಶವ ತಗೆದುಕೊಂಡು ಹೋಗಿ ಕಾರ್ಯಗಳನ್ನು ಮುಗಿಸಿದ್ದಾರೆ.