ಇನ್ನು ಮುಂದೆ ಬೆಂಗಳೂರಿನಲ್ಲಿ ಆನ್ಲೈನ್ನಲ್ಲೇ ಪಡೆಯಿರಿ ತಾಜಾ ಮೀನಿನ ಚಿಪ್ಸ್..!
ಬೆಂಗಳೂರು: ಇನ್ನು 15 ದಿನದಲ್ಲಿ ಹೆಜಮಾಡಿ ಬಂದರು ಕಾಮಗಾರಿಗೆ ಶಿಲಾನ್ಯಾಸ ಮಾಡಲಾಗುವುದು ಎಂದು ವಿಧಾನಸೌಧದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ ನೀಡಿದ್ದಾರೆ. ಆನ್ಲೈನ್ನಲ್ಲಿ ತಾಜಾ ಮೀನು ಮಾರಾಟ.. ಅಲ್ಲದೆ ಮೀನಿನ ಚಿಪ್ಸ್ ಸೇರಿದಂತೆ ಮೀನು ಖಾದ್ಯಗಳಿಗೆ ಭಾರಿ ಬೇಡಿಕೆ ಇದೆ. ಹಾಗಾಗಿ ರೈಲ್ವೆ ಜತೆ ಒಪ್ಪಂದ ಮಾಡಿಕೊಂಡು ಮೀನು ಖಾದ್ಯಗಳ ಮಾರಾಟದ ವ್ಯವಸ್ಥೆ ಮಾಡಲಾಗುತ್ತಿದೆ. ಜೊತೆಗೆ ಇಂದಿನಿಂದ ಬೆಂಗಳೂರಿನಲ್ಲಿ ಆನ್ಲೈನ್ನಲ್ಲಿ ತಾಜಾ ಮೀನು ಮಾರಾಟದ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದೆ. ಅಲ್ಲದೆ ಆರ್ಡರ್ ಮಾಡಿದ ಒಂದು ಗಂಟೆಯೊಳಗೆ ಗ್ರಾಹಕರ […]

ಬೆಂಗಳೂರು: ಇನ್ನು 15 ದಿನದಲ್ಲಿ ಹೆಜಮಾಡಿ ಬಂದರು ಕಾಮಗಾರಿಗೆ ಶಿಲಾನ್ಯಾಸ ಮಾಡಲಾಗುವುದು ಎಂದು ವಿಧಾನಸೌಧದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ ನೀಡಿದ್ದಾರೆ.
ಆನ್ಲೈನ್ನಲ್ಲಿ ತಾಜಾ ಮೀನು ಮಾರಾಟ.. ಅಲ್ಲದೆ ಮೀನಿನ ಚಿಪ್ಸ್ ಸೇರಿದಂತೆ ಮೀನು ಖಾದ್ಯಗಳಿಗೆ ಭಾರಿ ಬೇಡಿಕೆ ಇದೆ. ಹಾಗಾಗಿ ರೈಲ್ವೆ ಜತೆ ಒಪ್ಪಂದ ಮಾಡಿಕೊಂಡು ಮೀನು ಖಾದ್ಯಗಳ ಮಾರಾಟದ ವ್ಯವಸ್ಥೆ ಮಾಡಲಾಗುತ್ತಿದೆ. ಜೊತೆಗೆ ಇಂದಿನಿಂದ ಬೆಂಗಳೂರಿನಲ್ಲಿ ಆನ್ಲೈನ್ನಲ್ಲಿ ತಾಜಾ ಮೀನು ಮಾರಾಟದ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದೆ. ಅಲ್ಲದೆ ಆರ್ಡರ್ ಮಾಡಿದ ಒಂದು ಗಂಟೆಯೊಳಗೆ ಗ್ರಾಹಕರ ಮನೆ ಬಾಗಿಲಿಗೆ ತಾಜಾ ಮೀನು ತಲುಪಿಸುತ್ತೇವೆ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಸುವರ್ಣತ್ರಿಭುಜ ದೋಣಿ ದುರಂತ: 7 ಮೀನುಗಾರರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ
ಕೆಲವು ತಿಂಗಳುಗಳ ಹಿಂದೆ ಸುವರ್ಣ ತ್ರಿಭುಜ ಮೀನುಗಾರಿಕಾ ದೋಣಿ ಅಪಘಾತವಾಗಿ ಏಳು ಮೀನುಗಾರರು ನಾಪತ್ತೆಯಾಗಿದ್ದರು. ನಾಪತ್ತೆಯಾದ ಮೀನುಗಾರರ ಮೃತದೇಹಗಳೂ ಸಹ ಸಿಕ್ಕಿರಲಿಲ್ಲ. ಹೀಗಾಗಿ ಅವರ ಕುಟುಂಬಗಳಿಗೆ ಸಿಎಂ ಬಿ ಎಸ್ ಯಡಿಯೂರಪ್ಪನವರು ತಲಾ ಹತ್ತು ಲಕ್ಷ ರೂ. ಪರಿಹಾರ ಮಂಜೂರು ಮಾಡಿದ್ದಾರೆ.




