ಯಾದಗಿರಿ: ನದಿಯಲ್ಲಿ ಕೊಚ್ಚಿಕೊಂಡು ಹೋಗ್ತಿದ್ದ 15 ದಿನದ ಹಸುಗೂಸು ರಕ್ಷಣೆ

  • TV9 Web Team
  • Published On - 16:50 PM, 15 Oct 2020
ಯಾದಗಿರಿ: ನದಿಯಲ್ಲಿ ಕೊಚ್ಚಿಕೊಂಡು ಹೋಗ್ತಿದ್ದ 15 ದಿನದ ಹಸುಗೂಸು ರಕ್ಷಣೆ

ಯಾದಗಿರಿ: ಭೀಮಾ ನದಿಯಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ಹಸುಗೂಸನ್ನು ಸ್ಥಳೀಯರು ರಕ್ಷಿಸಿರುವ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನ ರೋಜಾ ಗ್ರಾಮದ ಬಳಿ ನಡೆದಿದೆ. ನದಿಯಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ 15 ದಿನಗಳ ಗಂಡು ಮಗುವನ್ನು ರಕ್ಷಣೆ ಮಾಡಲಾಗಿದೆ.

ಭೀಮಾ ನದಿಯ ಹಿನ್ನೀರು ಗ್ರಾಮಕ್ಕೆ ನುಗ್ಗಿ ಜಲಾವೃತಗೊಂಡಿದ್ದ ಹಿನ್ನೆಲೆಯಲ್ಲಿ ಗ್ರಾಮಸ್ಥರನ್ನು ತೆಪ್ಪದ ಮೂಲಕ ಸುರಕ್ಷಿತ ಜಾಗಕ್ಕೆ ಸ್ಥಳಾಂತರ ಮಾಡಲಾಗುತ್ತಿತ್ತು. ಜನರನ್ನು ಸ್ಥಳಾಂತರಿಸುತ್ತಿದ್ದ ವೇಳೆ ತೆಪ್ಪ ಅಲುಗಾಡಿ ತವಕಲ್ ಮತ್ತು ರಜೀಯಾ ದಂಪತಿಯ 15 ದಿನದ ಕಂದಮ್ಮ ನದಿಗೆ ಬಿದ್ದು ಕೊಚ್ಚಿಕೊಂಡು ಹೋಗುತ್ತಿದ್ದ. ಇದನ್ನು ಕಂಡ ಸ್ಥಳೀಯರು ಹಾಗೂ ಮೀನುಗಾರರು ಕೂಡಲೇ ಗಂಡು ಮಗುವಿನ ರಕ್ಷಣೆ ಮಾಡಿದ್ದಾರೆ. ಜೊತೆಗೆ, ರೋಜಾ ಗ್ರಾಮಸ್ಥರನ್ನ ಸುರಕ್ಷಿತ ಜಾಗಕ್ಕೆ ಸ್ಥಳಾಂತರ ಮಾಡಿದ್ದಾರೆ.