AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೂಲಿಗಾಗಿ ಬಂದವರು ರೋಗ ಪೀಡಿತರಾಗಿ ಬೀದಿಗೆ ಬಿದ್ದರು, ಎಲ್ಲಿ?

ತುಮಕೂರು: ಕೂಲಿಗಾಗಿ ಬಂದವರು ರೋಗ ಪೀಡಿತರಾಗಿ ಬೀದಿಗೆ ಬಿದ್ದಿರುವ ಮನಕಲುಕುವ ಘಟನೆ ‌ಜಿಲ್ಲೆಯ ಗುಬ್ಬಿ ಪಟ್ಟಣದಲ್ಲಿ ನೆಡೆದಿದೆ. ತಿಪಟೂರು ತಾಲೂಕಿನವರಾದ ಈ ಬಡ ವ್ಯಕ್ತಿ ತನ್ನ ಮಗಳೊಂದಿಗೆ ಗುಬ್ಬಿ ಪಟ್ಟಣಕ್ಕೆ ಗಾರೆ ಕೆಲಸ ಅರಸಿ ಬಂದಿದ್ದರು. ಆದರೆ ಕೊರೊನಾ ಹಾಗೂ ಲಾಕ್​ಡೌನ್​ನಿಂದಾಗಿ ಕೆಲಸವಿಲ್ಲದೆ ಬದುಕು ದುಸ್ತರವಾಯಿತು. ಆಶ್ರಯ ಬಯಸಿ ಇಬ್ಬರು ಪಟ್ಟಣದ ಒಕ್ಕಲಿಗ ಸಮುದಾಯ ಭವನದ ಬಳಿ ನೆಲೆ ಊರುವಂತಾಯಿತು. ಜೊತೆಗೆ, ಊಟ ತಿಂಡಿ ಇಲ್ಲದೆ ಪರದಾಡುವಂತಾಯಿತು. ಇನ್ನೂ ಈ ಬಡ ಕೂಲಿ ಕಾರ್ಮಿಕನಿಗೆ ಕ್ಷಯ ರೋಗವಿದೆ. […]

ಕೂಲಿಗಾಗಿ ಬಂದವರು ರೋಗ ಪೀಡಿತರಾಗಿ ಬೀದಿಗೆ ಬಿದ್ದರು, ಎಲ್ಲಿ?
ಸಾಧು ಶ್ರೀನಾಥ್​
| Edited By: |

Updated on:Jul 12, 2020 | 7:12 PM

Share

ತುಮಕೂರು: ಕೂಲಿಗಾಗಿ ಬಂದವರು ರೋಗ ಪೀಡಿತರಾಗಿ ಬೀದಿಗೆ ಬಿದ್ದಿರುವ ಮನಕಲುಕುವ ಘಟನೆ ‌ಜಿಲ್ಲೆಯ ಗುಬ್ಬಿ ಪಟ್ಟಣದಲ್ಲಿ ನೆಡೆದಿದೆ.

ತಿಪಟೂರು ತಾಲೂಕಿನವರಾದ ಈ ಬಡ ವ್ಯಕ್ತಿ ತನ್ನ ಮಗಳೊಂದಿಗೆ ಗುಬ್ಬಿ ಪಟ್ಟಣಕ್ಕೆ ಗಾರೆ ಕೆಲಸ ಅರಸಿ ಬಂದಿದ್ದರು. ಆದರೆ ಕೊರೊನಾ ಹಾಗೂ ಲಾಕ್​ಡೌನ್​ನಿಂದಾಗಿ ಕೆಲಸವಿಲ್ಲದೆ ಬದುಕು ದುಸ್ತರವಾಯಿತು. ಆಶ್ರಯ ಬಯಸಿ ಇಬ್ಬರು ಪಟ್ಟಣದ ಒಕ್ಕಲಿಗ ಸಮುದಾಯ ಭವನದ ಬಳಿ ನೆಲೆ ಊರುವಂತಾಯಿತು. ಜೊತೆಗೆ, ಊಟ ತಿಂಡಿ ಇಲ್ಲದೆ ಪರದಾಡುವಂತಾಯಿತು. ಇನ್ನೂ ಈ ಬಡ ಕೂಲಿ ಕಾರ್ಮಿಕನಿಗೆ ಕ್ಷಯ ರೋಗವಿದೆ. ಆದರೆ, ಕಾಯಿಲೆಗೆ ಚಿಕಿತ್ಸೆ ಕೊಡಿಸಲು ಹಣವಿಲ್ಲದೆ ಆತನ ಮಗಳು ಪರದಾಡುತ್ತಿದ್ದಳು.

ಇವರ ಸ್ಥಿತಿ ಕಂಡ ಸ್ಥಳೀಯರು ದಿನನಿತ್ಯದ ಊಟದ ವ್ಯವಸ್ಥೆಗೆ ಏರ್ಪಾಡು ಮಾಡಿದ್ದರು ಎಂದು ತಿಳಿದುಬಂದಿದೆ. ಹಾಗೆಯೇ, ಸ್ಥಳೀಯ ಶಾಸಕ ಎಸ್ ಆರ್ ಶ್ರೀನಿವಾಸ್ ಬೆಂಬಲಿಗರು ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ ಎನ್ನಲಾಗಿದೆ. ದುರಾದೃಷ್ಟವೆಂಬಂತೆ ಆತನ ಮಗಳೂ ಸಹ ಕಾಮಾಲೆಯಿಂದ ಬಳಲುತ್ತಿದ್ದಾಳೆ ಎಂದು ತಿಳಿದುಬಂದಿದೆ. ಹಾಗಾಗಿ, ಈಕೆಗೂ ಸೂಕ್ತ ಚಿಕಿತ್ಸೆ ಕೊಡಿಸಬೇಕೆಂದು ಸ್ಥಳೀಯರು ಸಹೃದಯಿಗಳಿಗೆ ಮನವಿ ಮಾಡಿಕೊಂಡಿದ್ದಾರೆ.

Published On - 6:47 pm, Sun, 12 July 20

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್