ಬಾಗಲಕೋಟೆ: ಕಟಾವು ಮಾಡಿದ್ದ ಬೆಳೆ ನೀರುಪಾಲು, ಹೊಳೆಯಂತೆ ಹರಿಯಿತು ಅನ್ನದಾತನ ಕಣ್ಣೀರು
ಬಾಗಲಕೋಟೆ: ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಸುರಿದ ಧಾರಾಕಾರ ಮಳೆಯಲ್ಲಿ ಕಟಾವು ಮಾಡಿದ್ದ ಕೃಷಿ ಮತ್ತು ತೋಟಗಾರಿಕಾ ಬೆಳೆ ನೀರುಪಾಲಾಗಿರುವ ಘಟನೆ ಮುಧೋಳ ಮತ್ತು ಹುನಗುಂದ ಭಾಗಗಳಲ್ಲಿ ನಡೆದಿದೆ. ಧಾರಾಕಾರ ಮಳೆ ಸುರಿದ ಪರಿಣಾಮ ಕಟಾವು ಮಾಡಿ ಜಮೀನಿನಲ್ಲಿಟ್ಟಿದ್ದ ಈರುಳ್ಳಿ, ಮಕ್ಕೆಜೋಳ, ಮೆಣಸಿನಕಾಯಿ ಸೇರಿ ವಿವಿಧ ಬೆಳೆಗಳು ನೀರುಪಾಲಾಗಿ ಸಂಪೂರ್ಣವಾಗಿ ಹಾಳಾಗಿದೆ. ಕಷ್ಟಪಟ್ಟು ಬೆಳೆದಿದ್ದ ಬೆಳೆ ಮಳೆಗೆ ಹಾಳಾಗಿರುವುದನ್ನು ಕಂಡು ರೈತರು ಕಣ್ಣೀರು ಹಾಕುತ್ತಿದ್ದಾರೆ.

ಬಾಗಲಕೋಟೆ: ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಸುರಿದ ಧಾರಾಕಾರ ಮಳೆಯಲ್ಲಿ ಕಟಾವು ಮಾಡಿದ್ದ ಕೃಷಿ ಮತ್ತು ತೋಟಗಾರಿಕಾ ಬೆಳೆ ನೀರುಪಾಲಾಗಿರುವ ಘಟನೆ ಮುಧೋಳ ಮತ್ತು ಹುನಗುಂದ ಭಾಗಗಳಲ್ಲಿ ನಡೆದಿದೆ.

ಧಾರಾಕಾರ ಮಳೆ ಸುರಿದ ಪರಿಣಾಮ ಕಟಾವು ಮಾಡಿ ಜಮೀನಿನಲ್ಲಿಟ್ಟಿದ್ದ ಈರುಳ್ಳಿ, ಮಕ್ಕೆಜೋಳ, ಮೆಣಸಿನಕಾಯಿ ಸೇರಿ ವಿವಿಧ ಬೆಳೆಗಳು ನೀರುಪಾಲಾಗಿ ಸಂಪೂರ್ಣವಾಗಿ ಹಾಳಾಗಿದೆ. ಕಷ್ಟಪಟ್ಟು ಬೆಳೆದಿದ್ದ ಬೆಳೆ ಮಳೆಗೆ ಹಾಳಾಗಿರುವುದನ್ನು ಕಂಡು ರೈತರು ಕಣ್ಣೀರು ಹಾಕುತ್ತಿದ್ದಾರೆ.



