AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೇಸು ಪ್ರತಿಮೆ ನಿರ್ಮಾಣ: ಡಿಕೆಶಿ ವಿರುದ್ಧ ಬಿಜೆಪಿ ಕಿಡಿ, ತಹಶೀಲ್ದಾರ್ ವರ್ಗಾವಣೆ

ರಾಮನಗರ: ಕನಕಪುರ ತಾಲೂಕಿನ ಹಾರೋಬೆಲೆ ಗ್ರಾಮದ ಕಪಾಲಿ ಬೆಟ್ಟದಲ್ಲಿ ವಿಶ್ವದಲ್ಲಿಯೇ ಅತಿ ಎತ್ತರದ ಏಕಶಿಲಾ ಯೇಸು ಪ್ರತಿಮೆ ನಿರ್ಮಾಣಕ್ಕೆ ಭಾರಿ ವಿರೋಧ ವ್ಯಕ್ತವಾಗುತ್ತಿದೆ. ಡಿ. 25 ರಂದು ಕಾಂಗ್ರೆಸ್​ನ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಸ್ವಕ್ಷೇತ್ರದಲ್ಲಿ ಪ್ರತಿಮೆ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿದ್ದರು. ಸ್ವಂತ ಹಣದಿಂದ ಜಮೀನು ಖರೀದಿಸಿ ಡಿಕೆಶಿ ಟ್ರಸ್ಟ್​ಗೆ ನೀಡಿದ್ದಾರೆ. ಆದ್ರೆ ಇಲ್ಲಿ ಪ್ರತಿಮೆ ನಿರ್ಮಾಣವಾದ್ರೆ, ಮತಾಂತರ ನಡೆಯುತ್ತೆ ಎಂಬ ಭಾವನೆಯಿಂದ ಬಿಜೆಪಿ ನಾಯಕರು ಸೇರಿದಂತೆ ಹಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಕೊಟ್ಟ ಭರವಸೆ ಈಡೇರಿಸುವುದು ನನ್ನ ಕರ್ತವ್ಯ: […]

ಯೇಸು ಪ್ರತಿಮೆ ನಿರ್ಮಾಣ: ಡಿಕೆಶಿ ವಿರುದ್ಧ ಬಿಜೆಪಿ ಕಿಡಿ, ತಹಶೀಲ್ದಾರ್ ವರ್ಗಾವಣೆ
ಸಾಧು ಶ್ರೀನಾಥ್​
|

Updated on:Dec 31, 2019 | 3:27 PM

Share

ರಾಮನಗರ: ಕನಕಪುರ ತಾಲೂಕಿನ ಹಾರೋಬೆಲೆ ಗ್ರಾಮದ ಕಪಾಲಿ ಬೆಟ್ಟದಲ್ಲಿ ವಿಶ್ವದಲ್ಲಿಯೇ ಅತಿ ಎತ್ತರದ ಏಕಶಿಲಾ ಯೇಸು ಪ್ರತಿಮೆ ನಿರ್ಮಾಣಕ್ಕೆ ಭಾರಿ ವಿರೋಧ ವ್ಯಕ್ತವಾಗುತ್ತಿದೆ. ಡಿ. 25 ರಂದು ಕಾಂಗ್ರೆಸ್​ನ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಸ್ವಕ್ಷೇತ್ರದಲ್ಲಿ ಪ್ರತಿಮೆ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿದ್ದರು. ಸ್ವಂತ ಹಣದಿಂದ ಜಮೀನು ಖರೀದಿಸಿ ಡಿಕೆಶಿ ಟ್ರಸ್ಟ್​ಗೆ ನೀಡಿದ್ದಾರೆ. ಆದ್ರೆ ಇಲ್ಲಿ ಪ್ರತಿಮೆ ನಿರ್ಮಾಣವಾದ್ರೆ, ಮತಾಂತರ ನಡೆಯುತ್ತೆ ಎಂಬ ಭಾವನೆಯಿಂದ ಬಿಜೆಪಿ ನಾಯಕರು ಸೇರಿದಂತೆ ಹಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಕೊಟ್ಟ ಭರವಸೆ ಈಡೇರಿಸುವುದು ನನ್ನ ಕರ್ತವ್ಯ: ಯೇಸುಕ್ರಿಸ್ತನ ಪ್ರತಿಮೆ ನಿರ್ಮಾಣಕ್ಕೆ ನಾನು ಎರಡೂವರೆ ವರ್ಷದ ಹಿಂದೆಯೇ ಪ್ಲ್ಯಾನ್ ಮಾಡಿದ್ದೆ. ಅಲ್ಲಿನ ಜನರಿಗೆ ಕೊಟ್ಟ ಭರವಸೆ ಈಡೇರಿಸುವುದು ನನ್ನ ಕರ್ತವ್ಯ ಎಂದು ಬಿಜೆಪಿ ನಾಯಕರ ಆರೋಪ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಕೇವಲ ಯೇಸು ಪ್ರತಿಮೆಗೆ ಮಾತ್ರ ಸಹಾಯ ಮಾಡುತ್ತಿಲ್ಲ, ಹಿಂದೂ ದೇಗುಲ ನಿರ್ಮಾಣಕ್ಕೂ ಸಹಾಯ ಮಾಡಿದ್ದೇನೆ. ಅಲ್ಲದೆ, ಪ್ರತಿಮೆ ನಿರ್ಮಾಣ ಮಾಡ್ತಿರುವ ಜಾಗ ಗೋಮಾಳದ್ದು. ಆದ್ರೂ ಆ ಜಾಗಕ್ಕೆ ಯಾವುದೇ ರೀತಿಯ ಸಮಸ್ಯೆ ಇಲ್ಲ ಎಂದು ಬೆಂಗಳೂರಿನಲ್ಲಿ ಡಿಕೆಶಿ ಸ್ಪಷ್ಟಪಡಿಸಿದ್ದಾರೆ.

ಜೈಲಿನಲ್ಲಿದ್ದ ಕಾರಣ ಹಣ ನೀಡಲು ಆಗಿರಲಿಲ್ಲ: ಯೇಸುಕ್ರಿಸ್ತನ ಪ್ರತಿಮೆಯನ್ನು ಸೇವಾಮನೋಭಾವದಿಂದ ಮಾಡುತ್ತಿದ್ದೇನೆ. ನನಗೆ ಯಾವುದೇ ರೀತಿಯ ಪ್ರಚಾರದ ಅವಶ್ಯಕತೆಯಿಲ್ಲ. ಈ ಹಿಂದೆಯೇ ನಾನು ಅವರಿಗೆ ಹಣ ನೀಡಬೇಕಾಗಿತ್ತು. ಆದ್ರೆ, ಜೈಲಿನಲ್ಲಿದ್ದ ಕಾರಣ ಹಣವನ್ನು ನೀಡುವುದಕ್ಕೆ ಆಗಿರಲಿಲ್ಲ. ಅದಕ್ಕೆ ಯಾವುದೇ ಪ್ರತಿಫಲ ಬಯಸದೆ ಭೂಮಿ ನೀಡಿದ್ದೇವೆ ಎಂದರು.

ತಹಶೀಲ್ದಾರ್ ವರ್ಗಾವಣೆ: ಕನಕಪುರದ ಕಪಾಲ ಬೆಟ್ಟದಲ್ಲಿ ಯೇಸು ಕ್ರಿಸ್ತನ ಪ್ರತಿಮೆ ನಿರ್ಮಾಣ ವಿವಾದಕ್ಕೆ ಸಂಬಂಧಿಸಿ ಸರ್ಕಾರಕ್ಕೆ ವರದಿ ನೀಡುವ ಮುನ್ನವೇ ತಹಶೀಲ್ದಾರ್ ಎತ್ತಂಗಡಿಯಾಗಿದ್ದಾರೆ. ಕನಕಪುರ ತಹಶೀಲ್ದಾರ್ ಆನಂದಯ್ಯ ವರ್ಗಾವಣೆ ಮಾಡಿ ಸರ್ಕಾರ ಆದೇಶ ನೀಡಿದೆ. ಆನಂದಯ್ಯ ಸ್ಥಾನಕ್ಕೆ ಚಾಮರಾಜನಗರ ಜಿಲ್ಲೆ ಯಳಂದೂರು ತಹಶೀಲ್ದಾರ್ ವರ್ಷಾರನ್ನು ಕನಕಪುರಕ್ಕೆ ವರ್ಗಾವಣೆ ಮಾಡಲಾಗಿದೆ. ಯೇಸು ಪ್ರತಿಮೆ ವಿವಾದ ಸಂಬಂಧ ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾಡಳಿತಕ್ಕೆ ಕಂದಾಯ ಸಚಿವ ಆರ್.ಅಶೋಕ್ ಸೂಚಿಸಿದ್ದರು.

ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ ಸೂಚನೆ ಮೇರೆಗೆ ಡಿಸೆಂಬರ್ 28ರಂದು ಕಪಾಲ ಬೆಟ್ಟಕ್ಕೆ ಅಧಿಕಾರಿಗಳ ತಂಡ ಭೇಟಿ ನೀಡಿತ್ತು. ಎಸಿ ದಾಕ್ಷಾಯಿಣಿ ಜೊತೆ ತಹಶೀಲ್ದಾರ್ ಆನಂದಯ್ಯ ಸೇರಿದಂತೆ ಅಧಿಕಾರಿಗಳ ತಂಡ ಕಪಾಲ ಬೆಟ್ಟಕ್ಕೆ ಭೇಟಿ ನೀಡಿತ್ತು. ಪ್ರಕರಣದ ವರದಿ ಸಲ್ಲಿಕೆ ಜವಾಬ್ದಾರಿ ತಹಶೀಲ್ದಾರ್ ಆನಂದಯ್ಯ ಮೇಲಿತ್ತು ಎನ್ನಲಾಗಿದೆ. ಇದೀಗ ರಾಜ್ಯ ಸರ್ಕಾರ ಆನಂದಯ್ಯರನ್ನ ವರ್ಗಾವಣೆ ಮಾಡಿ ಆದೇಶ ಮಾಡಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

Published On - 9:07 am, Tue, 31 December 19

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು