AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರ್ಯಾಕ್ಟರ್ ನೇಗಿಲಿಗೆ ಸಿಲುಕಿ ನಾಗರಹಾವು ನರಳಾಟ, 4 ದಿನ ರೆಸ್ಟ್!

ಚಿಕ್ಕಮಗಳೂರು: ಜಮೀನೊಂದರಲ್ಲಿ ಟ್ರ್ಯಾಕ್ಟರ್​ನ ನೇಗಿಲಿಗೆ ಸಿಕ್ಕಿ ಹಾಕಿಕೊಂಡಿದ್ದ ಬೃಹತ್ ಗಾತ್ರದ ಹನ್ನೊಂದು ವರ್ಷದ ನಾಗರಹಾವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿರುವಂತಹ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಗುಬ್ಬಿಗಾ ಗ್ರಾಮದಲ್ಲಿ ನಡೆದಿದೆ. ಗುಬ್ಬಿಗಾ ಗ್ರಾಮದ ಗೋಪಾಲಾಚಾರ್ ಎಂಬುವವರು ತಮ್ಮ ಗದ್ದೆಯಲ್ಲಿ ಉಳುಮೆ ಮಾಡುವಾಗ ಟ್ರ್ಯಾಕ್ಟರ್​ನ ನೇಗಿಲಿಗೆ ನಾಗರಹಾವು ಸಿಲುಕಿಕೊಂಡಿದೆ. ಈ ವೇಳೆ ಸಿಕ್ಕಿ ಹಾಕಿಕೊಂಡಿದ್ದ ನಾಗರಹಾವು ಬಿಡಿಸಿಕೊಳ್ಳಲಾಗದೇ ಸಾವು-ಬದುಕಿನ ಮಧ್ಯೆ ಹೋರಾಟ ನಡೆಸಿದೆ. ಕೂಡಲೇ ಉಳುಮೆ ಮಾಡುವುದನ್ನು ನಿಲ್ಲಿಸಿದ ರೈತ ನಾಗರಹಾವಿನ ಸ್ಥಿತಿ ಕಂಡು ಕಣ್ಣೀರು ಹಾಕಿದ್ದಾರೆ. ಗೊತ್ತಿಲ್ಲದೇ, […]

ಟ್ರ್ಯಾಕ್ಟರ್ ನೇಗಿಲಿಗೆ ಸಿಲುಕಿ ನಾಗರಹಾವು ನರಳಾಟ, 4 ದಿನ ರೆಸ್ಟ್!
ಸಾಧು ಶ್ರೀನಾಥ್​
| Edited By: |

Updated on:May 21, 2020 | 4:01 PM

Share

ಚಿಕ್ಕಮಗಳೂರು: ಜಮೀನೊಂದರಲ್ಲಿ ಟ್ರ್ಯಾಕ್ಟರ್​ನ ನೇಗಿಲಿಗೆ ಸಿಕ್ಕಿ ಹಾಕಿಕೊಂಡಿದ್ದ ಬೃಹತ್ ಗಾತ್ರದ ಹನ್ನೊಂದು ವರ್ಷದ ನಾಗರಹಾವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿರುವಂತಹ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಗುಬ್ಬಿಗಾ ಗ್ರಾಮದಲ್ಲಿ ನಡೆದಿದೆ. ಗುಬ್ಬಿಗಾ ಗ್ರಾಮದ ಗೋಪಾಲಾಚಾರ್ ಎಂಬುವವರು ತಮ್ಮ ಗದ್ದೆಯಲ್ಲಿ ಉಳುಮೆ ಮಾಡುವಾಗ ಟ್ರ್ಯಾಕ್ಟರ್​ನ ನೇಗಿಲಿಗೆ ನಾಗರಹಾವು ಸಿಲುಕಿಕೊಂಡಿದೆ.

ಈ ವೇಳೆ ಸಿಕ್ಕಿ ಹಾಕಿಕೊಂಡಿದ್ದ ನಾಗರಹಾವು ಬಿಡಿಸಿಕೊಳ್ಳಲಾಗದೇ ಸಾವು-ಬದುಕಿನ ಮಧ್ಯೆ ಹೋರಾಟ ನಡೆಸಿದೆ. ಕೂಡಲೇ ಉಳುಮೆ ಮಾಡುವುದನ್ನು ನಿಲ್ಲಿಸಿದ ರೈತ ನಾಗರಹಾವಿನ ಸ್ಥಿತಿ ಕಂಡು ಕಣ್ಣೀರು ಹಾಕಿದ್ದಾರೆ. ಗೊತ್ತಿಲ್ಲದೇ, ಕಣ್ತಪ್ಪಿನಿಂದ ನಡೆದ ಅನಾಹುತಕ್ಕಾಗಿ ಮಮ್ಮುಲ ಮರುಗಿದ್ದಾರೆ. ತಡಮಾಡದೆ ಸಮೀಪದ ಕುದುರೆಗುಂಡಿಯ ಉರಗತಜ್ಞ ಹರೀಂದ್ರಗೆ ವಿಷಯ ತಿಳಿಸಿದ್ದಾರೆ.

ಪಶು ಆಸ್ಪತ್ರೆಯಲ್ಲಿ ನಾಗರಹಾವಿಗೆ ಚಿಕಿತ್ಸೆ: ಸ್ಥಳಕ್ಕೆ ಬಂದ ಹರೀಂದ್ರ, ನೇಗಿಲಿಗೆ ಸಿಲುಕಿಕೊಂಡಿದ್ದ ನಾಗರಹಾವನ್ನ ಬಿಡಿಸಿ ಸ್ಥಳೀಯರಾದ ಅರುಣ್ ಹಾಗೂ ಸಾಜು ಎಂಬುವವರ ಸಹಾಯದಿಂದ ಎನ್.ಆರ್.ಪುರದ ಪಶು ಆಸ್ಪತ್ರೆಗೆ ತಂದಿದ್ದಾರೆ. ಪಶು ಆಸ್ಪತ್ರೆ ವೈದ್ಯ ವಿಜಯ್ ಕುಮಾರ್ ಹಾಗೂ ಶಿವಕುಮಾರ್ ಸುಮಾರು ಅರ್ಧ ಗಂಟೆಗಳ ಕಾಲ ಹಾವಿಗೆ ಶಸ್ತ್ರ ಚಿಕಿತ್ಸೆ ಮಾಡಿದ್ದಾರೆ. ಹಾವು ಟ್ರ್ಯಾಕ್ಟರ್ ನೇಗಿಲಿಗೆ ಸಿಕ್ಕಿದರಿಂದ ಹಾವಿನ ತಲೆ, ಹೊಟ್ಟೆ ಭಾಗಕ್ಕೆ ತೀವ್ರ ಪೆಟ್ಟಾಗಿತ್ತು.

ಹಾವಿಗೆ ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು ಹಾವಿನ ಹೊಟ್ಟೆ ಭಾಗದಲ್ಲಿ ಸುಮಾರು ಒಂದು ಇಂಚಿನಷ್ಟು ಹೊಲಿಗೆ ಹಾಕಿದ್ದಾರೆ. ಹಾವಿಗೆ ಬೆನ್ನಿನ ಒಂದು ಎಲುಬು ಕೂಡ ಮುರಿದಿದೆ. ಶಸ್ತ್ರ ಚಿಕಿತ್ಸೆಗೆ ಒಳಗಾದ ನಾಗರಹಾವಿಗೆ ಸುಮಾರು ಮೂರ್ನಾಲ್ಕು ದಿನಗಳ ಕಾಲ ಚಿಕಿತ್ಸೆಯ ಅಗತ್ಯವಿದ್ದು, ಹಾವನ್ನ ಪಶು ಆಸ್ಪತ್ರೆಯಲ್ಲೇ ಇರಿಸಲಾಗಿದೆ. ಚಿಕಿತ್ಸೆಯ ಬಳಿಕವಷ್ಟೆ ಹಾವು ಚೇತರಿಸಿಕೊಳ್ಳಲಿದೆ. ಒಟ್ಟಿನಲ್ಲಿ ತಾನು ಉಳುಮೆ ಮಾಡುತ್ತಿದ್ದಾಗ ಕಣ್ತಪ್ಪಿನಿಂದ ನಡೆದ ಅಚಾತುರ್ಯಕ್ಕೆ ರೈತ ಮರುಕ ಪಟ್ಟ ರೀತಿ ಹಾಗೆಯೇ ಹಾವು ಬದುಕಿಸಲು ರೈತನು ತೋರಿದ ಕಾಳಜಿ ನಿಜಕ್ಕೂ ಶ್ಲಾಘನೀಯ.

Published On - 10:22 am, Thu, 21 May 20

ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ