AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೆಸ್ಟ್ ಮಾಡಿಸದೆ ಪಾಸಿಟಿವ್ ಎಂದು ಕ್ವಾರಂಟೈನ್ ಮಾಡಿದರು, ನಂತರ ನಡೆದದ್ದೆ ಬೇರೆ.

ಚಿಕ್ಕಬಳ್ಳಾಪುರ: ಕೊರೊನಾ ಟೆಸ್ಟ್ ಮಾಡಿಸದೆ ಕೊರೊನಾ ಪಾಸಿಟಿವ್ ಇದೆಯೆಂದು ಕುಟುಂಬದವರನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಕೋವಿಡ್ ಕೇಂದ್ರಕ್ಕೆ ಕರೆದುಕೊಂಡು ಹೋಗಿರುವ ಘಟನೆ ಇಂದು ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ಪಟ್ಟಣದ ಬಾಪೂಜಿನಗರದ ವ್ಯಕ್ತಿಗೆ ಕೊರೊನಾ ಪಾಸಿಟಿವ್ ಇದೆಯೆಂದು ಕರೆಮಾಡಿದ ಆರೋಗ್ಯ ಇಲಾಖಾ ಅಧಿಕಾರಿಗಳು, ಬಾಪೂಜಿನಗರದ ನಿವಾಸಿ ಹಾಗೂ ಆತನ ಕುಟುಂಬಸ್ಥರನ್ನು ಕ್ವಾರಂಟೈನ್ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದಾರೆ. ಇದರಿಂದ ಕೋಪಗೊಂಡ ವ್ಯಕ್ತಿ ನಾನು ಕೊರೊನಾ ಟೆಸ್ಟ್ ಮಾಡಿಸಿಲ್ಲ ಅದು ಹೇಗೆ ಪಾಸಿಟಿವ್ ವರದಿ ಬಂದಿದೆ ಎಂದು ಆರೋಗ್ಯ […]

ಟೆಸ್ಟ್ ಮಾಡಿಸದೆ ಪಾಸಿಟಿವ್ ಎಂದು ಕ್ವಾರಂಟೈನ್ ಮಾಡಿದರು, ನಂತರ ನಡೆದದ್ದೆ ಬೇರೆ.
ಸಾಧು ಶ್ರೀನಾಥ್​
| Edited By: |

Updated on:Jul 26, 2020 | 11:58 PM

Share

ಚಿಕ್ಕಬಳ್ಳಾಪುರ: ಕೊರೊನಾ ಟೆಸ್ಟ್ ಮಾಡಿಸದೆ ಕೊರೊನಾ ಪಾಸಿಟಿವ್ ಇದೆಯೆಂದು ಕುಟುಂಬದವರನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಕೋವಿಡ್ ಕೇಂದ್ರಕ್ಕೆ ಕರೆದುಕೊಂಡು ಹೋಗಿರುವ ಘಟನೆ ಇಂದು ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ಪಟ್ಟಣದ ಬಾಪೂಜಿನಗರದ ವ್ಯಕ್ತಿಗೆ ಕೊರೊನಾ ಪಾಸಿಟಿವ್ ಇದೆಯೆಂದು ಕರೆಮಾಡಿದ ಆರೋಗ್ಯ ಇಲಾಖಾ ಅಧಿಕಾರಿಗಳು, ಬಾಪೂಜಿನಗರದ ನಿವಾಸಿ ಹಾಗೂ ಆತನ ಕುಟುಂಬಸ್ಥರನ್ನು ಕ್ವಾರಂಟೈನ್ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದಾರೆ. ಇದರಿಂದ ಕೋಪಗೊಂಡ ವ್ಯಕ್ತಿ ನಾನು ಕೊರೊನಾ ಟೆಸ್ಟ್ ಮಾಡಿಸಿಲ್ಲ ಅದು ಹೇಗೆ ಪಾಸಿಟಿವ್ ವರದಿ ಬಂದಿದೆ ಎಂದು ಆರೋಗ್ಯ ಇಲಾಖಾ ಅಧಿಕಾರಿಗಳ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾನೆ.

ತಕ್ಷಣ ಎಚ್ಚೆತ್ತುಕೊಂಡ ವೈದ್ಯಕೀಯ ಸಿಬ್ಬಂದಿ ಆ ವ್ಯಕ್ತಿಗೆ ಕೊರೊನಾ ಟೆಸ್ಟ್ ಮಾಡಿಸಿದ್ದಾರೆ. ವರದಿಯಲ್ಲಿ ಕೊರೊನಾ ನೆಗೆಟಿವ್ ಇರುವುದು ತಿಳಿದು ಬಂದಿದೆ. ಹೀಗಾಗಿ ಕೊರೊನಾ ಬರದೇ ಇದ್ದರೂ ಪಾಸಿಟಿವ್ ಬಂದಿದೆ ಎಂದು ಸುಳ್ಳು ಹೇಳಿ ನಮಗೆ ಆರೋಗ್ಯ ಇಲಾಖಾ ಅಧಿಕಾರಿಗಳು ಅವಮಾನ ಮಾಡಿದ್ದಾರೆ ಎಂದು ಗುಡಿಬಂಡೆ ಸಾರ್ವಜನಿಕ ಆಸ್ಪತ್ರೆ ಎದುರು ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದಾರೆ.

Published On - 2:29 pm, Sun, 26 July 20