ಕೋಲಾರ: ಪಾದರಾಯನಪುರದಲ್ಲಿ ದುಷ್ಟರು ಕೊರೊನಾ ವಾರಿಯರ್ಸ್ ಮೇಲೆ ದಾಳಿ ಮಾಡಿ ದರ್ಪ ಮೆರೆದಿರುವುದನ್ನು ಕಂಡು ಇಡೀ ರಾಜ್ಯವೇ ಬೆಚ್ಚಿಬಿದ್ದಿದೆ. ಇಂತಹ ಸಂದಿಗ್ಧ ಸಮಯದಲ್ಲಿ ಗೂಂಡಾಗಿರಿ ನಡೆದ ಬಳಿಕ ಪಾದರಾನಪುರದಿಂದ ಕೋಲಾರ ತಾಲೂಕಿನ ಶಿಳ್ಳಂಗೆರೆ ಗ್ರಾಮಕ್ಕೆ ಐವರು ಪುಂಡರು ಬಂದಿರುವುದು ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ.
ಶಿಳ್ಳಂಗೆರೆ ಗ್ರಾಮಕ್ಕೆ ಭೇಟಿ ನೀಡಿದ ಆರೋಗ್ಯ ಅಧಿಕಾರಿಗಳು ಐವರನ್ನು ಕ್ವಾರಂಟೈನ್‌ಗೆ ಕಳುಹಿಸಿದ್ದಾರೆ. ಐವರ ರಕ್ತ ಹಾಗೂ ಗಂಟಲು ದ್ರವದ ಮಾದರಿ ಪ್ರಯೋಗಾಲಯಕ್ಕೆ ಆರೋಗ್ಯಾಧಿಕಾರಿಗಳು ಕಳುಹಿಸಿದ್ದಾರೆ. ಸಮಾಧಾನಕರ ಸಂಗತಿಯೆಂದರೆ ಕೋಲಾರ ಜಿಲ್ಲೆಯಲ್ಲಿ ಇದುವರೆಗೂ ಕೊರೊನಾ ಸೋಂಕು ಪತ್ತೆಯಾಗಿಲ್ಲ. ಆದ್ರೆ ಇವರು ಬೆಂಗಳೂರಿನಿಂದ ಕೋಲಾರಕ್ಕೆ ಬಂದಿರುವುದರಿಂದ ಸುತ್ತಮುತ್ತಲ ಗ್ರಾಮದ ಜನರು ಆತಂಕಂಕ್ಕೆ ಒಳಗಾಗಿದ್ದಾರೆ.