ಬೆಂಗಳೂರು: ಬರೋಬ್ಬರಿ ಎಂಟು ತಿಂಗಳ ಬಳಿಕ ಕೊನೆಗೂ ರಾಜ್ಯಾದ್ಯಂತ ಕಾಲೇಜುಗಳು ರೀ ಓಪನ್ ಆಗಿವೆ. ಸರ್ಕಾರದ ಮಾರ್ಗ ಸೂಚಿಯಂತೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ವಿವೇಕಾನಂದ ಕಾಲೇಜಿನಲ್ಲಿ ತರಗತಿಗಳು ಆರಂಭವಾಗಿವೆ.
ಬೆಂಗಳೂರಿನ ರಾಜಾಜಿನಗರದಲ್ಲಿರುವ ವಿವೇಕಾನಂದ ಕಾಲೇಜಿನಲ್ಲಿ ತರಗತಿಗಳು ಆರಂಭವಾಗಿದ್ದು ವಿದ್ಯಾರ್ಥಿಗಳು ಮಾಸ್ಕ್ ಧರಿಸಿ, ದೈಹಿಕ ಅಂತರ ಕಾಪಾಡಿಕೊಂಡು ಪಾಠ ಕೇಳುತ್ತಿದ್ದಾರೆ. ಇಷ್ಟು ದಿನಗಳು ಮನೆಯಲ್ಲಿ ಕೂತು ಸದ್ಯ ಈಗ ಕಾಲೇಜು ಓಪನ್ ಆಗಿರೋದು ಖುಷಿ ತಂದಿದೆ. ನಮ್ಮ ಎಚ್ಚರಿಕೆಯಲ್ಲಿ ನಾವು ಇದ್ರೆ ಕೊರೊನಾದಿಂದ ದೂರ ಇರಬಹುದು ಎಂದು ವಿದ್ಯಾರ್ಥಿನಿಯರು ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.
ಇನ್ನು ನಗರದ ಸೇಂಟ್ ಜೋಸೆಫ್ ಕಾಲೇಜಿನಲ್ಲೂ ವಿದ್ಯಾರ್ಥಿಗಳು ಉತ್ಸಾಹಕರಾಗಿ ತರಗತಿಗಳನ್ನು ಅಟೆಂಡ್ ಮಾಡ್ತಿದ್ದಾರೆ. ಮಾರ್ಗಸೂಚಿಗಳನ್ನು ಪಾಲಿಸುವ ಮೂಲಕ ತರಗತಿಗಳಲ್ಲಿ ಮಗ್ನರಾಗಿದ್ದಾರೆ. ಇಂದಿನಿಂದ ರಾಜ್ಯಾದ್ಯಂತ ಕಾಲೇಜುಗಳು ಶುರುವಾದ್ರೂ ಬಹುತೇಕ ವಿದ್ಯಾರ್ಥಿಗಳು ಕಾಲೇಜುಗಳತ್ತ ಮುಖ ಮಾಡಿಲ್ಲ. ನಗರದಲ್ಲಿ ಕೆಲವು ಕಾಲೇಜುಗಳು ಮಾತ್ರ ಓಪನ್ ಆಗಿವೆ. ಪೋಷಕರಲ್ಲಿ ಹಾಗೂ ವಿದ್ಯಾರ್ಥಿಗಳಲ್ಲಿ ಇನ್ನೂ ಕೊರೊನಾ ಭಯ ದೂರವಾಗಿಲ್ಲ.
ಇದನ್ನೂ ಓದಿ: ಕಾಲೇಜುಗಳು ಮತ್ತು ವಿದ್ಯಾರ್ಥಿಗಳು ಇದನ್ನು ಪಾಲಿಸಲೇ ಬೇಕು.. ಇಲ್ಲದಿದ್ದರೆ ಆಪತ್ತು ಕಟ್ಟಿಟ್ಟ ಬುತ್ತಿ