ರಿಲೀಸ್ಗೂ ಮುನ್ನ.. D ಬಾಸ್ ಫ್ಯಾನ್ಸ್ಗಳಿಂದ ‘ರಾಬರ್ಟ್’ ಸಿನಿಮಾ ಪೋಸ್ಟರ್ ಬಿಡುಗಡೆ
ಮೈಸೂರು: ಸ್ಯಾಂಡಲ್ ವುಡ್ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಿನಿಮಾಗಳ ರಿಲೀಸ್ ಎಂದರೆ ಅಭಿಮಾನಿಗಳ ಪಾಲಿಗೆ ಹಬ್ಬವೇ ಸರಿ. ಹೀಗಾಗಿ, ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರ ಬಹುನಿರೀಕ್ಷೆಯ ಚಿತ್ರ ರಾಬರ್ಟ್ ಬಿಡುಗಡೆಗೆ ಎಲ್ಲ ರೀತಿಯಲ್ಲೂ ಸಿದ್ಧವಾಗಿದೆ. ರಾಬರ್ಟ್ ಸಿನಿಮಾ ಈಗಾಗಲೇ ವಿಭ್ಬಿನ್ನ ಶೈಲಿಯ ಟ್ರೈಲರ್, ಟೀಸರ್ ಹಾಗೂ ಪೋಸ್ಟರ್ಗಳಿಂದ ಸಿನಿಮಾ ಪ್ರಿಯರಲ್ಲಿ ಕುತೂಹಲ ಹೆಚ್ಚು ಮಾಡಿದ್ದು, ಈಗ ಮತ್ತಷ್ಟು ಕುತೂಹಲ ಕೆರಳಿಸುವ ಪೋಸ್ಟರನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಂದಲೇ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಚಾಲೆಂಜಿಂಗ್ […]

ಮೈಸೂರು: ಸ್ಯಾಂಡಲ್ ವುಡ್ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಿನಿಮಾಗಳ ರಿಲೀಸ್ ಎಂದರೆ ಅಭಿಮಾನಿಗಳ ಪಾಲಿಗೆ ಹಬ್ಬವೇ ಸರಿ. ಹೀಗಾಗಿ, ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರ ಬಹುನಿರೀಕ್ಷೆಯ ಚಿತ್ರ ರಾಬರ್ಟ್ ಬಿಡುಗಡೆಗೆ ಎಲ್ಲ ರೀತಿಯಲ್ಲೂ ಸಿದ್ಧವಾಗಿದೆ.
ರಾಬರ್ಟ್ ಸಿನಿಮಾ ಈಗಾಗಲೇ ವಿಭ್ಬಿನ್ನ ಶೈಲಿಯ ಟ್ರೈಲರ್, ಟೀಸರ್ ಹಾಗೂ ಪೋಸ್ಟರ್ಗಳಿಂದ ಸಿನಿಮಾ ಪ್ರಿಯರಲ್ಲಿ ಕುತೂಹಲ ಹೆಚ್ಚು ಮಾಡಿದ್ದು, ಈಗ ಮತ್ತಷ್ಟು ಕುತೂಹಲ ಕೆರಳಿಸುವ ಪೋಸ್ಟರನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಂದಲೇ ಪೋಸ್ಟರ್ ಬಿಡುಗಡೆ ಮಾಡಲಾಗಿದೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ರಾಬರ್ಟ್ ಚಿತ್ರದ ರಿಲೀಸ್ ಡೇಟ್ ಫಿಕ್ಸ್ ಆಗುವ ಮುನ್ನವೇ ಹವಾ ಶುರು ಮಾಡಿದೆ. ಬ್ರಾಂಡ್ ಆಫ್ ಸ್ಯಾಂಡಲ್ವುಡ್ ಡಿ ಬಾಸ್ ಫ್ಯಾನ್ಸ್ ಕೆ.ಆರ್.ನಗರ ಟೀಂನಿಂದ ಹೊಸ ಪೋಸ್ಟರ್ ಬಿಡುಗಡೆ ಆಗಿದೆ. ರಾಬರ್ಟ್ ಚಿತ್ರದ ಕಟೌಟ್ಗೆ ಕ್ಷೀರಾಭಿಷೇಕ ಮಾಡಿದ ಅಭಿಮಾನಿಗಳು ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ.