ಶಿಕ್ಷಕರ ಸಮಸ್ಯೆಗೆ ಸ್ಪಂದಿಸಿ.. ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ ಧರಣಿ

ಬೆಂಗಳೂರು:ಶಿಕ್ಷಕರ ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಬೆಂಗಳೂರಿನ ಮೌರ್ಯ ವೃತ್ತದ ಬಳಿ ಮಾಜಿ ಪ್ರಧಾನಿ, ಜನತಾ ದಳದ ರಾಷ್ಟ್ರೀಯ ಅಧ್ಯಕ್ಷ ಎಚ್ ಡಿ ದೇವೇಗೌಡ ತಮ್ಮ ಪಕ್ಷದ ಕಾರ್ಯಕರ್ತರೊಂದಿಗೆ ಪ್ರತಿಭಟನೆ ನಡೆಸಿದರು. ಅನುದಾನರಹಿತ ಶಿಕ್ಷಕರಿಗೆ ವಿಶೇಷ ಪ್ಯಾಕೇಜ್, ಸೇವಾ ಭದ್ರತೆ, ಬಾಕಿ ಆರ್‌ಟಿಇ ಹಣ ಬಿಡುಗಡೆ, ಆರೋಗ್ಯ ವಿಮೆ ಸೇರಿದಂತೆ ಹಲವಾರು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಈ ಧರಣಿ ಮಾಡಲಾಗುತ್ತಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಕೆ ಕುಮಾರಸ್ವಾಮಿ, ಪರಿಷತ್ ಸದಸ್ಯರಾದ ಚೌಡರೆಡ್ಡಿ ತೂಪಲ್ಲಿ, ಬೋಜೇಗೌಡ, ಕೆ ಟಿ […]

ಶಿಕ್ಷಕರ ಸಮಸ್ಯೆಗೆ ಸ್ಪಂದಿಸಿ.. ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ ಧರಣಿ
Edited By:

Updated on: Aug 26, 2020 | 1:52 PM

ಬೆಂಗಳೂರು:ಶಿಕ್ಷಕರ ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಬೆಂಗಳೂರಿನ ಮೌರ್ಯ ವೃತ್ತದ ಬಳಿ ಮಾಜಿ ಪ್ರಧಾನಿ, ಜನತಾ ದಳದ ರಾಷ್ಟ್ರೀಯ ಅಧ್ಯಕ್ಷ ಎಚ್ ಡಿ ದೇವೇಗೌಡ ತಮ್ಮ ಪಕ್ಷದ ಕಾರ್ಯಕರ್ತರೊಂದಿಗೆ ಪ್ರತಿಭಟನೆ ನಡೆಸಿದರು.

ಅನುದಾನರಹಿತ ಶಿಕ್ಷಕರಿಗೆ ವಿಶೇಷ ಪ್ಯಾಕೇಜ್, ಸೇವಾ ಭದ್ರತೆ, ಬಾಕಿ ಆರ್‌ಟಿಇ ಹಣ ಬಿಡುಗಡೆ, ಆರೋಗ್ಯ ವಿಮೆ ಸೇರಿದಂತೆ ಹಲವಾರು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಈ ಧರಣಿ ಮಾಡಲಾಗುತ್ತಿದೆ.

ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಕೆ ಕುಮಾರಸ್ವಾಮಿ, ಪರಿಷತ್ ಸದಸ್ಯರಾದ ಚೌಡರೆಡ್ಡಿ ತೂಪಲ್ಲಿ, ಬೋಜೇಗೌಡ, ಕೆ ಟಿ ಶ್ರೀಕಂಠೇಗೌಡ, ತಿಪ್ಪೇಸ್ವಾಮಿ, ಮಾಜಿ ಪರಿಷತ್ ಸದಸ್ಯ ಟಿ ಎ ಶರವಣ ಪ್ರತಿಭಟನೆಯಲ್ಲಿ ಭಾಗಿಯಾಗಿ ದೇವೇಗೌಡರಿಗೆ ಸಾಥ್‌ ನೀಡಿದರು.