ಕೊರೊನಾ ಗೆದ್ದ ಸಿದ್ದರಾಮಯ್ಯ, ಆಸ್ಪತ್ರೆಯಿಂದ ಡಿಸ್‌ಚಾರ್ಜ್‌

  • TV9 Web Team
  • Published On - 19:33 PM, 13 Aug 2020
ಕೊರೊನಾ ಗೆದ್ದ ಸಿದ್ದರಾಮಯ್ಯ, ಆಸ್ಪತ್ರೆಯಿಂದ ಡಿಸ್‌ಚಾರ್ಜ್‌

ಬೆಂಗಳೂರು: ಕೊರೊನಾ ಸೋಂಕಿನಿಂದಾಗಿ ಆಸ್ಪತ್ರೆ ಸೇರಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಇವತ್ತು ಆಸ್ಪತ್ರೆಯಿಂದ ಡಿಸ್‌ಚಾರ್ಜ್‌ ಆಗಿದ್ದಾರೆ.

ಕಳೆದ ವಾರ ಕೊರೊನಾ ಸೋಂಕಿಗೆ ತುತ್ತಾಗಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಚಿಕಿತ್ಸೆಗಾಗಿ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದರು. ಸತತ ವಾರ ಕಾಲ ಚಿಕಿತ್ಸೆ ಪಡೆದಿರುವ ಸಿದ್ದರಾಮಯ್ಯ, ಈಗ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ಸಿದ್ದರಾಮಯ್ಯ ಸೋಂಕಿನಿಂದ ಗುಣಮಖರಾಗಿದ್ದು, ಕೋವಿಡ್‌ ಮಾರ್ಗಸೂತ್ರಗಳಂತೆ ಅವರನ್ನು ಆಸ್ಪತ್ರೆಯಿಂದ ಡಿಸ್‌ ಚಾರ್ಜ್‌ ಮಾಡಲಾಗಿದೆ. ಮುಂದೆ ನಿಯಮದಂತೆ ಮನೆಯಲ್ಲಿ ಕ್ವಾರಂಟೈನ್‌ ಆಗುವಂತೆ ಅವರಿಗೆ ಸೂಚಿಸಲಾಗಿದೆ ಎಂದು ಮಣಿಪಾಲ್‌ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.