ಪೌರತ್ವದ ಜ್ವಾಲೆಗೆ ಧಗಧಗಿಸಿದ ಮಂಗಳೂರು, ಫೈರಿಂಗ್​ನಲ್ಲಿ ಇಬ್ಬರು ಸಾವು

|

Updated on: Dec 31, 2019 | 8:41 AM

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ಉಗ್ರ ಸ್ವರೂಪ ಪಡೆದುಕೊಂಡಿತ್ತು. ಪೊಲೀಸರ ಗುಂಡೇಟಿನಿಂದ ಮಂಗಳೂರಿನಲ್ಲಿ ಇಬ್ಬರು ಮೃತಪಟ್ಟಿದ್ದರು. ಇಂದಿನ ಪ್ರತಿಭಟನೆ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಪಿ.ಎಸ್​.ಹರ್ಷಾ ಮತ್ತು ಧಾರ್ಮಿಕ ಮುಖಂಡರು ಜಂಟಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದರು. ಪ್ರತಿಭಟನೆ ವೇಳೆ ಗುಂಡೇಟಿನಿಂದ ಇಬ್ಬರು ಮೃತಪಟ್ಟಿದ್ದಾರೆ. ಗಲಾಟೆ ವೇಳೆ ಕಂದಕ್ ನಿವಾಸಿ ಜಲೀಲ್(49) ಮತ್ತು ಬೆಂಗ್ರೆ ನಿವಾಸಿ ನೌಶೀನ್(23) ಸಾವಿಗೀಡಾಗಿದ್ದಾರೆ. ಮೃತರ ಕುಟುಂಬಕ್ಕೆ ಪರಿಹಾರ ನೀಡುವಂತೆ ಸುದ್ದಿಗೋಷ್ಠಿಯಲ್ಲಿ […]

ಪೌರತ್ವದ ಜ್ವಾಲೆಗೆ ಧಗಧಗಿಸಿದ ಮಂಗಳೂರು, ಫೈರಿಂಗ್​ನಲ್ಲಿ ಇಬ್ಬರು ಸಾವು
Follow us on

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ಉಗ್ರ ಸ್ವರೂಪ ಪಡೆದುಕೊಂಡಿತ್ತು. ಪೊಲೀಸರ ಗುಂಡೇಟಿನಿಂದ ಮಂಗಳೂರಿನಲ್ಲಿ ಇಬ್ಬರು ಮೃತಪಟ್ಟಿದ್ದರು.

ಇಂದಿನ ಪ್ರತಿಭಟನೆ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಪಿ.ಎಸ್​.ಹರ್ಷಾ ಮತ್ತು ಧಾರ್ಮಿಕ ಮುಖಂಡರು ಜಂಟಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದರು. ಪ್ರತಿಭಟನೆ ವೇಳೆ ಗುಂಡೇಟಿನಿಂದ ಇಬ್ಬರು ಮೃತಪಟ್ಟಿದ್ದಾರೆ. ಗಲಾಟೆ ವೇಳೆ ಕಂದಕ್ ನಿವಾಸಿ ಜಲೀಲ್(49) ಮತ್ತು ಬೆಂಗ್ರೆ ನಿವಾಸಿ ನೌಶೀನ್(23) ಸಾವಿಗೀಡಾಗಿದ್ದಾರೆ. ಮೃತರ ಕುಟುಂಬಕ್ಕೆ ಪರಿಹಾರ ನೀಡುವಂತೆ ಸುದ್ದಿಗೋಷ್ಠಿಯಲ್ಲಿ ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷ ಮಸೂದ್ ಮನವಿ ಮಾಡಿದ್ದರು.

ಪ್ರತಿಭಟನೆ ನಿಯಂತ್ರಿಸಲು ಕರ್ಫ್ಯೂ ಜಾರಿ:
ಮಂಗಳೂರಿನಲ್ಲಿ ಪ್ರತಿಭಟನೆ ತೀವ್ರ ಹಿಂಸಾಚಾರಕ್ಕೆ ತಿರುಗಿತ್ತು. ಪೊಲೀಸರ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದರು. ಪೊಲೀಸರು ಸಹ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಲಾಠಿಚಾರ್ಜ್ ನಡೆಸಿದ್ದರು. ಆದರೂ ಹಿಂಸಾಚಾರ ನಿಂಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಬಳಿಕ ಮಂಗಳೂರು ನಗರದ ಕೇಂದ್ರ ವ್ಯಾಪ್ತಿಯಲ್ಲಿ ಕರ್ಫ್ಯೂ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಪಿ.ಎಸ್​.ಹರ್ಷಾ ಆದೇಶಿಸಿದ್ದರು.