ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಸ್ವತಃ ಆಸ್ಪತ್ರೆಗೆ ದಾಖಲಿಸಿದ ಸಚಿವ ಗೋಪಾಲಯ್ಯ
ಮಂಡ್ಯ: ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸುವ ಮೂಲಕ ಸಚಿವ ಗೋಪಾಲಯ್ಯ ಮಾನವೀಯತೆ ಮೆರೆದಿದ್ದಾರೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್ ಮೇಲ್ಸೇತುವೆ ಮೇಲೆ ನಡೆದಿದ್ದ ಅಪಘಾತದಲ್ಲಿ ಬೈಕ್ ಸವಾರ ಗಣೇಶ್ ಎಂಬ ವ್ಯಕ್ತಿ ಗಾಯಗೊಂಡಿದ್ದ. ಇದೇ ಮಾರ್ಗವಾಗಿ ಬೆಂಗಳೂರಿನಿಂದ ಹಾಸನಕ್ಕೆ ತೆರಳುತ್ತಿದ್ದ ಸಚಿವ ಗೋಪಾಲಯ್ಯ, ಅಪಘಾತ ಗಮನಿಸಿ ಗಾಯಗೊಂಡಿದ್ದ ಗಣೀಶ್‌ನ ನೆರವಿಗೆ ಧಾವಿಸಿದ್ದಾರೆ. ಸ್ವತಃ ತಾವೇ ಆಂಬ್ಯುಲೆನ್ಸ್ ಕರೆಸಿ ಗಾಯಾಳುವನ್ನು ಬಿ.ಜಿ.ನಗರದ ಆದಿಚುಂಚನಗಿರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ್ದಾರೆ. ನಂತರ […]
Follow us on
ಮಂಡ್ಯ: ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸುವ ಮೂಲಕ ಸಚಿವ ಗೋಪಾಲಯ್ಯ ಮಾನವೀಯತೆ ಮೆರೆದಿದ್ದಾರೆ.
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್ ಮೇಲ್ಸೇತುವೆ ಮೇಲೆ ನಡೆದಿದ್ದ ಅಪಘಾತದಲ್ಲಿ ಬೈಕ್ ಸವಾರ ಗಣೇಶ್ ಎಂಬ ವ್ಯಕ್ತಿ ಗಾಯಗೊಂಡಿದ್ದ. ಇದೇ ಮಾರ್ಗವಾಗಿ ಬೆಂಗಳೂರಿನಿಂದ ಹಾಸನಕ್ಕೆ ತೆರಳುತ್ತಿದ್ದ ಸಚಿವ ಗೋಪಾಲಯ್ಯ, ಅಪಘಾತ ಗಮನಿಸಿ ಗಾಯಗೊಂಡಿದ್ದ ಗಣೀಶ್‌ನ ನೆರವಿಗೆ ಧಾವಿಸಿದ್ದಾರೆ.
ಸ್ವತಃ ತಾವೇ ಆಂಬ್ಯುಲೆನ್ಸ್ ಕರೆಸಿ ಗಾಯಾಳುವನ್ನು ಬಿ.ಜಿ.ನಗರದ ಆದಿಚುಂಚನಗಿರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ್ದಾರೆ. ನಂತರ ಅಪಘಾತ ಸಂಭವಿಸಿದ ವ್ಯಾಪ್ತಿಯ ಬೆಳ್ಳೂರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.