ವಿಜಯಪುರ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸಿಂದಗಿ ಕ್ಷೇತ್ರದ ಜೆಡಿಎಸ್ ಶಾಸಕ ಎಂ.ಸಿ.ಮನಗೂಳಿ ಉಸಿರಾಟದ ಸಮಸ್ಯೆಯಿಂದ ನಿನ್ನೆ (ಜ.28)ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ವಿಧಿವಶರಾದ್ರು. ಇಂದು (ಜ.29)ವಿಜಯಪುರ ಜಿಲ್ಲೆ ಸಿಂದಗಿ ಪಟ್ಟಣದಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ.
ಸಿಂದಗಿ ಪಟ್ಟಣದಲ್ಲಿರುವ ತಾಲೂಕು ಶಿಕ್ಷಣ ಪ್ರಸಾರ ಮಂಡಳಿ ಆವರಣದಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮನಗೂಳಿ ಅವರ ನಿವಾಸದಿಂದ ಅಂತ್ಯಕ್ರಿಯೆ ನಡೆಸುವ ಸ್ಥಳದವರೆಗೆ ಪಾರ್ಥಿವ ಶರೀರದ ಮೆರವಣಿಗೆ ನಡೆಯಲಿದೆ. ಬಳಿಕ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನಕ್ಕೆ ಅವಕಾಶ ನೀಡಲಾಗುತ್ತೆ. ಎಂ.ಸಿ.ಮನಗೂಳಿ ಅಂತ್ಯಕ್ರಿಯೆಯಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಡಿಸಿಎಂ ಗೋವಿಂದ ಕಾರಜೋಳ ಸೇರಿದಂತೆ ಜನಪ್ರತಿನಿಧಿಗಳು, ಮಠಾಧೀಶರು, ಗಣ್ಯರು ಭಾಗಿಯಾಗಲಿದ್ದಾರೆ. ಬಳಿಕ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ.
ಸಿಂದಗಿ ಕ್ಷೇತ್ರದ ಶಾಸಕ ಎಂ.ಸಿ.ಮನಗೂಳಿ ವಿಧಿವಶ
Published On - 8:35 am, Fri, 29 January 21