
ಚಿಕ್ಕಮಗಳೂರು: ರಾಜ್ಯದಲ್ಲಿ ಕೃಷಿ ಮಸೂದೆ ವಿರುದ್ಧ ರೈತರು ಹೋರಾಟ ನಡೆಸುತ್ತಿದ್ದಾರೆ. ಈ ನಡುವೆ ಸಾಲಬಾಧೆಯಿಂದ ಬೇಸತ್ತು ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕೆಂಗೇನಹಳ್ಳಿಯಲ್ಲಿ ನಡೆದಿದೆ.
ಮಲ್ಲೇಶ್(50) ಆತ್ಮಹತ್ಯೆ ಮಾಡಿಕೊಂಡ ರೈತ. ಕೆನರಾ ಬ್ಯಾಂಕ್ ಮತ್ತು ಕೈಸಾಲ ಸೇರಿದಂತೆ ಸುಮಾರು 11 ಲಕ್ಷ ರೂ. ಸಾಲ ಮಾಡಿಕೊಂಡಿದ್ದ. ಈ ಬಾರಿ ಆಲೂಗೆಡ್ಡೆ ಬೆಳೆ ಹಾಕಿದ್ದ. ಆದರೆ ಆ ಬೆಳೆ ಕೂಡ ರೈತನ ಕೈ ಹಿಡಿಯಲಿಲ್ಲ. ಆಲೂಗಡ್ಡೆ ಬೆಳೆ ಕೈಹಿಡಿಯದ ಹಿನ್ನೆಲೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.