ಬೈಕ್‌ಗೆ ಡಿಕ್ಕಿ ಹೊಡೆದ ಮಿನಿ ಬಸ್.. ಮರಕ್ಕೂ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೂವರ ದುರ್ಮರಣ

ಬೈಕ್‌ಗೆ ಡಿಕ್ಕಿ ಹೊಡೆದ ಮಿನಿ ಬಸ್.. ಮರಕ್ಕೂ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೂವರ ದುರ್ಮರಣ

ಕೊಪ್ಪಳ: ಬೈಕ್, ಮಿನಿ ಬಸ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕುಕನೂರು ತಾಲೂಕಿನ ನಿಟ್ಟಾಲಿ ಗ್ರಾಮದಲ್ಲಿ ನಡೆದಿದೆ. ಮಿನಿ ಬಸ್‌ನಲ್ಲಿದ್ದ ಅಜ್ಜ-ಅಜ್ಜಿ ಹಾಗೂ ಬೈಕ್ ಸವಾರ ಸಾವನ್ನಪ್ಪಿದ್ದಾರೆ. ಬೈಕ್‌ಗೆ ಡಿಕ್ಕಿ ಹೊಡೆದ ಬಳಿಕ ಮಿನಿ ಬಸ್ ಮರಕ್ಕೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಅವಘಡದಲ್ಲಿ ವಾಹನಗಳಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ. ಇನ್ನು ಘಟನೆಯಲ್ಲಿ 9 ಜನರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ಬೆನಕಲ್ ನಿವಾಸಿ ಬೈಕ್​ ಸವಾರ ಸಂತೋಷ್​​(22) […]

KUSHAL V

|

Nov 20, 2020 | 2:38 PM

ಕೊಪ್ಪಳ: ಬೈಕ್, ಮಿನಿ ಬಸ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕುಕನೂರು ತಾಲೂಕಿನ ನಿಟ್ಟಾಲಿ ಗ್ರಾಮದಲ್ಲಿ ನಡೆದಿದೆ. ಮಿನಿ ಬಸ್‌ನಲ್ಲಿದ್ದ ಅಜ್ಜ-ಅಜ್ಜಿ ಹಾಗೂ ಬೈಕ್ ಸವಾರ ಸಾವನ್ನಪ್ಪಿದ್ದಾರೆ.

ಬೈಕ್‌ಗೆ ಡಿಕ್ಕಿ ಹೊಡೆದ ಬಳಿಕ ಮಿನಿ ಬಸ್ ಮರಕ್ಕೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಅವಘಡದಲ್ಲಿ ವಾಹನಗಳಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ. ಇನ್ನು ಘಟನೆಯಲ್ಲಿ 9 ಜನರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ಬೆನಕಲ್ ನಿವಾಸಿ ಬೈಕ್​ ಸವಾರ ಸಂತೋಷ್​​(22) ಮತ್ತು ಬಾದಾಮಿ ತಾಲೂಕಿನ ಅಗಸನಕೊಪ್ಪ ನಿವಾಸಿಗಳಾದ ರಂಗಪ್ಪ ನಾಗಣ್ಣವರ(80) ಹಾಗೂ ಭೀಮವ್ವ ಗೋಡಿ(70) ಎಂದು ಗುರುತಿಸಲಾಗಿದೆ.

Follow us on

Related Stories

Most Read Stories

Click on your DTH Provider to Add TV9 Kannada