ಬಿಗ್​ಬಾಸ್ ಖ್ಯಾತಿಯ ಪ್ರಥಮ್ ವಿರುದ್ಧ SDPIಯಿಂದ ದೂರು​ ದಾಖಲು, ಯಾಕೆ?

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ವಿಡಿಯೋಗೆ ಕಾಮೆಂಟ್ ಮಾಡಿದ ಆರೋಪದಡಿ ಬಿಗ್​ಬಾಸ್​ ಖ್ಯಾತಿಯ ಪ್ರಥಮ್ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ FIR ದಾಖಲಿಸಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ವಿಡಿಯೋಗೆ ಪ್ರಥಮ್ ಕಾಮೆಂಟ್ ಮಾಡಿದ್ದರಂತೆ. ಹೀಗಾಗಿ, ತಮ್ಮ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡಿರುವ ಹೇಳಿಕೆಯನ್ನು ಪ್ರಥಮ್​ ಪೋಸ್ಟ್ ಮಾಡಿರುವುದಾಗಿ SDPI ಜಿಲ್ಲಾ ಸಮಿತಿ ಸದಸ್ಯ ಉಮರ್ ಫಾರೂಕ್ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನನ್ವಯ ಎಫ್ಐಆರ್ ದಾಖಲಿಸಿಕೊಂಡ ಹಲಸೂರು ಗೇಟ್ ಪೊಲೀಸರು, ಪ್ರಥಮ್​ನ ಬಂಧಿಸಲು […]

ಬಿಗ್​ಬಾಸ್ ಖ್ಯಾತಿಯ ಪ್ರಥಮ್ ವಿರುದ್ಧ SDPIಯಿಂದ ದೂರು​ ದಾಖಲು, ಯಾಕೆ?
ಸಾಧು ಶ್ರೀನಾಥ್​

Updated on: Aug 17, 2020 | 7:23 PM

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ವಿಡಿಯೋಗೆ ಕಾಮೆಂಟ್ ಮಾಡಿದ ಆರೋಪದಡಿ ಬಿಗ್​ಬಾಸ್​ ಖ್ಯಾತಿಯ ಪ್ರಥಮ್ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ FIR ದಾಖಲಿಸಲಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ವಿಡಿಯೋಗೆ ಪ್ರಥಮ್ ಕಾಮೆಂಟ್ ಮಾಡಿದ್ದರಂತೆ. ಹೀಗಾಗಿ, ತಮ್ಮ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡಿರುವ ಹೇಳಿಕೆಯನ್ನು ಪ್ರಥಮ್​ ಪೋಸ್ಟ್ ಮಾಡಿರುವುದಾಗಿ SDPI ಜಿಲ್ಲಾ ಸಮಿತಿ ಸದಸ್ಯ ಉಮರ್ ಫಾರೂಕ್ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನನ್ವಯ ಎಫ್ಐಆರ್ ದಾಖಲಿಸಿಕೊಂಡ ಹಲಸೂರು ಗೇಟ್ ಪೊಲೀಸರು, ಪ್ರಥಮ್​ನ ಬಂಧಿಸಲು ಮುಂದಾಗಿದ್ದಾರೆ.

Published On - 7:22 pm, Mon, 17 August 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us