ಸೂಕ್ತ ಸಮಯಕ್ಕೆ ಬಾರದ ಆ್ಯಂಬುಲೆನ್ಸ್​: ಆಸ್ಪತ್ರೆಯ ಗಾಜುಗಳನ್ನು ಒಡೆದು ಮೃತರ ಕುಟುಂಬಸ್ಥರ ಆಕ್ರೋಶ

ಸೂಕ್ತ ಸಮಯಕ್ಕೆ ಆ್ಯಂಬುಲೆನ್ಸ್​ ಬಾರದ ಹಿನ್ನೆಲೆಯಲ್ಲಿ ಆಸ್ಪತ್ರೆಯ ಗಾಜುಗಳನ್ನು ಒಡೆದು ಮೃತರ ಕುಟುಂಬಸ್ಥರು ಆಕ್ರೋಶ ಹೊರಹಾಕಿರುವ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ.

  • TV9 Web Team
  • Published On - 22:30 PM, 24 Jan 2021
ಸೂಕ್ತ ಸಮಯಕ್ಕೆ ಬಾರದ ಆ್ಯಂಬುಲೆನ್ಸ್​: ಆಸ್ಪತ್ರೆಯ ಗಾಜುಗಳನ್ನು ಒಡೆದು ಮೃತರ ಕುಟುಂಬಸ್ಥರ ಆಕ್ರೋಶ
ಆಸ್ಪತ್ರೆಯ ಗಾಜುಗಳನ್ನು ಒಡೆದು ಕುಟುಂಬಸ್ಥರ ಆಕ್ರೋಶ

ಚಿಕ್ಕಬಳ್ಳಾಪುರ: ಸೂಕ್ತ ಸಮಯಕ್ಕೆ ಆ್ಯಂಬುಲೆನ್ಸ್​ ಬಾರದ ಹಿನ್ನೆಲೆಯಲ್ಲಿ ಆಸ್ಪತ್ರೆಯ ಗಾಜುಗಳನ್ನು ಒಡೆದು ಮೃತರ ಕುಟುಂಬಸ್ಥರು ಆಕ್ರೋಶ ಹೊರಹಾಕಿರುವ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ.

ಏನಿದು ಪ್ರಕರಣ?
ಕೃಷಿಹೊಂಡದಲ್ಲಿ ಮುಳುಗಿ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುಗಲಮರಿ ಗ್ರಾಮದ ಇಬ್ಬರು ಬಾಲಕರು ಸಾವನ್ನಪ್ಪಿದ್ದರು. ಮುಗಲಮರಿ ಗ್ರಾಮದಲ್ಲಿ ಚರಣ್(10) ಮತ್ತು ತೇಜು(11) ಕೃಷಿಹೊಂಡದಲ್ಲಿ ಮುಳುಗಿ ಮೃತಪಟ್ಟಿದ್ದರು.

ಈ ನಡುವೆ, ಸೂಕ್ತ ಸಮಯಕ್ಕೆ ಆ್ಯಂಬುಲೆನ್ಸ್​ ಬಾರದ ಹಿನ್ನೆಲೆಯಲ್ಲಿ ಸಿಟ್ಟಿಗೆದ್ದ ಬಾಲಕರ ಕುಟುಂಬಸ್ಥರು ಚಿಂತಾಮಣಿ ತಾಲೂಕು ಆಸ್ಪತ್ರೆಯಲ್ಲಿ ಗಲಾಟೆ ಮಾಡಿದರು. ಆಸ್ಪತ್ರೆಯ ಗಾಜುಗಳನ್ನು ಒಡೆದು ತಮ್ಮ ಆಕ್ರೋಶ ಹೊರಹಾಕಿದರು.

FDA ಪ್ರಶ್ನೆಪತ್ರಿಕೆ ಸೋರಿಕೆ ಕೇಸ್‌: KPSCಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ SDA ಸಿಸಿಬಿ ವಶಕ್ಕೆ