3 ವರ್ಷದ ಮಗುವನ್ನ ಕೊಂದಿದ್ದ ನರಭಕ್ಷಕ ಚಿರತೆ ಸಂಹಾರಕ್ಕೆ ಮುಹೂರ್ತ ಫಿಕ್ಸ್?

ತುಮಕೂರು: ಕಲ್ಪತರುನಾಡು ತುಮಕೂರಿನಲ್ಲಿ ನರಭಕ್ಷಕ ಚಿರತೆ ಮತ್ತೆ ಅಟ್ಟಹಾಸ ಮೆರೆದಿದ್ದು, ಹೆಬ್ಬೂರು ಹೋಬಳಿಯ ಬೈಚೇನಹಳ್ಳಿ ಗ್ರಾಮದಲ್ಲಿ ಮೂರು ವರ್ಷದ ಚಂದನಾ ಮೇಲೆ ಚಿರತೆ ಅಟ್ಯಾಕ್ ಮಾಡಿದೆ. ಪ್ರಕರಣ ಸಂಬಂಧ ನರಭಕ್ಷಕ ಚಿರತೆಯನ್ನು ಕಂಡಲ್ಲಿ ಗುಂಡಿಕ್ಕಿ ಕೊಲ್ಲಲು ರಾಜ್ಯ ಸರ್ಕಾರ ಆದೇಶಿಸಿದೆ. ಘಟನಾ ಸ್ಥಳಕ್ಕೆ ಅರಣ್ಯ ಸಚಿವ ಆನಂದ್ ಸಿಂಗ್ ಭೇಟಿ ನೀಡಿ ಬಾಲಕಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಆನಂದ್ ಸಿಂಗ್ ಎದುರು ನ್ಯಾಯಕ್ಕಾಗಿ ಬೈಚೇನಹಳ್ಳಿಯ ಗ್ರಾಮಸ್ಥರು ಆಗ್ರಹಿಸಿದರು. DFO, ಅರಣ್ಯ ಇಲಾಖೆ ಅಧಿಕಾರಿಗಳ ಅಮಾನತಿಗೆ ಒತ್ತಾಯಿಸಿದರು. ಇದೇ […]

3 ವರ್ಷದ ಮಗುವನ್ನ ಕೊಂದಿದ್ದ ನರಭಕ್ಷಕ ಚಿರತೆ ಸಂಹಾರಕ್ಕೆ ಮುಹೂರ್ತ ಫಿಕ್ಸ್?
Follow us
ಸಾಧು ಶ್ರೀನಾಥ್​
|

Updated on: Mar 01, 2020 | 1:12 PM

ತುಮಕೂರು: ಕಲ್ಪತರುನಾಡು ತುಮಕೂರಿನಲ್ಲಿ ನರಭಕ್ಷಕ ಚಿರತೆ ಮತ್ತೆ ಅಟ್ಟಹಾಸ ಮೆರೆದಿದ್ದು, ಹೆಬ್ಬೂರು ಹೋಬಳಿಯ ಬೈಚೇನಹಳ್ಳಿ ಗ್ರಾಮದಲ್ಲಿ ಮೂರು ವರ್ಷದ ಚಂದನಾ ಮೇಲೆ ಚಿರತೆ ಅಟ್ಯಾಕ್ ಮಾಡಿದೆ. ಪ್ರಕರಣ ಸಂಬಂಧ ನರಭಕ್ಷಕ ಚಿರತೆಯನ್ನು ಕಂಡಲ್ಲಿ ಗುಂಡಿಕ್ಕಿ ಕೊಲ್ಲಲು ರಾಜ್ಯ ಸರ್ಕಾರ ಆದೇಶಿಸಿದೆ.

ಘಟನಾ ಸ್ಥಳಕ್ಕೆ ಅರಣ್ಯ ಸಚಿವ ಆನಂದ್ ಸಿಂಗ್ ಭೇಟಿ ನೀಡಿ ಬಾಲಕಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಆನಂದ್ ಸಿಂಗ್ ಎದುರು ನ್ಯಾಯಕ್ಕಾಗಿ ಬೈಚೇನಹಳ್ಳಿಯ ಗ್ರಾಮಸ್ಥರು ಆಗ್ರಹಿಸಿದರು. DFO, ಅರಣ್ಯ ಇಲಾಖೆ ಅಧಿಕಾರಿಗಳ ಅಮಾನತಿಗೆ ಒತ್ತಾಯಿಸಿದರು. ಇದೇ ವೇಳೆ ಸಚಿವ ಆನಂದ್ ಸಿಂಗ್ ಎದುರು ಬಾಲಕಿ ಕುಟುಂಬಸ್ಥರು ಅಳಲು ತೊಡಿಕೊಂಡರು. ಪುಟ್ಟ ಕಂದಮ್ಮನನ್ನು ಕೊಂದ ಚಿರತೆಯನ್ನು ಗುಂಡಿಕ್ಕಿ ಕೊಲ್ಲುವಂತೆ ಗ್ರಾಮಸ್ಥರು ತಾಕೀತು ಮಾಡಿದರು.

ಮೃತ ಬಾಲಕಿ ಕುಟುಂಬಕ್ಕೆ ಪರಿಹಾರ: ಕುಟುಂಬಸ್ಥರ ನೋವು ಆಲಿಸಿದ ಸಚಿವ ಆನಂದ್ ಸಿಂಗ್, ಚಿರತೆ ದಾಳಿಗೆ ಬಲಿಯಾದ ಬಾಲಕಿ ಕುಟುಂಬಕ್ಕೆ ಸರ್ಕಾರದಿಂದ 7.5 ಲಕ್ಷ ರೂ. ಪರಿಹಾರ ಕೊಡುವುದಾಗಿ ಹೇಳಿದರು. 5 ವರ್ಷಗಳ ಕಾಲ ಬಾಲಕಿ ಕುಟುಂಬಕ್ಕೆ 2,000 ರೂ. ಮಾಸಾಶನ ನೀಡುವುದಾಗಿ ಭರವಸೆ ನೀಡಿದರು.

ಚಿರತೆ ಹಾವಳಿ ತಡೆಗೆ ಕ್ರಮ: ಇದಕ್ಕೂ ಮುನ್ನ ಘಟನಾ ಸ್ಥಳಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಸಾಂತ್ವನ ಹೇಳಿದರು. ಅರಣ್ಯ ಸಚಿವ ಆನಂದ್ ಸಿಂಗ್ ಜತೆ ಚರ್ಚೆ ಮಾಡಿ ಚಿರತೆಯನ್ನು ಸಾಯಿಸಲು ಆದೇಶಿಸಲಾಗಿದೆ. ನಾಳೆ ಬೆಳಗ್ಗೆಯೇ ಚಿರತೆ ಶೂಟ್ ಮಾಡಲು ಕಾರ್ಯಾಚರಣೆ ಕೈಗೊಳ್ಳುತ್ತಾರೆ. ಕೂಡಲೇ ಜಿಲ್ಲಾಡಳಿತ, ಸ್ಥಳೀಯ ಆಡಳಿತ ಸಭೆ ಕರೆದು ಚಿರತೆ ಹಾವಳಿ ತಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಮಾಧುಸ್ವಾಮಿ ಭರವಸೆ ನೀಡಿದರು.

ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ