
ವಿಜಯಪುರ: ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಮುಳಸಾವಳಗಿ ಬಳಿ ಹಳ್ಳದಲ್ಲಿ ಕೊಚ್ಚಿಹೋಗಿದ್ದ ರೈತನ ಶವ ಇಂದು ಪತ್ತೆಯಾಗಿದೆ. ನಿನ್ನೆ ಹೊಲಕ್ಕೆ ತೆರಳುತ್ತಿದ್ದ ವೇಳೆ ರೈತ ಶಿವಪುತ್ರ ನಾಟೀಕಾರ ಕೊಚ್ಚಿಹೋಗಿದ್ದ. ಇಂದು ಸತತ 5 ಗಂಟೆಗಳ ಕಾಲ ಹುಡುಕಾಟ ನಡೆಸಿದ ನಂತರ ರೈತನ ಶವ ಪತ್ತೆಯಾಗಿದೆ. ಶವವನ್ನು ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಪತ್ತೆಹಚ್ಚಿದ್ದಾರೆ.
ದೇವರಹಿಪ್ಪರಗಿ: ಜಮೀನಿಗೆ ತೆರಳುವಾಗ ಹಳ್ಳದಲ್ಲಿ ಕೊಚ್ಚಿಹೋದ ರೈತ
ಇತ್ತ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಜವಳಗಾ ಗ್ರಾಮದಲ್ಲಿ ನೀರುಪಾಲಾಗಿದ್ದ ಗ್ರಾಮಸ್ಥನೊಬ್ಬನ ಮೃತದೇಹ ಪತ್ತೆಯಾಗಿದೆ. ನಿನ್ನೆ ಸಂಜೆ ಹಳ್ಳದಲ್ಲಿ ಕೊಚ್ಚಿಹೋಗಿದ್ದ ಕುಪ್ಪಣ್ಣನ (32) ಶವ ಪತ್ತೆಯಾಗಿದೆ. ಕುಪ್ಪಣ್ಣ ಜವಳಗಾ ಬಳಿಯ ಹಳ್ಳದಲ್ಲಿ ಕೊಚ್ಚಿಕೊಂಡು ಹೋಗಿದ್ದರು.